ಕ್ರೀಡೆ

ಏಷ್ಯಾಕಪ್‌ಗೆ ಚಹಲ್‌ರನ್ನು ಕೈ ಬಿಡಲು ಕಾರಣ ತಿಳಿಸಿದ ರೋಹಿತ್‌ ಶರ್ಮಾ!

ನವದೆಹಲಿ : ತಂಡದಲ್ಲಿ ಬ್ಯಾಟಿಂಗ್‌ ಡೆಪ್ತ್‌ ಹೆಚ್ಚಿಸುವ ಸಲುವಾಗಿ 2023ರ ಏಷ್ಯಾ ಕಪ್‌ ಭಾರತ ತಂಡದಲ್ಲಿ ಲೆಗ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ ಅವರನ್ನು ಆಯ್ಕೆ ಮಾಡಲು ಆಯ್ಕೆದಾರರಿಗೆ ಸಾಧ್ಯವಾಗಲಿಲ್ಲ ಎಂದು ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೋಮವಾರ ಅಜಿತ್‌ ಅಗರ್ಕರ್‌ ನೇತೃತ್ವದ ಬಿಸಿಸಿಐ ಆಯ್ಕೆ ಸಮಿತಿಯು ಏಷ್ಯಾ ಕಪ್ ಟೂರ್ನಿಗೆ 17 ಸದಸ್ಯರ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ, ಯುಜ್ವೇಂದ್ರ ಚಹಲ್‌ ಸೇರಿದಂತೆ ವೆಸ್ಟ್ ಇಂಡೀಸ್‌ ಪ್ರವಾಸದಲ್ಲಿ ಕಾಣಿಸಿಕೊಂಡಿದ್ದ ಐವರು ಆಟಗಾರರನ್ನು ಬಿಸಿಸಿಐ ಕೈ ಬಿಟ್ಟಿದೆ. ಗಾಯದಿಂದ ಕಮ್‌ಬ್ಯಾಕ್‌ ಮಾಡಿರುವ ಕೆ.ಎಲ್‌ ರಾಹುಲ್‌, ಜಸ್‌ಪ್ರೀತ್‌ ಬುಮ್ರಾ ಹಾಗೂ ಶ್ರೇಯಸ್‌ ಅಯ್ಯರ್‌ ಅವರು ತಂಡಕ್ಕೆ ಮರಳಿದ್ದಾರೆ.

ಏಷ್ಯಾ ಕಪ್‌ ಭಾರತ ತಂಡದಲ್ಲಿ ಪೂರ್ಣ ಪ್ರಮಾಣದ ಸ್ಪಿನ್ನರ್‌ ಆಗಿ ಕೇವಲ ಚೈನಾಮನ್‌ ಖ್ಯಾತಿಯ ಕುಲ್ದೀಪ್‌ ಯಾದವ್ ಅವರನ್ನು ಮಾತ್ರ ಆಯ್ಕೆ ಮಾಡಲಿದ್ದು, ಸ್ಪಿನ್‌ ಆಲ್‌ರೌಂಡರ್‌ಗಳಾಗಿ ರವಿಂದ್ರ ಜಡೇಜಾ ಹಾಗೂ ಅಕ್ಷರ್‌ ಪಟೇಲ್‌ ಅವರನ್ನು ಉಳಿಸಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಯುಜ್ವೇಂದ್ರ ಚಹಲ್‌ ಅವರನ್ನು ಕೈ ಬಿಡಲಾಗಿದೆ. 2019ರ ಏಕದಿನ ವಿಶ್ವಕಪ್‌ ಬಳಿಕ ಚಹಲ್‌ 23 ಪಂದ್ಯಗಳಿಂದ ಮೂರು ಬಾರಿ 4 ವಿಕೆಟ್‌ ಸಾಧನೆ ಸೇರಿದಂತೆ 37 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

8-9ನೇ ಕ್ರಮಾಂಕಗಳಲ್ಲಿ ಬ್ಯಾಟಿಂಗ್‌ ಡೆಪ್ತ್ ಬೇಕು : ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೋಹಿತ್‌ ಶರ್ಮಾ, “ಆಫ್‌ ಸ್ಪಿನ್ನರ್‌ ಹಾಗೂ ಲೆಗ್‌ ಸ್ಪಿನ್ನರ್‌ ಬಗ್ಗೆ ನಾವು ಆಳವಾದ ಚರ್ಚೆಯನ್ನು ನಡೆಸಿದ್ದೆವು. ಆದರೆ, 8 ಮತ್ತು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಡೆಪ್ತ್‌ ಬೇಕೆಂಬ ಕಾರಣಕ್ಕೆ ಹೆಚ್ಚಿನ ಸ್ಪಿನ್ನರ್‌ಗಳನ್ನು ಆಯ್ಕೆ ಮಾಡಲಾಗಲಿಲ್ಲ,” ಎಂದು ಸ್ಪಷ್ಟನೆ ನೀಡಿದ್ದಾರೆ.

