ಬೆಂಗಳೂರು : ಡಿಸೆಂಬರ್ 19 ರಂದು ನಡೆಯಲಿರುವ 2024ರ ಐಪಿಎಲ್ ಮಿನಿ ಹರಾಜಿನ ಹಿನ್ನೆಲೆಯಲ್ಲಿ ನಮ್ಮ ಆರ್‌ಸಿಬಿ(ರಾಯಲ್ ಚಾಲೆಂಜರ್ಸ್ ಬೆಂಗಳೂರು) ತಂಡ ಪ್ರಮುಖ ಇಬ್ಬರು ಆಟಗಾರರನ್ನು ಬಿಡುಗಡೆಗೊಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಮಿಸ್ಟರ್ 360 ಖ್ಯಾತಿಯ ಎಬಿ ಡಿವಿಲಿಯರ್ಸ್, ಇದು ಆರ್‌ಸಿಬಿಗೆ ದೊಡ್ಡ ಹಿನ್ನಡೆಯಾಗಲಿದೆ ಎಂದಿದ್ದಾರೆ
ತಮ್ಮ ಯಟೂಬ್ ಚಾನೆಲ್ ನಲ್ಲಿ ಮಾತನಾಡಿರುವ ಎಬಿಡಿ ಹರ್ಷಲ್ ಪಟೇಲ್ ಹಾಗೂ ವನಿಂದು ಹಸರಂಗ ಅವರನ್ನು ಬಿಡುಗಡೆಗೊಳಿಸಿದದ್ದು, ತಂಡಕ್ಕೆ ಭಾರಿ ಹಿನ್ನಡೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಆರ್‌ಸಿಬಿ 2022ರ ಮೆಗಾ ಹರಾಜಿನಲ್ಲಿ 10.75 ಕೋಟಿ ಖರ್ಚು ಮಾಡಿ ಹರ್ಷಲ್ ಪಟೇಲ್ ಹಾಗೂ ವನಿಂದು ಹಸರಂಗ ಅವರನ್ನು ಖರೀದಿಸಿತ್ತು. ಹಸರಂಗ 26 ವಿಕೆಟ್ ಪಡೆದು ಉತ್ತಮ ಪ್ರದರ್ಶನ ತೋರಿದರು. 2021ರಲ್ಲಿ ಅಮೋಘ ಬೌಲಿಂಗ್ ಮೂಲಕ ಗಮನ ಸೆಳೆದಿದ್ದ ಪರ್ಪಲ್ ಪಟೇಲ್ ಕಳೆದೆರೆಡು ಆವೃತ್ತಿಯಲ್ಲಿ ನೀರಸ ಪ್ರದರ್ಶನ ತೋರಿದ್ದರು. ಹಾಗಾಗಿ ಇವರನ್ನು 2024ರ ಐಪಿಎಲ್ ಗೂ ಮುನ್ನಾ ಮಿನಿ ಹರಾಜಿನಲ್ಲಿ ಆರ್‌ಸಿಬಿ ತಂಡದಿಂದ ಬಿಡುಗಡೆಗೊಳಿಸಿದೆ.
ಈ ಬಗ್ಗೆ ತಮ್ಮ ಯುಟೂಬ್ ಚಾನೆಲ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಎಬಿ ಡಿವಿಲಿಯರ್ಸ್, ತಂಡದ ಪರ್ಸ್ ಮೊತ್ತ ಹೆಚ್ಚಿಸುವ ಸಲುವಾಗಿ ಈ ಆಟಗಾರರನ್ನು ಬಿಡುಗಡೆ ಮಾಡಿದ್ದು ಉತ್ತಮ ನಿರ್ಧಾರ ಆಗಿದ್ದರೂ ತಂಡಕ್ಕೆ ಹಿನ್ನಡೆ ಆಗಿದೆ. ನೂತನ ಹೆಡ್ ಕೋಚ್ ಆಂಡಿ ಫ್ಲವರ್ ಅವರು ಜಾಣರಾಗಿದ್ದು, ಈ ಆಟಗಾರರ ಸ್ಥಾನವನ್ನು ಸಮರ್ಥವಾಗಿ ತುಂಬುವ ಆಟಗಾರರನ್ನು ಮಿನಿ ಹರಾಜಿನಲ್ಲಿ ಖರೀದಿಸುವ ಭರವಸೆ ಇದೆ ಎಂದು ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹೇಳಿದ್ದಾರೆ.
