Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ICC t20 worldcup 2024: ಟೀಂ ಇಂಡಿಯಾ ಫೈನಲ್‌ಗೆ ಲಗ್ಗೆಯಿಟ್ಟ ಬಳಿಕ ʼಹಿಟ್‌ ಮ್ಯಾನ್‌ʼ ಕಣ್ಣೀರು

ಗಯಾನ: ಇಲ್ಲಿನ ಪ್ರೋವಿಡಿಯನ್ಸ್‌ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್‌ನ ಎರಡನೇ ಸೆಮಿ ಫೈನಲ್ಸ್‌ನಲ್ಲಿ ಟೀಂ ಇಂಡಿಯಾ ಹಾಲಿ ಚಾಂಪಿಯನ್ಸ್‌ ಇಂಗ್ಲೆಂಡ್‌ ತಂಡವನ್ನು ಬಗ್ಗು ಬಡಿದು ಫೈನಲ್‌ ಪ್ರವೇಶಿಸಿತು.

ಇಂಗ್ಲೆಂಡ್‌ ತಂಡವನ್ನು 68 ರನ್‌ ಅಂತರದಿಂದ ಮಣಿಸಿ ದಶಕಗಳ ನಂತರ ಟೀಂ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ತಲುಪಿದೆ. ಈ ವೇಳೆ ನಾಯಕ ರೋಹಿತ್‌ ಶರ್ಮಾ ಭಾವುಕಾರಿದ್ದಾರೆ.

ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್‌ ಶರ್ಮಾ ಅರ್ಧಶತಕ, ಸೂರ್ಯಕುಮಾರ್‌ ಯಾದವ್‌ ಮತ್ತು ಹಾರ್ದಿಕ್‌ ಪಾಂಡ್ಯ ಉತ್ತಮ ಬ್ಯಾಟಿಂಗ್‌ ನೆರವಿನಿಂದ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 171 ರನ್‌ ಕಲೆಹಾಕಿ ಎದುರಾಳಿ ಇಂಗ್ಲೆಂಡ್‌ಗೆ 172 ರನ್‌ಗಳ ಗುರಿಯನ್ನು ನೀಡಿತ್ತು. ಈ ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲವಾದ ಇಂಗ್ಲೆಂಡ್‌ 16.4 ಓವರ್‌ಗಳಲ್ಲಿ 103 ರನ್‌ಗಳಿಗೆ ಆಲ್‌ಔಟ್‌ ಆಗಿ ಟೂರ್ನಿಯಿಂದ ನಿರ್ಗಮಿಸಿತು.

ಇಂಗ್ಲೆಂಡ್‌ ವಿರುದ್ಧ ಗೆದ್ದು ಬೀಗುತ್ತಿದ್ದಂತೆ ಟೀಂ ಇಂಡಿಯಾ ಡ್ರೆಸ್ಸಿಂಗ್‌ ರೂಂ ನಲ್ಲಿ ಸಂಭ್ರಮ ಮನೆ ಮಾಡಿತ್ತು. ಎಲ್ಲರೂ ನಗುಮೊಗದಿಂದ ಡ್ರೆಸ್ಸಿಂಗ್‌ ರೂಂ ಕಡೆಗೆ ಮುಖ ಮಾಡಿದರೇ ಅದಾಗಲೇ ಪೆವಿಲಿಯನ್‌ ಸೇರಿದ್ದ ನಾಯಕ ರೋಹಿತ್‌ ಶರ್ಮಾ ಗ್ಯಾಲರಿಯಲ್ಲಿ ಕುಳಿತು ತಂಡದ ಫೈನಲ್‌ ಪ್ರವೇಶಿಸಿದ್ದನ್ನು ನೆನೆದು ಭಾವುಕಾರದರು.

ಗ್ಯಾಲರಿಯಲ್ಲಿ ಕುಳಿತು ಭಾವುಕರಾಗಿದ್ದ ರೋಹಿತ್‌ ಶರ್ಮಾರನ್ನು ವಿರಾಟ್‌ ಕೊಹ್ಲಿ ಸಂತೈಸುತ್ತಿರುವ ದೃಶ್ಯ ಕಂಡುಬಂದಿದೆ. ಇನ್ನು ಈ ವೀಡಿಯೋ ಸಾಮಾಜಿಕ ಜಾಲತಾಣದ ಸಖತ್‌ ವೈರಲ್‌ ಆಗಿದ್ದು, ಹಿಟ್‌ ಮ್ಯಾನ್‌ ಸಾಧನೆಗೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

https://x.com/tyrion_jon/status/1806419197444207066

Tags:
error: Content is protected !!