ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟೂರ್ನಿಯ 30ನೇ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡವು ನೂತನ ದಾಖಲೆ ನಿರ್ಮಿಸಿದೆ. ಆರ್‌ಸಿಬಿ ತಾವಾಡಿದ ಕೊನೆಯ ಐದು ಪಂದ್ಯಗಳನ್ನು ಸೋಲುವ ಮೂಲಕ ಎಲಿಮಿನೇಟರ್ ಹಾದಿಯನ್ನು ಕಠಿಣವಾಗಿಸಿಕೊಂಡಿದೆ.
ಟಾಸ್ ಸೋತು ಬ್ಯಾಟಿಂಗ್ ಮಾಡಿದ ಎಸ್‌ಆರ್‌ಎಚ್ 20 ಓವರ್‌ಗಳ 3 ವಿಕೆಟ್ ಕಳೆದುಕೊಂಡು 287 ಬಾರಿಸಿ 288 ರನ್ ಗುರಿ ನೀಡಿತು. ಈ ಮೊತ್ತ ಬೆನ್ನತ್ತಿದ ಆರ್‌ಸಿಬಿ 20 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡಿ 262 ರನ್ ಕಲೆಹಾಕಿ 25 ರನ್‌ಗಳ ವಿರೋಚಿತ ಸೋಲು ಕಂಡಿತು.
ಎಸ್‌ಆರ್‌ಎಚ್ ಇನ್ನಿಂಗ್ಸ್: ಹೈದರಾಬಾದ್ ಪರ ಆರಂಭಿಕರಾಗಿ ಬಂದ ಅಭಿಷೇಕ್ ಶರ್ಮಾ 34 ರನ್ ಬಾರಿಸಿ ಔಟಾದರು. ಆದರೆ ಮತ್ತೊಂದೆಡೆ ಭರ್ಜರಿಯಾಗಿ ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ ಆರ್‌ಸಿಬಿ ಬೌಲಿಂಗ್ ಪಡೆಯನ್ನು ಧೂಳಿಪಟ ಮಾಡಿದರು. 41 ಎಸೆತಗಳಲ್ಲಿ 102 ರನ್ ಸಿಡಿಸಿದ ಇವರ ಆಟದಲ್ಲಿ 8 ಸಿಕ್ಸರ್ ಮತ್ತು 9 ಬೌಂಡರಿಗಳು ಸೇರಿದ್ದವು. ಇವರಿಗೆ ಉತ್ತಮ ಸಾಥ್ ನೀಡಿದ ಕ್ಲಾಸೆನ್ 31 ಎಸೆತಗಳಲ್ಲಿ 7 ಸಿಕ್ಸರ್, 2 ಬೌಂಡರಿ ಸಹಿತ 67 ರನ್ ಗಳಿಸಿದರು.
ಅಂತ್ಯದಲ್ಲಿ ಅಬ್ಬರಿಸಿದ ಏಡೆನ್ ಮರ್ಕ್ರಂ(17 ಎಸೆತಗಳಲ್ಲಿ 32) ಮತ್ತು ಅಬ್ದುಲ್ ಸಮದ್ (10 ಎಸೆತಗಳಲ್ಲಿ 37) ಎಸ್‌ಆರ್‌ಎಚ್ ಐತಿಹಾಸಿಕ ದಾಖಲೆ ನಿರ್ಮಿಸುವಲ್ಲಿ ಸಹಕರಿಸಿದರು.
ಆರ್‌ಸಿಬಿ ಪರ ಫರ್ಗೂಸನ್ 2, ಟಾಪ್ಲಿ ಒಂದು ವಿಕೆಟ್ ಪಡೆದರು.
ಆರ್‌ಸಿಬಿ ಇನ್ನಿಂಗ್ಸ್: ಈ ಬೃಹತ್ ಮೊತ್ತ ಬೆನ್ನತ್ತಿದ ಆರ್‌ಸಿಬಿಗೆ ನಾಯಕ ಫಾಫ್ ಹಾಗೂ ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು. ಈ ಜೋಡಿ ಪವರ್ ಪ್ಲೇ ನಲ್ಲಿ 80 ರನ್ ಸಿಡಿಸಿದರು. ಕೊಹ್ಲಿ ಕೇವಲ 20 ಎಸೆತಗಳಲ್ಲಿ 40 ರನ್ ಬಾರಿಸಿ ಔಟಾದರು. ನಾಯಕ ಫಾಫ್ 28ಎಸೆತ ಎದುರಿಸಿ 7ಬೌಂಡರಿ ಹಾಗೂ 4 ಸಿಕ್ಸರ್ ಸಹಿತ 62 ರನ್ ಬಾರಿಸಿ ನಿರ್ಗಮಿಸಿದರು. ವಿಲ್ ಜಾಕ್ (7) ಇಲ್ಲದ ರನ್ ಕದಿಯಲು ಹೋಗಿ ಔಟಾದರು.
ಉಳಿದಂತೆ ಪಟಿದರ್ 9, ಸೌರವ್ ಚೌಹಾಣ್ 0, ಲೋಮ್ರೋರ್ 19 ರನ್ ಬಾರಿಸಿ ಔಟಾದರು. ಕೊನೆಯಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್ ಭಾಗಶಃ ಎಸ್‌ಆರ್‌ಎಚ್ ಬೌಲರ್‌ಗಳನ್ನು ಬೆಂಡೆತ್ತಿದರು. 35 ಎಸೆತ ಎದುರಿಸಿ 5ಬೌಂಡರಿ, 7 ಭರ್ಜರಿ ಸಿಕ್ಸರ್ ಸಹಿತ 83 ರನ್ ಪೇರಿಸಿ, ನಟರಾಜನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸಿದರು. ಅನೂಜ್ ರಾವತ್ 25, ವೈಶಾಖ್ 1 ರನ್ ಹೊಡೆದರು.
ಹೈದರಾಬಾದ್ ಪರ ನಾಯಕ ಕಮಿನ್ಸ್ 3, ಮಾರ್ಕಂಡೆ2 ಹಾಗೂ ನಟರಾಜನ್ 1 ವಿಕೆಟ್ ಪಡೆದು ಮಿಂಚಿದರು.
ನವದೆಹಲಿ: ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಜೀವಾವಧಿ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ…
ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…