ಡೆವಾಲ್ಡ್ ಬ್ರೇವಿಸ್ ಆರ್ ಸಿಬಿ ತಂಡದಲ್ಲಿರಬೇಕು:
“ಡೆವಾಲ್ಡ್ ಬ್ರೇವಿಸ್ ಅವರನ್ನು ಆರ್ ಸಿಬಿ ತಂಡದಲ್ಲಿ ನೋಡಲು ಬಯಸುತ್ತೇನೆ. ಚಿನ್ನಸ್ವಾಮಿ ಕ್ರೀಡಾಂಗಣವು ಅವರಿಗೆ ತುಂಬಾ ಸೂಕ್ತವಾಗಿದೆ. ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಬ್ರೇವಿಸ್ ಅವರನ್ನು ಬಿಡುಗಡೆ ಗೊಳಿಸಿದ್ದಾರೋ ಇಲ್ಲವೋ ಎಂಬುದು ನನಗೆ ಗೊತ್ತಿಲ್ಲ. ಆ ತಂಡದ ಫ್ರಾಂಚೈಸಿ ಸಾಕಷ್ಟು ಯುವ ಆಟಗಾರರಿಂದ ತಂಡವನ್ನು ಸುದೀರ್ಘ ಕಾಲದವರೆಗೆ ಬಲಿಷ್ಠಗೊಳಿಸಲು ಬಯಸುತ್ತಾರೆ. ಏಕೆಂದರೆ ಕೆಲವು ವರ್ಷಗಳಿಂದ ತಮ್ಮ ಕನಸಿನ ತಂಡದಲ್ಲಿ ಸ್ಥಾನ ಪಡೆದಿರುವ ಯುವ ಆಟಗಾರರನ್ನು ತಂಡದ ಫ್ರಾಂಚೈಸಿ ಕೈಬಿಡಲು ಯೋಚಿಸುವುದಿಲ್ಲ,” ಎಂದು ಎಬಿಡಿ ವಿಲಿಯರ್ಸ್ ಹೇಳಿದ್ದಾರೆ.
ಡಿಸೆಂಬರ್ 19 ರಂದು ಮಿನಿ ಹರಾಜು
ಎಲ್ಲ 10 ತಂಡಗಳ ಫ್ರಾಂಚೈಸಿಗಳು 2024ರ ಐಪಿಎಲ್ ಟೂರ್ನಿಗೆ ಉಳಿಸಿಕೊಳ್ಳುವ ಮತ್ತು ಮಿನಿ ಹರಾಜಿಗೆ ಬಿಡುಗಡೆಗೊಳಿಸುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 26 (ಭಾನುವಾರ) ರ ಒಳಗೆ ಐಪಿಎಲ್‌ಗೆ ಕಳುಹಿಸಬೇಕಾಗಿದೆ. ಆ ಮೂಲಕ ಡಿಸೆಂಬರ್ 19 ರಂದು ದುಬೈನಲ್ಲಿ ಐಪಿಎಲ್ ಮಿನಿ ಹರಾಜು ನಡೆಯಲಿದೆ. ಈ ಮಿನಿ ಹರಾಜಿನಲ್ಲಿ ಎಲ್ಲಾ ಫ್ರಾಂಚೈಸಿಗಳು ತಮ್ಮ ಬೇಡಿಕೆಗೆ ತಕ್ಕಂತೆ ಆಟಗಾರರನ್ನು ಖರೀದಿಸಲಿವೆ.
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…