ಮುಂಬೈ: ಮುಂಬರುವ ಚಾಂಪಿಯನ್ಸ್ ಟ್ರೋಫಿ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಕ್ರಿಕೆಟ್ ಸರಣಿಗೆ ಭಾರತದ 15 ಸದಸ್ಯರ ತಂಡವನ್ನು ಅಜಿತ್ ಅಗರ್ಕರ್ ನೇತೃತ್ವದ ಆಯ್ಕೆ ಸಮಿತಿ ಶನಿವಾರ ಪ್ರಕಟಿಸಿದೆ.
ನಿರೀಕ್ಷೆಯಂತೆ ರೋಹಿತ್ ಶರ್ಮಾ ನಾಯಕನಾಗಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಶುಭಮನ್ ಗಿಲ್‌ಗೆ ಉಪನಾಯಕನ ಹೊಣೆ ನೀಡಲಾಗಿದೆ.
ಚಾಂಪಿಯನ್ಸ್ ಟ್ರೋಫಿಯು ಫೆ.19ರಿಂದ ಆರಂಭವಾಗಿ ಮಾರ್ಚ್ 9 ರವರೆಗೆ ನಡೆಯಲಿದೆ.
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಅತಿಥ್ಯವಹಿಸಿದ್ದು, ಭಾರತ ತನ್ನ ಎಲ್ಲಾ ಪಂದ್ಯವನ್ನು ದುಬೈನಲ್ಲಿ ಆಡಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್. ರಾಹುಲ್, ಹಾರದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್‌ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರವೀಂದ್ರ ಜಡೇಜಾ, ರಿಷಭ್ ಪಂತ್.