ಮುಂಬೈ: ಜಸ್‌ಪ್ರಿತ್ ಬುಮ್ರಾ ಮಾರಕ ದಾಳಿ ಹಾಗೂ ಸೂರ್ಯಕುಮಾರ್ ಯಾದವ್ ಅವರ ಅಮೋಘ ಆಟದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿದೆ.
ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಹಾಗೂ ಆರ್‌ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈ 15.3 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್ ಬಾರಿಸಿ 7 ವಿಕೆಟ್‌ಗಳ ಅಂತರದ ಜಯ ಸಾಧಿಸಿತು.
ಆರ್‌ಸಿಬಿ ಇನ್ನಿಂಗ್ಸ್: ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ವಿರಾಟ್ ಕೊಹ್ಲಿ ಕೇವಲ 3 ರನ್‌ಗಳಿಸಿ ಔಟಾದರು. ಮೊದಲ ಬಾರಿಗೆ ಮೈದಾನಕ್ಕಿಳಿದ ವಿಲ್ ಜಾಕ್ 8ರನ್‌ಗೆ ಸುಸ್ತಾದರು. ಬಳಿಕ ಒಂದಾದ ನಾಯಕ ಫಾಫ್ ಡುಪ್ಲೆಸ್ಸಿ ಹಾಗೂ ರಜತ್ ಪಟಿದರ್ ತಂಡಕ್ಕೆ ಚೇತರಿಕೆ ಆಟವಾಡಿದರು. ಫಾಫ್ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್ ಬಾರಿಸಿದರೇ, ಪಾಟಿದರ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.
ಉಳಿದಂತೆ ಮ್ಯಾಕ್ಸ್‌ವೆಲ್ ಶೂನ್ಯ, ಲೋಮ್‌ರೋರ್ 0, ಸೌರವ್ 9, ವೈಶಾಖ್ 0 ಸಂಪಾದಿಸಿ ಪೆವಿಲಿಯನ್ ಸೇರಿದರು. ಕೊನೆಯಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿ ತಂಡದ ಮೊತ್ತವನ್ನು ಇನ್ನೂರರ ಸಮೀಪಕ್ಕೆ ಕೊಂಡೊಯ್ದರು.
ಮುಂಬೈ ಪರ ವೇಗಿ ಜಸ್ಪ್ರೀತ್ ಬುಮ್ರಾ 4 ಓವರ್ ಬೌಲ್ ಮಾಡಿ 21 ರನ್ ನೀಡಿ ಪ್ರಮುಖ 5 ವಿಕೆಟ್ ಕಬಳಿಸಿದರು. ಕಾಟ್ಜಿ, ಶ್ರೇಯಸ್ ಹಾಗೂ ಮಧ್ವಾಲ್ ತಲಾ ಒಂದು ವಿಕೆಟ್ ಪಡೆದರು.
ಮುಂಬೈ ಇನ್ನಿಂಗ್ಸ್: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಉತ್ತಮ ಆರಂಭ ದೊರೆಯಿತು. ಆರಂಭದಿಂದಲೇ ಭರ್ಜರಿ ಫಾರ್ಮ್ ನಲ್ಲಿ ಕಂಡು ಬಂದ ರೋಹಿತ್ ಹಾಗೂ ಕಿಶಾನ್ ಪವರ್ ಪ್ಲೇ ನಲ್ಲಿ ಆರ್‌ಸಿಬಿ ಬೌಲರ್‌ಗಳ ಬೆಂಡೆತ್ತಿದರು. ರೋಹಿತ್ 38 ರನ್ ಗಳಿಸಿ ಔಟಾದರು. ಬಳಿಕ ಬಂದ ಸೂರ್ಯಕುಮಾರ್ ಯಾದವ್ ಕೇವಲ 19 ಎಸೆತಗಳಲ್ಲಿ 5ಬೌಂಡರಿ, 4ಸಿಕ್ಸರ್ ಸಹಿತ 52 ರನ್ ಚಚ್ಚಿದರು. ಇಶಾನ್ ಕಿಸಾನ್ 34 ಎಸೆತಗಳಲ್ಲಿ 7ಬೌಂಡರಿ ಹಾಗೂ 5 ಸಿಕ್ಸರ್ ಸಹಿತ 69 ಗಳಿಸಿ ತಂಡಕ್ಕೆ ನೆರವಾದರು.
ನಾಯಕ ಹಾರ್ದಿಕ್ ಪಾಂಡ್ಯ 21 ಮತ್ತು ತಿಲಕ್ ವರ್ಮಾ 16 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಆರ್‌ಸಿಬಿ ಪರ ಆಕಾಶ್ ದೀಪ್, ವಿಲ್ ಜಾಕ್ ಹಾಗೂ ವೈಶಾಖ್ ತಲಾ ಒಂದೊಂದು ವಿಕೆಟ್ ಪಡೆದರು.
ಪಂದ್ಯ ಶ್ರೇಷ್ಠ: ಜಸ್‌ಪ್ರಿತ್ ಬುಮ್ರಾ.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…