ಕ್ರೀಡೆ

ವಿಶ್ವಕಪ್‌ ಗೆದ್ದ ಬೆನ್ನಲ್ಲೇ ವಿದಾಯ ಘೋಷಿಸಿದ ಕಪ್ತಾನ್‌ “ಹಿಟ್‌ ಮ್ಯಾನ್‌”

ಬಾರ್ಬಡೋಸ್‌: 17 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಟಿ20 ವಿಶ್ವಕಪ್‌ ಟ್ರೋಫಿ ಗೆದ್ದ ಬೆನ್ನಲ್ಲೇ ನಾಯಕ ರೋಹಿತ್‌ ಶರ್ಮಾ ಅಂತರಾಷ್ಟ್ರೀಯ ಟಿ20ಗೆ ನಿವೃತ್ತಿ ಘೋಷಿಸಿದ್ದಾರೆ.

ಪಂದ್ಯದ ನಂತರ ನಡೆದ ಅಧಿಕೃತ ಪತ್ರಿಕಾಗೋಷ್ಠಿಯಲ್ಲಿ ರೋಹಿತ್‌ ನಿವೃತ್ತಿ ಘೋಷಿಸಿದರು. ಈ ಬಾರಿಯ ವಿಶ್ವಕಪ್‌ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ರೋಹಿತ್‌ ಶರ್ಮಾ ಅವರು ಕೇವಲ ಏಕದಿನ ಮತ್ತು ಟೆಸ್ಟ್‌ ಪಂದ್ಯಗಳಲ್ಲಿ ಮಾತ್ರ ಮುಂದುವರೆಯುವುದಾಗಿ ಖಚಿತ ಪಡಿಸಿದರು. ಮತ್ತು ಟಿ20ಐ ನಿಂದ ದೂರ ಉಳಿಯವುದಾಗಿ ಅವರು ಘೋಷಿಸಿದ್ದಾರೆ.

ಇದು ನನ್ನ ಅಂತರಾಷ್ಟ್ರೀಯ ಟಿ20ಯ ಕೊನೆಯ ಪಂದ್ಯವಾಗಿತ್ತು. ಕೊನೆಯ ಪಂದ್ಯದಲ್ಲಿ ಟ್ರೋಫಿ ಗೆದ್ದ ಬಗ್ಗೆ ಹೇಳಲು ಪದಗಳಲ್ಲಿ ಆಗುತ್ತಿಲ್ಲ. ವಿದಾಯ ಹೇಳಲು ನನಗೆ ಇದಕ್ಕಿಂತ ಉತ್ತಮ ಸಮಯವಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ರೋಹಿತ್‌ ಶರ್ಮಾ ಹೇಳಿದರು.

ಈವರೆಗೆ ಒಟ್ಟು 159 ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿರುವ ರೋಹಿತ್‌ ಶರ್ಮಾ 4,231 ರನ್‌ ಗಳಿಸಿದ್ದು, ಇದರಲ್ಲಿ 32 ಅರ್ಧಶತಕ ಹಾಗೂ 5 ಭರ್ಜರಿ ಶತಕಗಳು ಸೇರಿವೆ.

ಇನ್ನು ಫೈನಲ್‌ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಸ್ವೀಕರಿಸಿದ ಬಳಿಕ ವಿರಾಟ್‌ ಅವರು ಮಾತನಾಡಿ ತಾವು ಅಂತರಾಷ್ಟ್ರೀಯ ಟಿ20ಯಿಂದ ದೂರ ಉಳಿಯುವುದಾಗಿ ಹಾಗೂ ಈ ಲೆಗೆಸಿಯನ್ನು ಮುಂದಿನ ಪೀಳಿಗೆ ಕೊಂಡೊಯ್ಯಬೇಕು ಎಂದು ಕೊಹ್ಲಿ ಹೇಳಿದರು.

ವಿರಾಟ್‌ ತಮ್ಮ ಜೀವನದ ಈವರೆಗೆ 125 ಪಂದ್ಯಗಳನ್ನಾಡಿದ್ದು, 4188ರನ್‌ ಬಾರಿಸಿದ್ದಾರೆ. ಇದರಲ್ಲಿ 38 ಅರ್ಧಶತಕ ಮತ್ತು 1 ಶತಕ ಒಳಗೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

5 hours ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

5 hours ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

6 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

7 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

9 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

11 hours ago