ಪ್ಯಾರಿಸ್: ಇಂದು ನಡೆದ ಮಹಿಳೆಯರ ಏರ್ ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.
ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಶೂಟರ್‌ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದಾರೆ. ರುಬಿನಾ ಫ್ರಾನ್ಸಿಸ್ ಅವರು ಮಹಿಳೆಯರ ಏರ್ ಪಿಸ್ತೂಲ್ ಎಸ್‌ಎಸ್1 ಸ್ಪರ್ಧೆಯ ಫೈನಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಶೂಟಿಂಗ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಹಾಗೂ ಒಟ್ಟಾರೆ ಪದಕಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಇಂದು ನಡೆದ ಮಹಿಳೆಯರ ಏರ್‌ಪಿಸ್ತೂಲ್ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು
211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
ಎಂಟು ಮಹಿಳೆಯರ ನಡುವೆ ನಡೆದ ಈ ಫೈನಲ್ ಸುತ್ತಿನಲ್ಲಿ ರುಬಿನಾ ಬೆಳ್ಳಿ ಪದಕದ ರೇಸ್‌ನಲ್ಲಿದ್ದರು. ಆದರೆ ಕೊನೆಯ ಎರಡು ಶಾಟ್‌ಗಳಲ್ಲಿ ಲಯ ಕಳೆದುಕೊಂಡ ಅವರು ಒಟ್ಟು 211.1 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದರು.