ಭಾರತ ಹಾಗೂ ಪಾಕಿಸ್ತಾನದ ನಡುವಿನ ಉದ್ವಿಗ್ನತೆಯಿಂದಾಗಿ ಐಪಿಎಲ್ 2025ನ್ನು ಒಂದು ವಾರ ಮುಂದೂಡಲಾಗಿದೆ.
ಇದರಿಂದಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಮುಂದಿನ ಎರಡು ಪಂದ್ಯಗಳ ಟಿಕೆಟ್‌ಗಳ ಹಣವನ್ನು ಮರುಪಾವತಿಸುವುದಾಗಿ ಘೋಷಣೆ ಮಾಡಿದೆ.
ಸನ್‌ರೈಸರ್ಸ್ ಹೈದರಾಬಾದ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ಕೂಡ ಟಿಕೆಟ್‌ಗಳ ಹಣವನ್ನು ಮರುಪಾವತಿಸುತ್ತಿವೆ.
ಟಿಕೆಟ್ ಮರುಪಾವತಿ ಕುರಿತು ಹೆಚ್ಚಿನ ಮಾಹಿತಿಯನ್ನು ಆರ್‌ಸಿಬಿ ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.
ಮೇ.13 ಹಾಗೂ 17ರಂದು ನಡೆಯಬೇಕಿದ್ದ ಪಂದ್ಯಗಳ ಟಿಕೆಟ್ ಪೂರ್ಣ ಹಣವನ್ನು ಮರುಪಾವತಿಸಲಾಗುವುದು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಇಂದು ತಿಳಿಸಿದೆ.





