ಕ್ರೀಡೆ

ರಣಜಿ ಟ್ರೋಫಿ 2025: ಮುಂಬೈ ತಂಡಕ್ಕೆ ರೋಹಿತ್‌, ಜೈಸ್ವಾಲ್‌

ಮುಂಬೈ: ಇದೇ 23 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದ ನಡುವಿನ ರಣಜಿ ಪಂದ್ಯದಲ್ಲಿ ಮುಂಬೈ ತಂಡದ ಪರವಾಗಿ ಭಾರತ ತಂಡದ ನಾಯಕ ರೋಹಿತ್‌ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್‌ ಆಡಲಿದ್ದಾರೆ.

ನ್ಯೂಜಿಲೆಂಡ್‌ ವಿರುದ್ಧದ ತವರಿನ ಟೆಸ್ಟ್‌ ಸರಣಿ, ಆಸ್ಟ್ರೇಲಿಯಾ ವಿರುದ್ಧದ ಸರಣಿಗಳಲ್ಲಿ ರೋಹಿತ್‌ ಶರ್ಮಾ ಫಾರ್ಮ್‌ ಕೊರತೆ ಅನುಭವಿಸಿದರು.

ಮುಂಬರುವ ಚಾಂಪಿಯನ್ಸ್‌ ಟ್ರೋಫಿಯ ದೃಷ್ಠಿಕೋನದಿಂದ ಮತ್ತೆ ಫಾರ್ಮ್‌ ಕಂಡುಕೊಳ್ಳಲು ರೋಹಿತ್‌ ಶರ್ಮಾ ರಣಜಿ ಪಂದ್ಯದಲ್ಲಿ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಒಪ್ಪಂದಕ್ಕೆ ಒಳಪಟ್ಟಿರುವ ಎಲ್ಲ ಆಟಗಾರರು ದೇಶಿಯ ಪಂದ್ಯಗಳನ್ನು ಆಡುವುದು ಕಡ್ಡಾಯ ಎಂದು ಬಿಸಿಸಿಐ ಇತ್ತೀಚಿಗೆ ತಿಳಿಸಿದೆ.

ಮುಂಬೈ ತಂಡ: ಅಜಿಂಕ್ಯ ರಹಾನೆ (ನಾಯಕ), ರೋಹಿತ್‌ ಶರ್ಮಾ, ಯಶಸ್ವಿ ಜೈಸ್ವಾಲ್‌, ಅಯುಷ್‌ ಮ್ಹಾತ್ರೆ, ಶ್ರೇಯಸ್‌ ಅಯ್ಯರ್‌, ಸಿದ್ಧೇಶ್‌ ಲಾಡ್‌, ಶಿವಂ ದುಬೆ, ಹಾರದಿಕ್‌ ತಮೋರ್‌, ಆಕಾಶ್‌ ಆನಂದ್‌, ತನುಷ್‌ ಕೋಟ್ಯಾನ್‌, ಶಮ್ಸ್‌ ಮುಲಾನಿ, ಹಿಮಾಂಶು ಸಿಂಗ್‌, ಶಾರ್ದೂಲ್‌ ಠಾಕೂರ್‌.

ಆಂದೋಲನ ಡೆಸ್ಕ್

Recent Posts

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

6 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

6 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

6 hours ago

ಸಿಎಂ ಕುಟುಂಬ ನಿವೇಶನ ಪಡೆದ ಪ್ರಕರಣ : ಡಿ.23ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…

6 hours ago

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

7 hours ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

7 hours ago