ಮುಂಬೈ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಸ್ಟಾರ್ ಹಾಗೂ ೧೯೮೩ ರ ವಿಶ್ವಕಪ್ ವಿಜೇತ ತಂಡದ ಹೀರೊ ರೋಜರ್ ಬಿನ್ನಿ ಮಂಗಳವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ೩೬ ನೇ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಮುಂಬೈನಲ್ಲಿ ನಡೆದ ಬಿಸಿಸಿಐ ಎಜಿಎಂನಲ್ಲಿ ಬಿನ್ನಿ ಅವರ ನೇಮಕವನ್ನು ಪ್ರಕಟಿಸಲಾಯಿತು. ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅವರ ಉತ್ತರಾಧಿಕಾರಿಯಾಗಿ ಬಿನ್ನಿ ಆಯ್ಕೆಯಾಗಿದ್ದಾರೆ. ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ೬೭ ವರ್ಷದ ಬಿನ್ನಿ ಮಾತ್ರ ನಾಮಪತ್ರ ಸಲ್ಲಿಸಿದ್ದರು.
ಎಲ್ಲರೂ ಅವಿರೋಧವಾಗಿ ಆಯ್ಕೆಯಾಗಲಿರುವುದರಿಂದ ಮುಂದಿನ ಪದಾಧಿಕಾರಿಗಳ ಆಯ್ಕೆ ಕೇವಲ ಔಪಚಾರಿಕವಾಗಿತ್ತು. ಬಿನ್ನಿ ಅವರು ಸದ್ಯ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿದ್ದಾರೆ. ಈಗ ರಾಜ್ಯ ಸಂಸ್ಥೆಯಲ್ಲಿ ತಮ್ಮ ಸ್ಥಾನವನ್ನು ತೊರೆಯಲಿದ್ದಾರೆ.
ಮಧ್ಯಮ ವೇಗಿ ೧೯೮೩ ರಲ್ಲಿ ಭಾರತದ ಐತಿಹಾಸಿಕ ವಿಶ್ವಕಪ್ ವಿಜಯದ ರೂವಾರಿಗಳಲ್ಲಿ ಒಬ್ಬರಾಗಿದ್ದರು. ವಿಶ್ವಕಪ್‌ನ ಎಂಟು ಪಂದ್ಯಗಳಲ್ಲಿ ಅವರು ೧೮ ವಿಕೆಟ್‌ಗಳನ್ನು ಪಡೆದಿದ್ದರು. ಇದು ಪ್ರತಿಷ್ಠಿತ ಪಂದ್ಯಾವಳಿಯ ೧೯೮೩ರ ಆವೃತ್ತಿಯಲ್ಲಿ ಬೌಲರ್‌ನ ಅತ್ಯುತ್ತಮ ಸಾಧನೆಯಾಗಿತ್ತು.
ರೋಜರ್ ಬಿನ್ನಿ ಜನನ 19-07-1955
ಬಲಗೈ ಬ್ಯಾಟ್ಸ್‌ಮನ್
ಮಧ್ಯಮ ವೇಗದ ಬೌಲರ್
ಮೊದಲ ಟೆಸ್ಟ್ 21-11-1979
ಕೊನೆಯ ಟೆಸ್ಟ್ 13-03-1987
ಮೊದಲ ಒಡಿಐ 06-12-1980
ಕೊನೆಯ ಒಡಿಐ 13-03-1987
ಸಾಧನೆ ಟೆಸ್ಟ್ ಒಡಿಐ
ಆಡಿದ ಪಂದ್ಯ 27 72
ರನ್‌ಗಳು 830 629
ಅರ್ಧ ಶತಕ 05 01
ಅತಿಹೆಚ್ಚು ಸ್ಕೋರ್ 83 57
ವಿಕೆಟ್‌ಗಳು 47 77
ಕ್ಯಾಚ್‌ಗಳು 11 01
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…