ಮುಂಬೈ: ಇದೇ 23 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದ ನಡುವಿನ ರಣಜಿ ಪಂದ್ಯದಲ್ಲಿ ಮುಂಬೈ ತಂಡದ ಪರವಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಆಡಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿ, ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಲ್ಲಿ ರೋಹಿತ್ ಶರ್ಮಾ ಫಾರ್ಮ್ ಕೊರತೆ ಅನುಭವಿಸಿದರು.
ಮುಂಬರುವ ಚಾಂಪಿಯನ್ಸ್ ಟ್ರೋಫಿಯ ದೃಷ್ಠಿಕೋನದಿಂದ ಮತ್ತೆ ಫಾರ್ಮ್ ಕಂಡುಕೊಳ್ಳಲು ರೋಹಿತ್ ಶರ್ಮಾ ರಣಜಿ ಪಂದ್ಯದಲ್ಲಿ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ.
ಒಪ್ಪಂದಕ್ಕೆ ಒಳಪಟ್ಟಿರುವ ಎಲ್ಲ ಆಟಗಾರರು ದೇಶಿಯ ಪಂದ್ಯಗಳನ್ನು ಆಡುವುದು ಕಡ್ಡಾಯ ಎಂದು ಬಿಸಿಸಿಐ ಇತ್ತೀಚಿಗೆ ತಿಳಿಸಿದೆ.
ಮುಂಬೈ ತಂಡ: ಅಜಿಂಕ್ಯ ರಹಾನೆ (ನಾಯಕ), ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಅಯುಷ್ ಮ್ಹಾತ್ರೆ, ಶ್ರೇಯಸ್ ಅಯ್ಯರ್, ಸಿದ್ಧೇಶ್ ಲಾಡ್, ಶಿವಂ ದುಬೆ, ಹಾರದಿಕ್ ತಮೋರ್, ಆಕಾಶ್ ಆನಂದ್, ತನುಷ್ ಕೋಟ್ಯಾನ್, ಶಮ್ಸ್ ಮುಲಾನಿ, ಹಿಮಾಂಶು ಸಿಂಗ್, ಶಾರ್ದೂಲ್ ಠಾಕೂರ್.