ಕ್ರೀಡೆ

IPL 2024: ತವರಿನಂಗಳದಲ್ಲಿ ಲಖನೌ ವಿರುದ್ಧ ಹೀನಾಯ ಸೋಲು ಅನುಭವಿಸಿದ ಆರ್‌ಸಿಬಿ!

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ರ ಲೀಗ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ವಿರುದ್ಧ ಲಖನೌ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) 29 ರನ್‌ಗಳ ಅಂತರದ ಗೆಲುವು ದಾಖಲಿಸಿದೆ.

ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಲಖನೌ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಿ, 182 ರನ್‌ಗಳ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಆರ್‌ಸಿಬಿ ತಂಡ ನಿಗದಿತ 19.4 ಓವರ್‌ಗಳಲ್ಲಿ ಆಲ್‌ಔಟ್‌ ಆಗುವ ಮೂಲಕ 153ರನ್‌ ಗಳಿಸಲಷ್ಟೇ ಶಕ್ತವಾಯಿತು.

ಲಖನೌ ಇನಿಂಗ್ಸ್‌: ಲಖನೌ ಗೆ ನಾಯಕ ಕೆ.ಎಲ್‌ ರಾಹುಲ್‌ ಅವರಿಂದ ಮತ್ತೊಮ್ಮೆ ನಿರೀಕ್ಷಿತ ಇನಿಂಗ್ಸ್‌ ಕಂಡು ಬರಲಿಲ್ಲ. ರಾಹುಲ್‌ ಕೇವಲ 20 ರನ್‌ ಗಳಿಸಿ ಔಟಾದರು. ಉಳಿದ ಬ್ಯಾಟರ್‌ಗಳಿಂದ ಉತ್ತಮ ಆಟ ಕಂಡು ಬರಲಿಲ್ಲ. ಆರಂಭಿಕ ಬ್ಯಾಟರ ಕ್ವಿಂಟನ್ ಡಿಕಾಕ್ 56 ಎಸೆತಗಳಲ್ಲಿ 8 ಬೌಂಡರಿ, 5 ಸಿಕ್ಸರ್ ಸಹಿತ 81 ರನ್ ಸಿಡಿಸಿದರು. ತಂಡ ಒಂದೊಂದೆ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದರೂ ಮತ್ತೊಂದೆಡೆ ಸುಭದ್ರವಾಗ ನಿಂತು ಇನ್ನಿಂಗ್ಸ್‌ ಕಟ್ಟಿದರು. ಕಾಕ್‌ ನಿರ್ಗಮನದ ನಂತರ ಕೊನೆಯಲ್ಲಿ ಅಬ್ಬರಿಸಿದ ನಿಕೊಲಸ್ ಪೂರನ್ 21 ಎಸೆತಗಳಲ್ಲಿ 5 ಸಿಕ್ಸರ್ 1 ಬೌಂಡರಿ ಸಹಿತ ಅಜೇಯ 40 ರನ್ ಸಿಡಿಸಿ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸುವಲ್ಲಿ ನೆರವಾದರು. ಉಳಿದಂತೆ ಮಾರ್ಕಸ್ ಸ್ಟೋಯನಿಸ್ 24ರನ್ ಗಳಿಸಿದರು.

ಆರ್‌ಸಿಬಿ ಪರ ಗ್ಲೆನ್ ಮ್ಯಾಕ್ಸ್‌ವೆಲ್ 2 ವಿಕೆಟ್, ಮೊಹಮ್ಮದ್ ಸಿರಾಜ್, ದಯಾಳ್ ಮತ್ತು ಟಾಪ್ಲಿ ತಲಾ ಒಂದೊಂದು ವಿಕೆಟ್ ಪಡೆದರು.

ಆರ್‌ಸಿಬಿ ಇನ್ನಿಂಗ್ಸ್‌: ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಅರ್‌ಸಿಬಿಗೆ ನಾಯಕ ಫಾಫ್‌ ಮತ್ತು ವಿರಾಟ್‌ ಕೊಹ್ಲಿ ಉತ್ತಮ ಇನ್ನಿಂಗ್ಸ್‌ ಕಟ್ಟುವ ಭರವಸೆ ನೀಡಿದರು. ಆದರೆ ವಿರಾಟ್‌ 22 ರನ್‌ ಗಳಿಸಿ ಸಿದ್ದಾರ್ಥ್‌ಗೆ ವಿಕೆಟ್‌ ಒಪ್ಪಿಸಿ ಹೊರ ನಡೆದರು. 19 ರನ್‌ ಗಳಿಸಿ ಆಟವಾಡುತ್ತಿದ್ದ ನಾಯಕ ಫಾಫ್‌ ಮುಂದಿನ ಓವರ್‌ನಲ್ಲಿಯೇ ಇಲ್ಲದ ರನ್‌ ಕದಿಯಲು ಹೋಗಿ ರನ್‌ಔಟ್‌ ಆಗಿ ಪೆವಿಲಿಯನ್‌ ಸೇರಿದರು.

ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳಾದ ಮ್ಯಾಕ್ಸ್‌ವೆಲ್‌ ಶೂನ್ಯಕ್ಕೆ ಔಟಾದರೇ, ಕ್ಯಾಮರೋನ್‌ ಗ್ರೀನ್‌ 9 ರನ್‌ ಗಳಿಸಿ ನಿರ್ಗಮಿಸಿದರು. ರಜತ್‌ ಪಟಿದರ್‌ 29, ಅನುಜ್‌ ರಾವತ್‌ 11, ದಿನೇಶ್‌ ಕಾರ್ತಿಕ್‌ 4, ಮಾಯಾಂಕ್‌ ಡಾಗರ್‌ ಸೊನ್ನೆ ಸುತ್ತಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ಇಂಪ್ಯಾಕ್ಟ್‌ ಪ್ಲೇಯರ್‌ ಲೋಮ್‌ರೋರ್‌ ಕೇವಲ 13 ಎಸೆತಗಳಲ್ಲಿ 3 ಸಿಕ್ಸರ್‌ ಮತ್ತು 3 ಬೌಂಡರಿ ಸಹಿತ 33 ರನ್‌ ಕಲೆಹಾಕಿ ಕೊಂಚ ಕಾಡಿದರು ಸಹಾ ಗೆಲುವು ತಂದುಕೊಡುವಲ್ಲಿ ವಿಫಲರಾದರು. ಉಳಿದಂತೆ ಟಾಪ್ಲಿ 3, ಸಿರಾಜ್‌ 12 ರನ್‌ ಗಳಿಸಿದರು ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಲಖನೌ ಪರ ಮಾಯಾಂಕ್‌ ಯಾದವ್‌ 3, ಸಿದ್ದಾರ್ಥ್‌, ನವೀನ್‌ ಉಲ್‌-ಹಕ್‌ 2, ಸಿದ್ದಾರ್ಥ್‌, ಸ್ಟೋಯ್ನೀಸ್‌ ಹಾಗೂ ಯಶ್‌ ಠಾಕೂರ್‌ ತಲಾ ಒಂದು ವಿಕೆಟ್‌ ಪಡೆದು ಮಿಂಚಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

7 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

7 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

9 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

11 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

15 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

15 hours ago