ಕ್ರೀಡೆ

ಕನ್ನಡಕ್ಕೆ ಮೊದಲ ಆದ್ಯತೆ ಜೊತೆಗೆ ಬಹುಭಾಷಾ ಸೂತ್ರ: ಆರ್‌ಸಿಬಿ

18ನೇ ಆವೃತ್ತಿಯ ಐಪಿಎಲ್‌ಗಾಗಿ ನಡೆದ ಬಿಡ್‌ನಲ್ಲಿ ಆರ್‌ಸಿಬಿ ಟೀಂ ಆಟಗಾರರನ್ನು ಖರೀದಿಸಿದ ನಂತರ ಹಿಂದಿ ಭಾಷೆಯಲ್ಲಿ ತನ್ನ ಅಧಿಕೃತ ಎಕ್ಸ್ ಖಾತೆ ತೆರೆಯುವ ಮೂಲಕ ಆರ್‌ಸಿಬಿ ಆಟಗಾರರನ್ನು ಕನ್ನಡದ ಜೊತೆಗೆ ಹಿಂದಿಯಲ್ಲೂ ಪರಿಚಯಿಸಿತ್ತು.

ಇದರಿಂದ ಆರ್‌ಸಿಬಿಯು ಕನ್ನಡಿಗರ ಆಕ್ರೋಶಕ್ಕೆ ಗುರಿಯಾಗಿತ್ತು. ಮುಂದೆ ದೊಡ್ಡ ಹೋರಾಟದ ಸುಳಿವು ನೀಡಿದ ಕನ್ನಡಿಗರ ಆಕ್ರೋಶವನ್ನು ತಿಳಿಮಾಡಲು ಕನ್ನಡಕ್ಕೆ ಮೊದಲ ಆದ್ಯತೆ ನೀಡುವುದರ ಜೊತೆಗೆ ಬಹುಭಾಷಾ ವಿಸ್ತರಣಾ ಯೋಜನೆಯನ್ನು ಜಾರಿ ಮಾಡಿದೆ. ಈ ಯೋಜನೆಯಿಂದ ಇತರ ಭಾರತೀಯ ಭಾಷೆಗಳ ಅಭಿಮಾನಿಗಳಿಗೂ ಹತ್ತಿರವಾಗುವ ಉದ್ದೇಶವಿದೆ ಎಂದು ಆರ್‌ಸಿಬಿ ತಿಳಿಸಿದೆ.

ಈಗ ಎದ್ದಿರುವ ವಿವಾದಕ್ಕೆ ಸ್ಪಷ್ಟನೆ ನೀಡುವುದರ ಜೊತೆಗೆ ಆರ್‌ಸಿಬಿ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುತ್ತದೆ. ಪ್ರಪಂಚದಾದ್ಯಂತ ಕೋಟ್ಯಾಂತರ ಅಭಿಮಾನಿಗಳಿರುವ ಐಪಿಎಲ್‌ ಪ್ರಾಂಚೈಸಿಗಳಲ್ಲಿ ಆರ್‌ಸಿಬಿ ಮುಂಚೂಣಿಯಲ್ಲಿದೆ.

ಕೋಟ್ಯಾಂತರ ಅಭಿಮಾನಿಗಳನ್ನು ಒಳಗೊಳ್ಳುವ ಉದ್ದೇಶದಿಂದ ಬಹುಭಾಷಾ ಸೂತ್ರ ಅಳವಡಿಸಲು ಮೊದಲು ಕನ್ನಡ ಇನ್‌ಸ್ಟಾಗ್ರಾಮ್‌ ತೆರೆಯಲಾಗಿದೆ. ಇದಕ್ಕೆ ಒಂದು ತಿಂಗಳಲ್ಲೇ 1.6 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್‌ಗಳಾಗಿದ್ದು, ಇದು ಪ್ರಾಂಚೈಸಿಯ ಬದ್ಧತೆ ತೋರಿಸುತ್ತದೆ. ನಂತರ ಬೇರೆ ಭಾಷೆಯ ಚಿಂತನೆ ನಡೆಸಿದೆ.

ಮುಂಬರುವ ದಿನಗಳಲ್ಲಿ 1,000ಕ್ಕೂ ಹೆಚ್ಚು ವೀಡಿಯೋಗಳನ್ನು ಪೋಸ್ಟ್‌ ಮಾಡಲು ಸಿದ್ಧತೆ ನಡೆಸಿದೆ. AI ಆಧಾರಿತ ತಂತ್ರಜ್ಞಾನ ಬಳಸಿ ಮೊದಲು ಕನ್ನಡಕ್ಕೆ ಆದ್ಯತೆ ನೀಡಲಾಗಿದ್ದು ನಂತರ ಇತರೆ ಭಾಷೆಗಳಿಗೆ ಡಬ್‌ ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡುವ ಗುರಿ ಹೊಂದಿದೆ ಎಂದು ತಿಳಿಸಿದೆ.

ಆರ್‌ಸಿಬಿಯ ಬಹುಭಾಷಾ ವಿಸ್ತರಣಾ ಭಾಗವಾಗಿ ಮೊದಲು 2025ರಲ್ಲಿ ತೆಲುಗು ಖಾತೆ ಆರಂಭವಾಗಲಿದ್ದು, 2026ರಲ್ಲಿ ಮಲಯಾಳಂ, ಪಂಜಾಬಿ, ಮತ್ತು ಬಂಗಾಳಿ ಭಾಷೆಗಳಲ್ಲೂ ಖಾತೆ ತೆರೆದು ಮಾಹಿತಿ ಹಂಚಿಕೊಳ್ಳುವುದಾಗಿ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

6 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

7 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

8 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

8 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

8 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

8 hours ago