ನವದೆಹಲಿ: ಇದೇ ಸೆಪ್ಟೆಂಬರ್ 5 ರಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಭಾಗವಹಿಸುವಂತೆ ಟೀಂ ಇಂಡಿಯಾ ಆಟಗಾರರಿಗೆ ಬಿಸಿಸಿಐ ಸೂಚನೆ ನೀಡಲಾಗಿದೆ.
ಶ್ರೀಲಂಕಾ ವಿರುದ್ಧ ಏಕದಿನ ಸರಣಿಯಲ್ಲಿ ಹೀನಾಯ ಸೋಲು ಕಂಡ ಬಳಿಕ ಮುಂಬರುವ ಸರಣಿಗಳಲ್ಲಿ ಭಾರತ ತಂಡದ ಆಟಗಾರರಿಗೆ ಉತ್ತಮ ಪ್ರದರ್ಶನ ತೋರಲು ದುಲೀಪ್ ಟ್ರೋಫಿ ಉತ್ತಮ ವೇದಿಕೆಯಾಗಿದ್ದು, ಅದನ್ನು ಬಳಸಿಕೊಳ್ಳುವಂತೆ ಬಿಸಿಸಿಐ ತಿಳಿಸಿದೆ ಎನ್ನಲಾಗಿದೆ.
ಅಂದಹಾಗೆ ಭಾರತ ತಂಡದ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರಿಗೆ ಬಿಸಿಸಿಐ ನಿರ್ದೇಶನ ನೀಡಿದೆ. ಹೀಗಾಗಿ ಮುಂಬರುವ ದೇಸೀಯ ಟೂರ್ನಿಗಳಲ್ಲಿ ಭಾರತದ ಸ್ಟಾರ್ ಆಟಗಾರರು ಕಾಣಿಸಿಕೊಳ್ಳುವ ಸಾಧ್ಯತೆಯಿದೆ.
ಬರೀ ರೋಹಿತ್, ಕೊಹ್ಲಿಗೆ ಮಾತ್ರವಲ್ಲದೇ, ಕನ್ನಡಿಗ ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕಲ್ದೀಪ್ ಯಾದವ್, ಜೈಸ್ವಾಲ್, ಶುಬ್‌ಮನ್ ಗಿಲ್ ಗೆ ದೇಸಿ ಟೂರ್ನಿಗಳಲ್ಲಿ ಆಡುವಂತೆ ಸೂಚಿಸಲಾಗಿದೆ.
ಶ್ರೀಲಂಕಾ ಸರಣಿ ಬಳಿಕ ಇದೇ ಸೆಪ್ಟೆಂಬರ್ 19 ರಿಂದ ಬಾಂಗ್ಲಾದೇಶದ ವಿರುದ್ಧ ಮೊದಲ ಟೆಸ್ಟ್ ಆಡುವ ಮೂಲಕ ಭಾರತ ಹಾಗೂ ಬಾಂಗ್ಲಾದೇಶ ನಡುವಣ ಸರಣಿ ಆರಂಭವಾಗುತ್ತದೆ. ಇದಕ್ಕೂ ಮೊದಲು ಸಿದ್ಧತೆ ನಡೆಸಿಕೊಳ್ಳಲು ಭಾರತ ತಂಡದ ಆಟಗಾರರಿಗೆ ವೇದಿಕೆ ನೀಡಲಾಗಿದೆ.
ಸೆಪ್ಟೆಂಬರ್ 5ರಿಂದ 24 ವರೆಗೆ ದುಲೀಪ್ ಟ್ರೋಫಿ ನಡೆಯಲಿದ್ದು, ಇದರಲ್ಲಿ ಆರು ವಲಯಗಳು ಭಾಗವಹಿಸಲಿವೆ.
ಕೇಂದ್ರ, ದಕ್ಷಿಣ, ಪೂರ್ವ, ಪಶ್ಚಿಮ, ಉತ್ತರ ಹಾಗೂ ಈಶಾನ್ಯ ವಲಯಗಳು ಈ ಟ್ರೋಫಿ ಆಡಲಿವೆ. ದಕ್ಷಿಣ ವಲಯದಲ್ಲಿ ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಕೇರಳ, ಹೈದರಾಬಾದ್, ಪಾಂಡಿಚೇರಿ ಹಾಗೂ ಗೋವಾ ತಂಡಗಳು ಆಡಲಿವೆ.
ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…
ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…
ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…
ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…
ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್ ವರ್ಕರ್ಸ್ ಫೆಡರೇಷನ್ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್ ಸುಬ್ಬರಾವ್ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…