ಕ್ರೀಡೆ

ಇದು ಒಂದು ಅನುಭವ: ಪಾಂಡ್ಯ ನಾಯಕತ್ವದ ಬಗ್ಗೆ ಕೊನೆಗೂ ಮೌನ ಮುರಿದ ಹಿಟ್‌ಮ್ಯಾನ್‌!

ನವದೆಹಲಿ: ಐದು ಬಾರಿ ಐಪಿಎಲ್‌ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ತಂಡದಲ್ಲಿನ ರೋಹಿತ್‌ ಶರ್ಮಾ ಅವರ ಸ್ಥಾನಮಾನ ಕುರಿತು ಸ್ವತಃ ಹಿಟ್‌ಮ್ಯಾನ್‌ ಮನಬಿಚ್ಚಿ ಮಾತನಾಡಿದ್ದಾರೆ.

ಈ ಬಾರಿಯ ಐಪಿಎಲ್‌ ಸೀಸನ್‌ಗೆ ಮುಂಬೈ ತಂಡ ನೂತನ ಸಾರಥಿಯನ್ನು ನೇಮಕ ಮಾಡಿತ್ತು. ರೋಹಿತ್‌ ಶರ್ಮಾ ಉಪಸ್ಥಿತಿಯಲ್ಲಿಯೂ ಕೂಡಾ ಹಾರ್ದಿಕ್‌ ಪಾಂಡ್ಯ ಅವರನ್ನು ನಾಯಕನಾಗಿ ಎಂಐ ನೇಮಿಸಿದ ಬೆನ್ನಲ್ಲೇ ರೋಹಿತ್‌ ಅವರ ಅಪಾರ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದರು.

ಇನ್ನು ರೋಹಿತ್‌ ಅವರಿಂದ ಯಾವುದೇ ಇನ್‌ಪುಟ್‌ ಪಡೆಯದೇ ಹಾರ್ದಿಕ್‌ ಅವರನ್ನು ನಾಯಕನನ್ನಾಗಿ ಮಾಡಿದ್ದಾರೆ ಎಂದು ಹಲವರು ಸೋಷಿಯಲ್‌ ಮೀಡಿಯಾದಲ್ಲಿ ಆಕ್ರೋಶ ಹೊರಹಾಕಿದ್ದರು. ಈ ಎಲ್ಲದರ ಬಗ್ಗೆ ಟೀಮ್‌ ಇಂಡಿಯಾ ಕಪ್ತಾನ್‌ ತಮ್ಮ ಮೌನ ಮುರಿದು ಮೊದಲ ಬಾರಿಗೆ ಮಾತನಾಡಿದ್ದಾರೆ.

ಈ ಐಪಿಎಲ್‌ನಲ್ಲಿ ಹಾರ್ದಿಕ್‌ ನಾಯಕತ್ವದಡಿಯಲ್ಲಿ ಆಡುತ್ತಿರುವ ಅನುಭವದ ಬಗ್ಗೆ ಕೇಳಿದ ಪ್ರಶ್ನೆಗೆ “ಬೇರೆ ಕ್ಯಾಪ್ಟನ್‌ಗಳ ಅಡಿಯಲ್ಲಿ ಆಡುವುದು ನನಗೆ ಹೊಸದೇನಲ್ಲ. ಇವೆಲ್ಲವೂ ಜೀವನದ ಒಂದು ಭಾಗ, ನಾವು ಅಂದುಕೊಂಡಂತೆ ಏನು ನಡೆಯುವುದಿಲ್ಲ” ಎಂದು ಮಾಜಿ ನಾಯಕ ರೋಹಿತ್‌ ಶರ್ಮಾ ಅವರು ವಿವರಿಸಿದ್ದಾರೆ.

ಈ ಮೊದಲು ನಾನು ನಾಯಕನಾಗಿರಲಿಲ್ಲ. ಆವಾಗ ಹಲವಾರು ನಾಯಕರ ಅಡಿಯಲ್ಲಿ ನಾನು ಆಟವಾಡಿದ್ದೇನೆ. ಇದು ನನಗೆ ಭಿನ್ನವೂ ಅಲ್ಲ, ಹೊಸದು ಅಲ್ಲ ಎಂದು ಅವರು ಹೇಳಿಕೊಂಡಿದ್ದಾರೆ. ಈ ಎಲ್ಲದರ ನಡುವೆ ರೋಹಿತ್‌ ಶರ್ಮಾ ಅವರು ಹಾರ್ದಿಕ್‌ ಪಾಂಡ್ಯ ಅವರ ಮೇಲೆ ಯಾವುದೇ ಬೇಸರವನ್ನು ಸಹಾ ವ್ಯಕ್ತಪಡಿಸಿಲ್ಲ ಎಂಬುದು ಗಮನಾರ್ಹ ಸಂಗತಿ..

ಈ ಹಿಂದೆ ಟೀಂ ಇಂಡಿಯಾ ಪರವಾಗಿ ಆಡುವಾಗ ಎಂ.ಎಸ್‌ ಧೋನಿ, ವಿರೇಂದ್ರ ಸೆಹ್ವಾಗ್‌ ಹಾಗೂ ವಿರಾಟ್‌ ಕೊಹ್ಲಿ ಅವರ ನಾಯಕತ್ವದಲ್ಲಿ ಪ್ರತಿನಿಧಿಸಿದ್ದರು. ಇನ್ನು ಐಪಿಎಲ್‌ನಲ್ಲಿ ಆಡಂ ಗಿಲ್‌ಕ್ರಿಸ್ಟ್‌, ಹರಭಜನ್‌ ಸಿಂಗ್‌, ರಿಕ್ಕಿ ಪಾಂಟಿಂಗ್‌ ಅವರ ಗರಡಿಯಲ್ಲಿ ರೋಹಿತ್‌ ಆಟವಾಡಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

4 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

5 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

7 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

8 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

8 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

9 hours ago