ಕ್ರೀಡೆ

IPL 2024: ಕೊಹ್ಲಿ ಅರ್ಧಶತಕ, ಕಾರ್ತಿಕ್‌ ಅಬ್ಬರಕ್ಕೆ ತಲೆಬಾಗಿದ ಪಂಜಾಬ್;‌ ಗೆಲುವಿನ ಖಾತೆ ತೆರೆದ ಆರ್‌ಸಿಬಿ

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ ಆರನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪಂಜಾಬ್‌ ಕಿಂಗ್ಸ್‌ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಗೆಲುವಿನ ಖಾತೆ ತೆರೆದಿದೆ.

ಪಂದ್ಯದಲ್ಲಿ ಟಾಸ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಬೌಲಿಂಗ್‌ ಆಯ್ದುಕೊಂಡು ಎದುರಾಳಿ ಪಂಜಾಬ್‌ ಕಿಂಗ್ಸ್‌ ತಂಡವನ್ನು ಮೊದಲು ಬ್ಯಾಟಿಂಗ್‌ ಮಾಡಲು ಆಹ್ವಾನಿಸಿತು. ಅದರಂತೆ ಮೊದಲು ಬ್ಯಾಟಿಂಗ್‌ ಮಾಡಿದ ಪಂಜಾಬ್‌ ಕಿಂಗ್ಸ್‌ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 176 ರನ್‌ ಕಲೆಹಾಕಿ ಆರ್‌ಸಿಬಿಗೆ 177 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ವಿರಾಟ್‌ ಕೊಹ್ಲಿ ಅರ್ಧಶತಕ ಹಾಗೂ ದಿನೇಶ್‌ ಕಾರ್ತಿಕ್‌ ಅಬ್ಬರದ ಬ್ಯಾಟಿಂಗ್‌ ನೆರವಿನಿಂದ 19.2 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 178 ರನ್‌ ಕಲೆಹಾಕಿತು.

ಪಂಜಾಬ್‌ ಕಿಂಗ್ಸ್‌ ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ನಾಯಕ ಶಿಖರ್‌ ಧವನ್‌ 45 (37) ಹಾಗೂ ಜಾನಿ ಬೈರ್‌ಸ್ಟೋ 8 (6) ರನ್‌ ಗಳಿಸಿದರು. ಇನ್ನುಳಿದಂತೆ ಪ್ರಭ್‌ಸಿಮ್ರಾನ್‌ ಸಿಂಗ್‌ 25 (17) ರನ್‌, ಲಿಯಾಮ್‌ ಲಿವಿಂಗ್‌ಸ್ಟನ್‌ 17 (13) ರನ್‌, ಸ್ಯಾಮ್‌ ಕರನ್‌ 23 (17) ರನ್‌, ಜಿತೇಶ್‌ ಶರ್ಮಾ 27 (20) ರನ್‌, ಶಶಾಂಕ್‌ ಸಿಂಗ್‌ ಅಜೇಯ 21 (8) ಮತ್ತು ಹರ್‌ಪ್ರೀತ್‌ ಬ್ರಾರ್‌ ಅಜೇಯ 2 (2) ರನ್ ಗಳಿಸಿದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಮೊಹಮ್ಮದ್‌ ಸಿರಾಜ್‌ ಹಾಗೂ ಗ್ಲೆನ್‌ ಮ್ಯಾಕ್ಸ್‌ವೆಲ್‌ ತಲಾ 2 ವಿಕೆಟ್‌ ಪಡೆದರೆ, ಯಶ್‌ ದಯಾಳ್‌ ಮತ್ತು ಅಲ್ಜಾರಿ ಜೋಸೆಫ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಇನ್ನಿಂಗ್ಸ್:‌ ತಂಡದ ಪರ ಆರಂಭಿಕರಾಗಿ ನಾಯಕ ಫಾಫ್‌ ಡುಪ್ಲೆಸಿಸ್‌ ಹಾಗೂ ವಿರಾಟ್‌ ಕೊಹ್ಲಿ ಕಣಕ್ಕಿಳಿದರು. ಡುಪ್ಲೆಸಿಸ್‌ 3(7) ರನ್‌ ಗಳಿಸಿ ನಿರಾಸೆ ಮೂಡಿಸಿದರು. ನಂತರ ಕಣಕ್ಕಿಳಿದ ಕ್ಯಾಮೆರಾನ್‌ ಗ್ರೀನ್‌ ಸಹ 3 (5) ರನ್ ಗಳಿಸಿ ವಿಕೆಟ್‌ ಒಪ್ಪಿಸಿದರು. ಇನ್ನುಳಿದಂತೆ ರಜತ್‌ ಪಟಿದಾರ್‌ 18 (18) ರನ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌ 3(5) ರನ್‌ ಮತ್ತು ಅನುಜ್‌ ರಾವತ್‌ 11 (14) ರನ್‌ ಗಳಿಸಿದರು. ಒಂದೆಡೆ ವಿಕೆಟ್ ಬೀಳುತ್ತಿದ್ದರೆ ಏಕಾಂಗಿ ಹೋರಾಟ ನಡೆಸಿದ

