ಕೊಹ್ಲಿ-ಪಡಿಕ್ಕಲ್ ಸ್ಫೋಟಕ ಬ್ಯಾಟಿಂಗ್, ಎಸ್‌ಆರ್‌ಎಚ್ ವಿರುದ್ಧ ಭರ್ಜರಿ ಜಯ
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರಿಕೆಟ್ ಮೈದಾನದಲ್ಲಿ ಶನಿವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧದ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಹಾಲಿ ಚಾಂಪಿಯನ್ ಆರ್‌ಸಿಬಿ ತಂಡವು ಇನ್ನೂ ೨೬ ಎಸೆತಗಳು ಬಾಕಿ ಇರುವಂತೆ ಸುಲಭವಾಗಿ ಗೆಲ್ಲುವ ಮೂಲಕ ಶುಭಾರಂಭ ಮಾಡಿದೆ.
೨೦೨ ರನ್‌ಗಳ ಗುರಿ ಬೆನ್ನಟ್ಟಿದ ಆರ್‌ಸಿಬಿ ತಂಡದ ಪರ ವಿರಾಟ್ ಕೊಹ್ಲಿ (ಅಜೇಯ ೬೯) ಹಾಗೂ ದೇವದತ್ತ ಪಡಿಕ್ಕಲ್ (೬೧ ರನ್) ಹಾಗೂ ರಜತ್ ಪಾಟಿದಾರ್ (೩೧ ರನ್) ಅವರು ಸ್ಛೋಟಕ ಬ್ಯಾಟಿಂಗ್ ನಡೆಸಿ ೧೫.೪ ಓವರ್ಗಳಲ್ಲಿ ಪಂದ್ಯವನ್ನು ಮುಕ್ತಾಯಗೊಳಿಸಿದರು
ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಎಸ್‌ಆರ್‌ಎಚ್ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೊತ್ತ ೨೯ ಆಗುವಷ್ಟರಲ್ಲಿ ತಂಡದ ಪ್ರಮುಖ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಪೆವಿಲಿಯನ್ ಸೇರಿಕೊಂಡರು. ಆದರೆ, ನಂತರ ಜೊತೆಯಾದ ಇಶಾನ್ ಕಿಶನ್ ಹಾಗೂ ಹೆನ್ರಿಕ್ ಕ್ಲಾಸನ್ ೯೭ ರನ್‌ಗಳ ಜೊತೆಯಾಟ ಆಡಿದರು.
ಈ ವೇಳೆ ನಾಯಕ ಇಶಾನ್ ಕಿಶನ್ (೮೦ ರನ್, ೬೫, ೪ ೮) ಕಲೆಹಾಕಿ ಔಟ್ ಆದರೆ, ಹೆನ್ರಿಕ್ ಕ್ಲಾಸನ್ ಕೂಡ ೩೧ ರನ್ ಗಳಿಸಿ ದೊಡ್ಡ ಹೊಡೆತಕ್ಕೆ ಕೈಹಾಕಿ ಔಟ್ ಆದರು. ಕೆಳ ಕ್ರಮಾಂಕದಲ್ಲಿ ಉತ್ತಮ ಬ್ಯಾಟಿಂಗ್ ನಡೆಸಿದ ಅನಿಕೇತ್ ವರ್ಮಾ (೪೩ ರನ್, ೬೪, ೪ ೩ ) ಸ್ಛೋಟಕ ಬ್ಯಾಟಿಂಗ್ ಮಾಡುವ ಮೂಲಕ ತಂಡದ ಮೊತ್ತವನ್ನು ೨೦೦ರ ಗಡಿ ದಾಟಿಸಿದರು. ಅಂತಿಮವಾಗಿ ಎಸ್‌ಆರ್‌ಎಚ್ ತಂಡವು ನಿಗದಿತ ೨೦ ಓವರ್‌ಗಳಲ್ಲಿ ೯ ವಿಕೆಟ್ ಕಳೆದುಕೊಂಡು ೨೦೧ ರನ್ ಕಲೆಹಾಕಿತು. ಆರ್‌ಸಿಬಿ ಪರ ಅಮೋಘ ಬೌಲಿಂಗ್ ದಾಳಿ ನಡೆಸಿದ ಜೇಕಬ್ ಡಫಿ ಹಾಗೂ ರೊಮಾರಿಯೊ ಶೇಫರ್ಡ್ ತಲಾ ೩ ವಿಕೆಟ್‌ಗಳನ್ನು ಪಡೆದುಕೊಂಡರು.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…