ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಆರು ಸಿಕ್ಸರ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ ರೋಹಿತ್ ಶರ್ಮಾ!

ರಾಜ್‌ಕೋಟ್‌: ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಒಡಿಐ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ನೂತನ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ಮಿಚೆಲ್ ಮಾರ್ಷ್ (96 ರನ್), ಡೇವಿಡ್ ವಾರ್ನರ್ (56 ರನ್), ಸ್ಟೀವನ್ ಸ್ಮಿತ್ (74 ರನ್) ಹಾಗೂ ಮಾರ್ನಸ್ ಲಾಬುಶೇನ್ (72 ರನ್) ಅವರ ಆಕರ್ಷಕ ಅರ್ಧಶತಕಗಳ ನೆರವಿನಿಂದ 353 ಬೃಹತ್ ಮೊತ್ತ ಕಲೆ ಹಾಕಿತ್ತು.

354 ರನ್ ಗಳ ಬೃಹತ್ ಮೊತ್ತದ ಗುರಿಯನ್ನು ಹಿಂಬಾಲಿಸಿದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಆಸ್ಟ್ರೇಲಿಯಾದ ವೇಗದ ಬೌಲರ್ ಗಳ ಬೆವರಿಳಿಸಿ 5 ಮನಮೋಹಕ ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್ ಸಹಿತ 57 ಎಸೆತಗಳಲ್ಲಿ 81 ರನ್ ಸಿಡಿಸಿದರು. ಪಂದ್ಯದಲ್ಲಿ ಮಿಚೆಲ್ ಸ್ಟಾರ್ಕ್ ಬೌಲಿಂಗ್ ನಲ್ಲಿ ಸಿಕ್ಸರ್ ಬಾರಿಸುತ್ತಿದ್ದಂತೆ ಹಿಟ್ ಮ್ಯಾನ್ ನೂತನ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಒಂದೇ ದೇಶದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಮೊದಲ ಆಟಗಾರ ಎಂಬ ದಾಖಲೆ ನಿರ್ಮಿಸುವ ಮೂಲಕ ನ್ಯೂಜಿಲೆಂಡ್ ನ ಮಾಜಿ ನಾಯಕ ಮಾರ್ಟಿನ್ ಗುಪ್ಟಿಲ್ ಹೆಸರಿನಲ್ಲಿದ್ದ ಸುದೀರ್ಘ ಕಾಲದ ದಾಖಲೆಯನ್ನು ರೋಹಿತ್ ಶರ್ಮಾ ಹಿಂದಿಕ್ಕಿದ್ದಾರೆ. ಹಿಟ್ ಮ್ಯಾನ್ ಭಾರತದ ಮೈದಾನಗಳಲ್ಲಿ 257 ಸಿಕ್ಸರ್ ಸಿಡಿಸಿದ್ದಾರೆ.

ಒಂದೇ ದೇಶದಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ಸ್‌
* ರೋಹಿತ್ ಶರ್ಮಾ- 257- ಭಾರತದಲ್ಲಿ
* ಮಾರ್ಟಿನ್ ಗಪ್ಟಿಲ್- 256- ನ್ಯೂಜಿಲೆಂಡ್ ನಲ್ಲಿ
* ಬ್ರೆಂಡನ್ ಮೆಕಲಮ್- 230- ನ್ಯೂಜಿಲೆಂಡ್ ನಲ್ಲಿ
* ಕ್ರಿಸ್ ಗೇಲ್ -228- ವೆಸ್ಟ್ಇಂಡೀಸ್ ನಲ್ಲಿ
* ಮಹೇಂದ್ರ ಸಿಂಗ್ ಧೋನಿ-180- ಭಾರತದಲ್ಲಿ

550 ಸಿಕ್ಸರ್ ಪೂರೈಸಿದ ಹಿಟ್ ಮ್ಯಾನ್
ಆಸ್ಟ್ರೇಲಿಯಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ 5 ಭರ್ಜರಿ ಸಿಕ್ಸರ್ ಸಿಡಿಸಿದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 550 ಸಿಕ್ಸರ್ ಕೂಡ ಪೂರೈಸಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ 2ನೇ ಆಟಗಾರರಾದರು. ವೆಸ್ಟ್ ಇಂಡೀಸ್ ನ ಕ್ರಿಸ್ ಗೇಲ್ 548 ಇನಿಂಗ್ಸ್ ನಿಂದ 553 ಸಿಕ್ಸರ್ ಸಿಡಿಸಿದ್ದರೆ, ಹಿಟ್ ಮ್ಯಾನ್ ಕೇವಲ 471 ಇನಿಂಗ್ಸ್ ನಿಂದ 550 ಸಿಕ್ಸರ್ ಸಿಡಿಸಿದ್ದು, ಗೇಲ್ ದಾಖಲೆ ಮುರಿಯಲು ರೋಹಿತ್ ಶರ್ಮಾಗೆ 4 ಸಿಕ್ಸರ್ ಗಳ ಅವಶ್ಯಕತೆ ಇದೆ.

ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಬ್ಯಾಟರ್ಸ್‌
1.ಕ್ರಿಸ್ ಗೇಲ್ (ವೆಸ್ಟ್ ಇಂಡೀಸ್) – 553 ಸಿಕ್ಸರ್
2. ರೋಹಿತ್ ಶರ್ಮಾ (ಭಾರತ) – 550 ಸಿಕ್ಸರ್*
3. ಶಾಹಿದ್ ಅಫ್ರಿದಿ (ಪಾಕಿಸ್ತಾನ) – 476 ಸಿಕ್ಸರ್
4. ಬ್ರೆಂಡನ್ ಮೆಕ್ಕಲಮ್ (ನ್ಯೂಜಿಲೆಂಡ್) – 398 ಸಿಕ್ಸರ್
5. ಮಾರ್ಟಿನ್ ಗಪ್ಟಿಲ್ (ನ್ಯೂಜಿಲೆಂಡ್) – 383 ಸಿಕ್ಸರ್

ಟೀಮ್ ಇಂಡಿಯಾಗೆ 66 ರನ್ ಸೋಲು
ಸೌರಾಷ್ಟ್ರ ಕ್ರಿಕೆಟ್ ಮೈದಾನದಲ್ಲಿ ಆಸ್ಟ್ರೇಲಿಯಾ ನೀಡಿದ 354 ಬೃಹತ್ ಮೊತ್ತ ಹಿಂಬಾಲಿಸಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (81 ರನ್) ಹಾಗೂ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ (56 ರನ್) ಅವರ ಅರ್ಧಶತಕಗಳ ಬಲವಿದ್ದರೂ, ಗ್ಲೆನ್ ಮ್ಯಾಕ್ಸ್ ವೆಲ್ (40ಕ್ಕೆ4)ಅವರು ಹೆಣೆದ ಸ್ಪಿನ್ ಬಲೆಯಲ್ಲಿ ಸೆರೆಯಾದ ಭಾರತ ತಂಡದ ಆಟಗಾರರು 49.4 ಓವರ್ ಗಳಲ್ಲಿ 286 ರನ್ ಗಳಿಗೆ ಆಲೌಟ್ ಆಗಿ 66 ರನ್ ಗಳ ಸೋಲು ಕಂಡಿದೆ.

ಮೊದಲೆರಡು ಪಂದ್ಯಗಳಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದ ಟೀಮ್ ಇಂಡಿಯಾ 2-1 ರಿಂದ ಸರಣಿಯನ್ನು ವಶಪಡಿಸಿಕೊಂಡಿತು.

andolanait

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

8 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

9 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

9 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

10 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

10 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

11 hours ago