ಬೆಂಗಳೂರು: ನಾನು ಕ್ರಿಕೆಟ್ ಆಟವನ್ನು ಬಹಳ ಪ್ರೀತಿಸುತ್ತೇನೆ. ನನ್ನಲ್ಲಿನ ಸ್ಪರ್ಧಾತ್ಮಕ ಪ್ರವೃತ್ತಿ ಜೀವಂತ ಇರುವವರೆಗೂ ನಿವೃತ್ತಿ ಘೋಷಿಸುವುದಿಲ್ಲ ಎಂದು ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೇಳಿದ್ದಾರೆ.
ನಾನು ಕ್ರಿಕೆಟ್ ಆಟವನ್ನು ಆನಂದಿಸುತ್ತಿದ್ದು, ನನ್ನ ಆತ್ಮತೃಪ್ತಿಗಾಗಿ ಇನ್ನಷ್ಟು ಕಾಲ ಕ್ರಿಕೆಟ್ ಅಡುತ್ತೇನೆ ಎಂದು ಹೇಳುವ ಮೂಲಕ ನಿವೃತ್ತಿಯ ಬಗ್ಗೆ ನಡೆಯುತ್ತಿದ್ದ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ.
ಮುಂದೆ ನಿವೃತ್ತಿಯಾದಾಗ ಏನು ಮಾಡುವಿರಿ ಎಂದು ಬಹಳ ಜನ ಕೇಳುತ್ತಾರೆ. ಅದರ ಬಗ್ಗೆ ನಾನು ಏನೂ ಯೋಜಿಸಿಲ್ಲ. ನಾನು ಯಾವಾಗಲೂ ಹೃದಯದ ಮಾತನ್ನು ಕೇಳುತ್ತೇನೆ. ನೆಮ್ಮದಿಗೆ ಬೇಕಾಗುವಷ್ಟು ಹಣ ಗಳಿಸುತ್ತೇನೆ. ಅದಕ್ಕಾಗಿ ಮೌಲ್ಯಗಳನ್ನು ಬಿಡುವುದಿಲ್ಲ ಎಂದರು.
ನಾನು ವೃತ್ತಿ ಜೀವನದ ವಿಭಿನ್ನ ಹಂತದಲ್ಲಿ ಇದ್ದೇನೆ. 20ರ ವಯಸ್ಸಿನಲ್ಲಿ ನೀವು ಮಾಡಬಹುದಾದಷ್ಟು ಕೆಲಸಗಳನ್ನು ನಿಮ್ಮ 30ರ ವಯಸ್ಸಿನಲ್ಲಿ ಮಾಡಲು ಸಾಧ್ಯವಿಲ್ಲ. ಶಕ್ತಿ ಮೀರಿ ಪ್ರದರ್ಶನ ನೀಡಲು ನಾನು ಬಯಸುತ್ತೇನೆ ಎಂದು ಹೇಳಿದ್ದಾರೆ.
ಕಳೆದ ವರ್ಷ ಟಿ20 ವಿಶ್ವಕಪ್ ಗೆದ್ದ ಬಳಿಕ ಚುಟುಕು ಕ್ರಿಕೆಟ್‌ಗೆ ವಿರಾಟ್ ನಿವೃತ್ತಿ ಘೋಷಿಸಿದ್ದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…