ಮಹಾರಾಷ್ಟ್ರ: ಚೆನ್ನೈ ಸೂಪರ್ ಕಿಂಗ್ಸ್ ಸ್ಟಾರ್ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್ ಅವರೊಂದಿಗೆ ಶನಿವಾರ (ಜೂ.3 ರಂದು) ಮಹಾಬಲೇಶ್ವರದಲ್ಲಿ ವಿವಾಹವಾಗಿದ್ದಾರೆ. ಈ ಐಪಿಎಲ್ ನಲ್ಲಿ ಬ್ಯಾಟಿಂಗ್ ನಿಂದ ಸ್ಪೋಟಕ ಆಟವನ್ನಾಡಿದ ಋತುರಾಜ್ ಐಪಿಎಲ್ ಮುಗಿದ ಕೆಲವೇ ದಿನಗಳಲ್ಲಿ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ.
ವಿಶೇಷವೆಂದರೆ ಋತ್‌ರಾಜ್ ಅವರ ಪತ್ನಿ ಕೂಡ ಕ್ರಿಕೆಟ್ ಆಟಗಾರ್ತಿ ಆಗಿದ್ದು, 24 ವರ್ಷದ ಉತ್ಕರ್ಷ ದೇಶಿಯ ತಂಡದಲ್ಲಿ ಆಡಿದ್ದಾರೆ. ಮಹಾರಾಷ್ಟ್ರದ ಪರವಾಗಿ ದೇಶಿಯ ಟೂರ್ನಿಯಲ್ಲಿ ಉತ್ಕರ್ಷ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಚೆನ್ನೈ ಐಪಿಎಲ್ ಟ್ರೋಫಿ ಗೆದ್ದ ಬಳಿಕ ಮೈದಾನದಲ್ಲಿ ಋತುರಾಜ್ ಹಾಗೂ ಧೋನಿ ಅವರೊಂದಿಗೆ ಫೋಟೋಗೆ ಪೋಸ್ ಕೊಟ್ಟು ಅದನ್ನು ಪೋಸ್ಟ್ ಮಾಡಿದ್ದರು.
ತಮ್ಮ ಮದುವೆಯ ಫೋಟೋಗಳನ್ನು ಹಂಚಿಕೊಂಡಿರುವ ರುತ್‌ರಾಜ್ “From the pitch to the altar, our journey begins!” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಶಿಖರ್ ಧವನ್, ರಶೀದ್ ಖಾನ್, ಶ್ರೇಯಸ್ ಅಯ್ಯರ್ ಮತ್ತು ಉಮ್ರಾನ್ ಮಲಿಕ್ ಹಾಗೂ ಇತರ ಆಟಗಾರರು ಕಮೆಂಟ್ ಮಾಡಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ನ ಆಟಗಾರರಾದ ಶಿವಂ ದುಬೆ ಮತ್ತು ಪ್ರಶಾಂತ್ ಸೋಲಂಕಿ ಅವರು ಮದುವೆಯಲ್ಲಿ ಭಾಗವಹಿಸಿದ್ದರು.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…