ಕ್ರೀಡೆ

ಏರ್‌ ಪಿಸ್ತೂಲ್‌ ಸ್ಪರ್ಧೆಯಲ್ಲಿ ಕಂಚು ಗೆದ್ದ ರುಬಿನಾ ಫ್ರಾನ್ಸಿಸ್‌

ಪ್ಯಾರಿಸ್: ಇಂದು ನಡೆದ ಮಹಿಳೆಯರ ಏರ್‌ ಪಿಸ್ತೂಲ್‌ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು 211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡರು.

ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಶೂಟರ್‌ಗಳು ಉತ್ತಮ ಪ್ರದರ್ಶನ ಮುಂದುವರಿಸಿದ್ದಾರೆ. ರುಬಿನಾ ಫ್ರಾನ್ಸಿಸ್‌ ಅವರು ಮಹಿಳೆಯರ ಏರ್‌ ಪಿಸ್ತೂಲ್‌ ಎಸ್‌ಎಸ್‌1 ಸ್ಪರ್ಧೆಯ ಫೈನಲ್‌ನಲ್ಲಿ ಕಂಚಿನ ಪದಕ ಗೆದ್ದಿದ್ದಾರೆ. ಇದರೊಂದಿಗೆ ಶೂಟಿಂಗ್‌ನಲ್ಲಿ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಹಾಗೂ ಒಟ್ಟಾರೆ ಪದಕಗಳ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಇಂದು ನಡೆದ ಮಹಿಳೆಯರ ಏರ್‌ಪಿಸ್ತೂಲ್‌ ಸ್ಪರ್ಧೆಯ ಫೈನಲ್‌ನಲ್ಲಿ ರುಬಿನಾ ಒಟ್ಟು
211.1 ಅಂಕ ಗಳಿಸಿ ಮೂರನೇ ಸ್ಥಾನ ಪಡೆಯುವ ಮೂಲಕ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಎಂಟು ಮಹಿಳೆಯರ ನಡುವೆ ನಡೆದ ಈ ಫೈನಲ್‌ ಸುತ್ತಿನಲ್ಲಿ ರುಬಿನಾ ಬೆಳ್ಳಿ ಪದಕದ ರೇಸ್‌ನಲ್ಲಿದ್ದರು. ಆದರೆ ಕೊನೆಯ ಎರಡು ಶಾಟ್‌ಗಳಲ್ಲಿ ಲಯ ಕಳೆದುಕೊಂಡ ಅವರು ಒಟ್ಟು 211.1 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಪ್ರಧಾನಿ ಮೋದಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ತಿರುವನಂತಪುರಂ : ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದ ವಿರುದ್ಧ ಕಾಂಗ್ರೆಸ್‌ ಮತ್ತು ಸಿಪಿಎಂ…

32 mins ago

ಸಭೆ ನಡೆಸುತ್ತಿರುವಾಗಲೇ ತೀವ್ರ ಅಸ್ವಸ್ಥ ; ಡಿಸಿಎಂ ಪವನ್‌ ಕಲ್ಯಾಣ್‌ಗೆ ದಿಢೀರ್‌ ಶಸ್ತ್ರ ಚಿಕಿತ್ಸೆ,

ಹೈದರಾಬಾದ್ : ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರಿಗೆ ಹೈದರಾಬಾದ್‌ನಲ್ಲಿ ತುರ್ತು ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಸದ್ಯ…

1 hour ago

ಸರ್ವಾಧಿಕಾರಿ ಬಿಜೆಪಿಯೇ ಮಹಿಳಾ ವಿರೋಧಿ : ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಂಗಳೂರು : ಮಹಿಳಾ ಮೀಸಲಾತಿ ಪರಿಕಲ್ಪನೆ ಕಾಂಗ್ರೆಸ್‌ನ ಕೂಸು. ಮಸೂದೆಗೆ ಸೋಲಾಗಲಿದೆ ಎಂದು ಗೊತ್ತಿದ್ದರೂ ಸರ್ವಾಧಿಕಾರಿಯಂತೆ ಯಾವುದೇ ಚರ್ಚೆ ಮಾಡದೆ,…

2 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ ಪ್ರಕರಣ : ಎಸ್‌.ಪಿ.ಮಲ್ಲಿಕಾರ್ಜುನ ಹೇಳಿದ್ದೇನು?

ಮೈಸೂರು : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪತ್ನಿಯೇ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ…

2 hours ago

ಇಟಲಿಯಲ್ಲಿ ಇಬ್ಬರು ಭಾರತೀಯರಿಗೆ ಗುಂಡಿಕ್ಕಿ ಹತ್ಯೆ

ರೋಮ್‌ : ಇಟಲಿಯ ಬರ್ಗಾಮೊ ಪ್ರಾಂತ್ಯದ ಕೊವೊದಲ್ಲಿ ಇಬ್ಬರು ಭಾರತೀಯರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಕೊವೊ ನಿವಾಸಿ ರಾಗಿಂದರ್ ಸಿಂಗ್…

2 hours ago

ಮೈಸೂರು | ಪಬ್‌ನಲ್ಲಿ ಗಲಾಟೆ ; ಓರ್ವ ಯುವಕನ ಕೊಲೆ

ಮೈಸೂರು : ಪಬ್‌ನಲ್ಲಿ ನಡೆದ ಗಲಾಟೆ ಪರಿಣಾಮ ಓರ್ವ ಯುವಕ ಕೊಲೆಯಾಗಿರುವ ಘಟನೆ ಮೈಸೂರಿನ ವಿಜಯನಗರದ ಎರಡನೇ ಹಂತದ ರೆಸ್ಟೋರೆಂಟ್‌ನಲ್ಲಿ…

2 hours ago