ಕ್ರೀಡೆ

IPL 2024: ಮುಂಬೈ ವಿರುದ್ಧ ಆರ್‌ಸಿಬಿಗೆ ಹೀನಾಯ ಸೋಲು!

ಮುಂಬೈ: ಜಸ್‌ಪ್ರಿತ್‌ ಬುಮ್ರಾ ಮಾರಕ ದಾಳಿ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಮೋಘ ಆಟದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್‌ ಭರ್ಜರಿ ಗೆಲುವು ದಾಖಲಿಸಿದೆ.

ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಹಾಗೂ ಆರ್​ಸಿಬಿ ನಡುವಿನ 25ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿ ತಂಡ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಈ ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈ 15.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 199 ರನ್‌ ಬಾರಿಸಿ 7 ವಿಕೆಟ್‌ಗಳ ಅಂತರದ ಜಯ ಸಾಧಿಸಿತು.

ಆರ್‌ಸಿಬಿ ಇನ್ನಿಂಗ್ಸ್‌: ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಆರ್‌ಸಿಬಿಗೆ ಆರಂಭಿಕ ಆಘಾತ ಉಂಟಾಯಿತು. ವಿರಾಟ್‌ ಕೊಹ್ಲಿ ಕೇವಲ 3 ರನ್‌ಗಳಿಸಿ ಔಟಾದರು. ಮೊದಲ ಬಾರಿಗೆ ಮೈದಾನಕ್ಕಿಳಿದ ವಿಲ್‌ ಜಾಕ್‌ 8ರನ್‌ಗೆ ಸುಸ್ತಾದರು. ಬಳಿಕ ಒಂದಾದ ನಾಯಕ ಫಾಫ್ ಡುಪ್ಲೆಸ್ಸಿ ಹಾಗೂ ರಜತ್‌ ಪಟಿದರ್‌ ತಂಡಕ್ಕೆ ಚೇತರಿಕೆ ಆಟವಾಡಿದರು. ಫಾಫ್‌ 40 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 61 ರನ್​ ಬಾರಿಸಿದರೇ, ಪಾಟಿದರ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 50 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು.

ಉಳಿದಂತೆ ಮ್ಯಾಕ್ಸ್‌ವೆಲ್‌ ಶೂನ್ಯ, ಲೋಮ್‌ರೋರ್‌ 0, ಸೌರವ್‌ 9, ವೈಶಾಖ್‌ 0 ಸಂಪಾದಿಸಿ ಪೆವಿಲಿಯನ್‌ ಸೇರಿದರು. ಕೊನೆಯಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ ಕೇವಲ 23 ಎಸೆತಗಳಲ್ಲಿ 5 ಬೌಂಡರಿ ಹಾಗೂ 4 ಸಿಕ್ಸರ್ ಸಹಿತ ಅಜೇಯ 53 ರನ್ ಕಲೆಹಾಕಿ ತಂಡದ ಮೊತ್ತವನ್ನು ಇನ್ನೂರರ ಸಮೀಪಕ್ಕೆ ಕೊಂಡೊಯ್ದರು.

ಮುಂಬೈ ಪರ ವೇಗಿ ಜಸ್ಪ್ರೀತ್ ಬುಮ್ರಾ 4 ಓವರ್ ಬೌಲ್ ಮಾಡಿ 21 ರನ್ ನೀಡಿ ಪ್ರಮುಖ 5 ವಿಕೆಟ್ ಕಬಳಿಸಿದರು. ಕಾಟ್ಜಿ, ಶ್ರೇಯಸ್‌ ಹಾಗೂ ಮಧ್ವಾಲ್‌ ತಲಾ ಒಂದು ವಿಕೆಟ್‌ ಪಡೆದರು.

ಮುಂಬೈ ಇನ್ನಿಂಗ್ಸ್‌: ಸ್ಪರ್ಧಾತ್ಮಕ ಮೊತ್ತ ಬೆನ್ನತ್ತಿದ ಮುಂಬೈಗೆ ಉತ್ತಮ ಆರಂಭ ದೊರೆಯಿತು. ಆರಂಭದಿಂದಲೇ ಭರ್ಜರಿ ಫಾರ್ಮ್‌ ನಲ್ಲಿ ಕಂಡು ಬಂದ ರೋಹಿತ್‌ ಹಾಗೂ ಕಿಶಾನ್‌ ಪವರ್‌ ಪ್ಲೇ ನಲ್ಲಿ ಆರ್‌ಸಿಬಿ ಬೌಲರ್‌ಗಳ ಬೆಂಡೆತ್ತಿದರು. ರೋಹಿತ್‌ 38 ರನ್‌ ಗಳಿಸಿ ಔಟಾದರು. ಬಳಿಕ ಬಂದ ಸೂರ್ಯಕುಮಾರ್‌ ಯಾದವ್‌ ಕೇವಲ 19 ಎಸೆತಗಳಲ್ಲಿ 5ಬೌಂಡರಿ, 4ಸಿಕ್ಸರ್‌ ಸಹಿತ 52 ರನ್‌ ಚಚ್ಚಿದರು. ಇಶಾನ್‌ ಕಿಸಾನ್‌ 34 ಎಸೆತಗಳಲ್ಲಿ 7ಬೌಂಡರಿ ಹಾಗೂ 5 ಸಿಕ್ಸರ್‌ ಸಹಿತ 69 ಗಳಿಸಿ ತಂಡಕ್ಕೆ ನೆರವಾದರು.

ನಾಯಕ ಹಾರ್ದಿಕ್‌ ಪಾಂಡ್ಯ 21 ಮತ್ತು ತಿಲಕ್‌ ವರ್ಮಾ 16 ರನ್‌ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಆರ್‌ಸಿಬಿ ಪರ ಆಕಾಶ್‌ ದೀಪ್‌, ವಿಲ್‌ ಜಾಕ್‌ ಹಾಗೂ ವೈಶಾಖ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ಜಸ್‌ಪ್ರಿತ್‌ ಬುಮ್ರಾ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಭಾನುವಾರವಾದರೂ ತಪ್ಪಿಸುವಂತಿಲ್ಲ: ನವೆಂಬರ್‌.1ರಂದು ಶಾಲೆಗಳಲ್ಲಿ ರಾಜ್ಯೋತ್ಸವ ಕಡ್ಡಾಯ

ಬೆಂಗಳೂರು: ನವೆಂಬರ್‌ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…

2 hours ago

ಗುಂಡ್ಲುಪೇಟೆ: ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ

ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…

2 hours ago

ದನ ಮೇಯಿಸಲು ಹೋದ ವ್ಯಕ್ತಿ ಮೇಲೆ ಚಿರತೆ ದಾಳಿ

ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…

3 hours ago

ಮೈಸೂರು: ಬಾಲಕಿ ಮೇಲಿನ ಅತ್ಯಾಚಾರ–ಕೊಲೆ ಪ್ರಕರಣ: ಕಾಮುಕನಿಗೆ ಗಲ್ಲು ಶಿಕ್ಷೆ

ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…

4 hours ago

ಸಯ್ಯಾಜಿರಾವ್ ರಸ್ತೆಯಲ್ಲಿ ಕುಸಿದು ಬಿದ್ದ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ; ಕಾರು, ಆಟೋ ಜಖಂ

ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…

4 hours ago

ಓದುಗರ ಪತ್ರ: ನಿಷ್ಪಕ್ಷಪಾತ ತನಿಖೆ ನಡೆಯಲಿ

ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್‌ಗಳ ವಿಚಾರ…

7 hours ago