ಸದ್ಯ ಭಾರತದಲ್ಲಿ ಏಕದಿನ ವಿಶ್ವಕಪ್ ಸಮರ ನಡೆಯುತ್ತಿದ್ದು ಭಾರತ, ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಮಿಫೈನಲ್ ಸುತ್ತಿಗೆ ಅಧಿಕೃತವಾಗಿ ಪ್ರವೇಶ ಪಡೆದುಕೊಂಡಿವೆ. ಇನ್ನುಳಿದ ಒಂದು ಸ್ಥಾನಕ್ಕೆ ನ್ಯೂಜಿಲೆಂಡ್ ತಂಡ ಅರ್ಹತೆ ಗಿಟ್ಟಿಸಿಕೊಳ್ಳುವುದು ಬಹುತೇಕ ಖಚಿತವಾಗಿದ್ದು, ಈ ನಾಲ್ಕು ತಂಡಗಳಲ್ಲಿ ಯಾವ ತಂಡ ಚಾಂಪಿಯನ್ ಆಗಲಿದೆ ಎಂಬ ಕುತೂಹಲ ಮೂಡಿದೆ.
ಇನ್ನು ಟೀಮ್ ಇಂಡಿಯಾ ಈ ಬಾರಿಯ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಯಶಸ್ಸು ಸಾಧಿಸಿದ ತಂಡ ಎಂಬ ದಾಖಲೆ ಬರೆದಿದೆ. ಹೌದು, ಟೀಮ್ ಇಂಡಿಯಾ ಇಲ್ಲಿಯವರೆಗೂ ಆಡಿರುವ ಎಲ್ಲಾ ಎಂಟು ಲೀಗ್ ಪಂದ್ಯಗಳಲ್ಲಿಯೂ ಭರ್ಜರಿ ಜಯ ಸಾಧಿಸಿದ್ದು, ಸೆಮೀಸ್‌ಗೆ ಲಗ್ಗೆ ಇಟ್ಟ ಮೊದಲ ತಂಡ ಎನಿಸಿಕೊಂಡಿತ್ತು.
ತಂಡದ ಎಲ್ಲಾ ವಿಭಾಗವೂ ಯಶಸ್ವಿ ಪ್ರದರ್ಶನ ನೀಡುತ್ತಿರುವ ಕಾರಣ ತಂಡ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವು ಸಾಧಿಸಿದ್ದು, ನಾಯಕ ರೋಹಿತ್ ಶರ್ಮಾಗೆ ಎಲ್ಲೆಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಿಸಿಸಿಐನ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ ಸಹ ಈ ಕುರಿತು ಪ್ರತಿಕ್ರಿಯಿಸಿದ್ದು, ರೋಹಿತ್ ಶರ್ಮಾ ನಾಯಕನಾಗಲು ತಾನು ಸ್ವತಃ ಒತ್ತಾಯಿಸಿದ್ದೆ ಎಂಬ ವಿಚಾರವನ್ನು ಈ ಸಂದರ್ಭದಲ್ಲಿ ಹಂಚಿಕೊಂಡಿದ್ದಾರೆ.
ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಗೂಲಿ ಮೊದಲಿಗೆ ರೋಹಿತ್‌ಗೆ ನಾಯಕತ್ವವನ್ನು ವಹಿಸುಕೊಳ್ಳುವಂತೆ ತಾವು ಕೇಳಿದ್ದಾಗ ನಿರಾಕರಿಸಿದ್ದರು ಎಂದಿದ್ದಾರೆ. “ಎಲ್ಲಾ ಮೂರು ಮಾದರಿಯ ಕ್ರಿಕೆಟ್ ಆಡಬೇಕಿದ್ದ ಕಾರಣ ಒತ್ತಡ ಹೆಚ್ಚಿದ್ದರಿಂದ ರೋಹಿತ್‌ಗೆ ನಾಯಕನ ಪಟ್ಟ ಬೇಕಿರಲಿಲ್ಲ. ಒಂದು ಹಂತದಲ್ಲಿ ನೀನು ನಾಯಕನಾಗಲು ಒಪ್ಪದೇ ಇದ್ದರೆ ನಾನೇ ಸ್ವತಃ ನಿನ್ನ ಹೆಸರನ್ನು ಘೋಷಿಸುತ್ತೇನೆ ಎಂದಿದ್ದೆ. ಆತ ಜವಾಬ್ದಾರಿಯನ್ನು ವಹಿಸಿಕೊಂಡಿದ್ದರ ಬಗ್ಗೆ ನನಗೆ ಸಂತಸವಿದೆ, ಆತ ಅಚ್ಚುಕಟ್ಟಾಗಿ ನಾಯಕತ್ವ ನಿರ್ವಹಿಸುತ್ತಿದ್ದಾನೆ, ಫಲಿತಾಂಶವನ್ನು ನೀವೇ ನೋಡಬಹುದಾಗಿದೆ” ಎಂದು ಗಂಗೂಲಿ ಹೇಳಿದ್ದಾರೆ.
ಹೀಗೆ ಗಂಗೂಲಿ ನೀಡಿದ ಹೇಳಿಕೆ ಈ ಹಿಂದೆ ಎದ್ದಿದ್ದ ದೊಡ್ಡ ವಿವಾದವನ್ನು ಮತ್ತೆ ಮುನ್ನೆಲೆಗೆ ತಂದಿದೆ. ಹೌದು, ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಿದ್ದು ಆಗ ಬಿಸಿಸಿಐ ಅಧ್ಯಕ್ಷನಾಗಿದ್ದ ಗಂಗೂಲಿ ಎಂಬ ಸುದ್ದಿ ಹರಿದಾಡಿತ್ತು. ಇದರಿಂದ ಕೊಹ್ಲಿ ಅಭಿಮಾನಿಗಳು ದಾದಾ ವಿರುದ್ಧ ತಿರುಗಿಬಿದ್ದಿದ್ರು. ಸದ್ಯ ರೋಹಿತ್ ಅನ್ನು ಒತ್ತಾಯಪೂರ್ವಕವಾಗಿ ನಾಯಕ ಮಾಡಿದೆ ಎಂಬ ದಾದಾ ಹೇಳಿಕೆ ಕೊಹ್ಲಿ ಅಭಿಮಾನಿಗಳನ್ನು ಮತ್ತೆ ಕೆರಳಿಸಿದೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…