ಕ್ರೀಡೆ

ಲಾರಿಯಸ್‌ ವರ್ಲ್ಡ್‌ ಕಂಬ್ಯಾಕ್‌ ಪ್ರಶಸ್ತಿಗೆ ರಿಷಭ್‌ ನಾಮನಿರ್ದೇಶನ

ನವದೆಹಲಿ: ಕಾರು ಅಪಘಾತದ ನಂತರ ಭಾರತ ತಂಡದ ವಿಕೆಟ್‌ ಕೀಪರ್‌ ಕಂ ಬ್ಯಾಟರ್‌ ರಿಷಭ್‌ ಪಂತ್‌ ಅವರನ್ನು ವರ್ಷದ ಪುನರಾಗಮನ ವಿಭಾಗದಲ್ಲಿ ಲಾರಿಯಸ್‌ ವರ್ಲ್ಡ್‌ ಕಂಬ್ಯಾಕ್‌ ಪ್ರಶಸ್ತಿ-2025ಕ್ಕೆ ನಾಮನಿರ್ದೇಶನ ಮಾಡಲಾಗಿದೆ.

2022ರ ಡಿಸೆಂಬರ್‌ 30 ರಂದು ದೆಹಲಿಯಿಂದ ತಮ್ಮ ಊರಿಗೆ ಹೋಗುವಾಗ ಪಂತ್‌ ಭೀಕರ ಅಪಘಾತಕ್ಕೆ ಒಳಗಾಗಿದ್ದರು.

ಅವರ ಮೊಣಕಾಲಿನಲ್ಲಿ ಮೂರು ಅಸ್ಥಿರಜ್ಜುಗಳನ್ನು ಪುನರ್‌ನಿರ್ಮಿಸಲು ಶಸ್ತ್ರ ಚಿಕಿತ್ಸೆಗಳು ನಡೆದ ನಂತರ, ಬೆಂಗಳೂರಿನ ಅಂತರಾಷ್ಟ್ರೀಯ ಕ್ರಿಕೆಟ್‌ ಅಕಾಡೆಮಿಯಲ್ಲಿ ಚೇತರಿಸಿಕೊಂಡಿದ್ದರು.

ನಂತರ ಐಪಿಎಲ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಪರವಾಗಿ ಪುನರಾಗಮನ ಮಾಡಿದ್ದರು. ಆದಾದ ಬಳಿಕ ಬಾಂಗ್ಲಾದೇಶದ ವಿರುದ್ಧ ಟೆಸ್ಟ್‌ ಪಂದ್ಯದಲ್ಲಿ ಅಮೋಘ ಶತಕ ಗಳಿಸುವ ಮೂಲಕ ಭಾರತ ತಂಡ ಗೆಲುವಿನಲ್ಲಿ ಪ್ರಮಖ ಪಾತ್ರವಹಿಸಿದ್ದರು.

ಲಾರಿಯಸ್‌ ವರ್ಲ್ಡ್‌ ಸ್ಪೋರ್ಟ್ಸ್‌ ಪ್ರಶಸ್ತಿ ಪ್ರಧಾನ ಸಮಾರಂಭ ಏಪ್ರಿಲ್‌ 21 ರಂದು ಮ್ಯಾಡ್ರಿಡ್‌ನಲ್ಲಿ ನಡೆಯಲಿದೆ.

ಆಂದೋಲನ ಡೆಸ್ಕ್

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

2 mins ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

7 mins ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

12 mins ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

16 mins ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

21 mins ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

30 mins ago