ಕ್ರೀಡೆ

ಅಚ್ಚರಿಯ ಫಲಿತಾಂಶ: ಮೊರಾಕ್ಕೊ ಕ್ರೊವೇಷಿಯಾ ಪಂದ್ಯ ಡ್ರಾ

ಕತಾರ್: ಫಿಫಾ ವಿಶ್ವಕಪ್​ ಪಂದ್ಯಾವಳಿ ಅಚ್ಚರಿ ಫಲಿತಾಂಶಗಳನ್ನು ನೀಡುತ್ತಿದೆ. 2018 ರಲ್ಲಿ ಫೈನಲ್ ತಲುಪಿದ್ದ ಕ್ರೊವೇಷಿಯಾ ವಿರುದ್ಧ ಮೊರಾಕ್ಕೊ 0-0 ಮೂಲಕ ಡ್ರಾ ಸಾಧಿಸಿ ಅದ್ಭುತ ಪ್ರದರ್ಶನ ನೀಡಿದೆ.

ಹಲವು ಬಾರಿ ಗೋಲು ಗಳಿಸಲು ಸತತ ಪ್ರಯತ್ನ ನಡೆಸಿದ ಕ್ರೋವೇಷಿಯಾ ತಂಡಕ್ಕೆ ಮೊರಾಕ್ಕೊದ ಗೋಲ್‌ಕೀಪರ್ ಅವಕಾಶವನ್ನೇ ನೀಡಲಿಲ್ಲ. ಆದರೂ ಕ್ರೋವೇಷಿಯಾ ತಂಡದ ನಾಯಕ ಲೂಕಾ ಮಾಡ್ರಿಕ್ ಉತ್ತಮ ಪ್ರದರ್ಶನ ನೀಡಿದರು.

ಅಂತಿಮ ವಿಶ್ವಕಪ್ ಆಡುತ್ತಿರುವ ಲೂಕಾ ಮಾಡ್ರಿಕ್ 2ನೇ ಅವಧಿಯ ಆರಂಭದಲ್ಲಿಯೇ ಗೋಲು ಗಳಿಸುವ ಅದ್ಭುತ ಯತ್ನ ಮಾಡಿದರು.
ಇದರಿಂದ ಲೂಕಾ ಪಂದ್ಯದ ಶ್ರೇಷ್ಠ ಆಟಗಾರ ಪ್ರಶಸ್ತಿ ಪಡೆದರು. ಗ್ರೂಪ್ ಎಫ್‌ ನ ಮೊರಾಕ್ಕೊ ಮುಂದಿನ ಪಂದ್ಯದಲ್ಲಿ 2ನೇ ಶ್ರೇಯಾಂಕದ ಬೆಲ್ಡಿಯಂ ತಂಡವನ್ನು ಎದುರಿಸಿದೆ.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

2 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

3 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

3 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

3 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

3 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

3 hours ago