“ಈ ಕ್ರಮಾಂಕಗಳಲ್ಲಿ ಬ್ಯಾಟ್‌ ಮಾಡಬಲ್ಲ ಆಟಗಾರ ನಮಗೆ ಅಗತ್ಯವಿತ್ತು. ಅಕ್ಷರ್‌ ಪಟೇಲ್‌ ಈ ವರ್ಷ ವೈಟ್‌ ಬಾಲ್‌ ಕ್ರಿಕೆಟ್‌ನಲ್ಲಿ ಉತ್ತಮ ರನ್‌ ಗಳಿಸಿದ್ದಾರೆ. ಆದರೆ, ರೆಡ್‌ ಬಾಲ್‌ ಕ್ರಿಕೆಟ್‌ನಲ್ಲಿ ಹೆಚ್ಚಿನ ಅವಕಾಶ ಪಡೆಯದ ಹೊರತಾಗಿಯೂ ಅವರು ವೈಟ್‌ಬಾಲ್‌ ಕ್ರಿಕೆಟ್‌, ವಿಶೇಷವಾಗಿ ಐಪಿಎಲ್‌ನಲ್ಲಿ ಚೆನ್ನಾಗಿ ಬ್ಯಾಟ್‌ ಮಾಡಿದ್ದಾರೆ. ವಿಂಡೀಸ್‌ ಸರಣಿಯಲ್ಲಿ ಇವರಿಗೆ ಹೆಚ್ಚಿನ ಅವಕಾಶ ಸಿಕ್ಕಿರಲಿಲ್ಲ. ಇವರು ಎಡಗೈ ಬ್ಯಾಟ್ಸ್‌ಮನ್‌ ಆಗಿರುವ ಕಾರಣ ಬ್ಯಾಕೆಂಡ್‌ನಲ್ಲಿ ಸ್ಪಿನ್ನರ್‌ಗಳನ್ನು ಎದುರಿಸಲು ಸಾಧ್ಯವಾಗುತ್ತದೆ,” ಎಂದು ರೋಹಿತ್‌ ಶರ್ಮಾ ತಿಳಿಸಿದ್ದಾರೆ.

ಮುಂದಿನ ಎರಡು ತಿಂಗಳುಗಳಲ್ಲಿ ವೇಗಿಗಳ ಪಾತ್ರ ಮುಖ್ಯ : “ಆಫ್‌ ಸ್ಪಿನ್ನರ್‌ಗಳ ಬಗ್ಗೆಯೂ ನಾವು ಚರ್ಚೆ ನಡೆಸಿದೆವು. ಆರ್‌ ಅಶ್ವಿನ್‌ ಹಾಗೂ ವಾಷಿಂಗ್ಟನ್‌ ಸುಂದರ್‌ ನಮಗೆ ಮಿಸ್‌ ಆಗಿದ್ದಾರೆ. ಮತ್ತೊಂದೆಡೆ ಚಹಲ್‌ಗೂ ಸ್ಥಾನ ಸಿಕ್ಕಿಲ್ಲ. ಏಕೆಂದರೆ ನಾವು ಆಯ್ಕೆ ಮಾಡಿದ್ದು ಕೇವಲ 17 ಆಟಗಾರರನ್ನು ಮಾತ್ರ. ಏಕೆಂದರೆ ಸೀಮರ್‌ಗಳ ಜೊತೆ ಕೇವಲ ಒಬ್ಬರು ಸ್ಪಿನ್ನರ್‌ ಅನ್ನು ಆಡಿಸಬೇಕೆಂದು ಅಂದುಕೊಂಡಿದ್ದೇವೆ. ಮುಂದಿನ ಎರಡು ತಿಂಗಳುಗಳ ಕಾಲ ವೇಗದ ಬೌಲರ್‌ಗಳು ಮಹತ್ವದ ಪಾತ್ರವನ್ನು ನಿರ್ವಹಿಸಬೇಕಾಗುತ್ತದೆ. ಹಾಗಾಗಿ ವೇಗಿಗಳಿಗೆ ಹೆಚ್ಚಿನ ಅವಕಾಶ ನೀಡುವ ಮೂಲಕ ಅವರಿಗೆ ಅವರದೇ ಆದ ಗೇಮ್ ಟೈಮ್‌ ನೀಡಬೇಕಾಗಿದೆ,” ಎಂದು ಟೀಮ್‌ ಇಂಡಿಯಾ ನಾಯಕ ರೋಹಿತ್‌ ಶರ್ಮ ಸ್ಪಷ್ಟಪಡಿಸಿದ್ದಾರೆ.

andolanait

Recent Posts

ಕನ್ನಡಿಗರಿಗೆ ಉದ್ಯೋಗ ನೀಡದ ಸಾಹಿತ್ಯ ಸಮ್ಮೇಳನ: ವಾಟಲ್‌ ನಾಗರಾಜ್‌ ಆಕ್ರೋಶ

ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…

5 hours ago

ಹಾಸ್ಯ ಸಾಹಿತ್ಯ ಆಧುನಿಕ ಬದುಕಿಗೆ ಔಷಧಿ: ಪ್ರೊ.ಕರಿಯಪ್ಪ

ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…

5 hours ago

ಸಿ & ಡಿ ಲ್ಯಾಂಡ್ ಸಮಸ್ಯೆ ಪರಿಹಾರಕ್ಕೆ ಉನ್ನತ ಮಟ್ಟದ ಸಮಿತಿ: ಯು.ಟಿ. ಖಾದರ್

ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…

5 hours ago

ಸಿ.ಟಿ ರವಿ ಕೊಲೆಗೆ ಪೊಲೀಸರ ಸಂಚು: ಅಶೋಕ್‌ ಆರೋಪ

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…

6 hours ago

ವಿರಾಜಪೇಟೆ | ಬಿಟ್ಟಂಗಾಲದಲ್ಲಿ ಚಿರತೆ ಬೆಕ್ಕು ಸಾವು

ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…

6 hours ago

ಮೈಸೂರಿನ ಫಾರ್ಮ್‌ಹೌಸ್‌ನಲ್ಲಿ ನಟ ದರ್ಶನ್‌ ವಾಸ್ತವ್ಯ

ಮೈಸೂರು: ನಟ ದರ್ಶನ್‌ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…

6 hours ago