ವಿರಾಟ್‌ ಕೊಹ್ಲಿ 49 ಎಸೆತಗಳಲ್ಲಿ 11 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ 77 ರನ್‌ ಗಳಿಸಿ ಔಟ್‌ ಆದರು. ಕೊಹ್ಲಿ ಔಟ್‌ ಆದ ಬಳಿಕ ಏಳನೇ ವಿಕೆಟ್‌ಗೆ ಜತೆಯಾದ ದಿನೇಶ್‌ ಕಾರ್ತಿಕ್‌ ಹಾಗೂ ಮಹಿಪಾಲ್‌ ಲೊಮ್ರೊರ್‌ ಜೋಡಿ 18 ಎಸೆತಗಳಿಗೆ 48 ರನ್‌ಗಳ ಜತೆಯಾಟವಾಡುವ ಮೂಲಕ ಆರ್‌ಸಿಬಿಗೆ ಗೆಲುವು ತಂದಿಟ್ಟರು. ಲೊಮ್ರೊರ್‌ ಅಜೇಯ 17(8) ರನ್‌ ಗಳಿಸಿದರೆ, ದಿನೇಶ್‌ ಕಾರ್ತಿಕ್‌ 10 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್‌ ಸಹಿತ ಅಜೇಯ 28 ರನ್‌ ಬಾರಿಸಿ ಅಬ್ಬರಿಸಿದರು.

ಪಂಜಾಬ್‌ ಕಿಂಗ್ಸ್‌ ಪರ ಕಗಿಸೊ ರಬಾಡಾ ಹಾಗೂ ಹರ್‌ಪ್ರೀತ್‌ ಬ್ರಾರ್‌ ತಲಾ ಎರಡು ವಿಕೆಟ್‌ ಪಡೆದರೆ, ಹರ್ಷಲ್‌ ಪಟೇಲ್‌ ಹಾಗೂ ಸಾಮ್‌ ಕರನ್‌ ತಲಾ ಒಂದೊಂದು ವಿಕೆಟ್‌ ಪಡೆದರು.

ಪಂದ್ಯ ಶ್ರೇಷ್ಠ: ವಿರಾಟ್‌ ಕೊಹ್ಲಿ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಎಚ್.ಡಿ.ಕೋಟೆಯಲ್ಲಿ ಮತ್ತೆ ಶುರುವಾಯ್ತು ಹುಲಿ ಉಪಟಳ

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…

6 hours ago

ಇನ್ಸ್ಟಾಗ್ರಾಮ್ ಪರಿಚಯ : ಪೊಲೀಸಪ್ಪನ ಜತೆ ಮೈಸೂರು ಮೂಲದ ಗೃಹಿಣಿ ಎಸ್ಕೇಪ್

ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…

6 hours ago

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

7 hours ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

7 hours ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

7 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

7 hours ago