ಕ್ರೀಡೆ

SA20: ಚಾಂಪಿಯನ್ಸ್ ಪಟ್ಟ ಅಲಂಕರಿಸಿದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್

ನ್ಯೂಲೆಂಡ್ಸ್‌: ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಎಡನ್‌ ಮಾರ್ಕ್ರಂ ನಾಯಕತ್ವದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಚಾಂಪಿಯನ್ಸ್​ ಆಗಿ ಹೊರಹೊಮ್ಮಿದೆ.

ಕೇಪ್​ಟೌನ್​​ನ ನ್ಯೂಲ್ಯಾಂಡ್ಸ್​ ಮೈದಾನದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ಡರ್ಬನ್ ಸೂಪರ್ ಜೈಂಟ್ಸ್​ ವಿರುದ್ಧ 89 ರನ್​ಗಳ ಭರ್ಜರಿ ಜಯ ಸಾಧಿಸುವ ಮೂಲಕ ಐಡೆನ್ ಮಾರ್ಕ್ರಾಮ್ ಪಡೆ 2ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಟಾಸ್ ಗೆದ್ದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಇನಿಂಗ್ಸ್ ಆರಂಭಿಸಿದ ಜೋರ್ಡನ್ ಹರ್ಮನ್ 26 ಎಸೆತಗಳಲ್ಲಿ 42 ರನ್​ ಬಾರಿಸುವ ಮೂಲಕ ಸನ್​ರೈಸರ್ಸ್​ ತಂಡಕ್ಕೆ ಉತ್ತಮ ಆರಂಭ ಒದಗಿಸಿದ್ದರು. ಮತ್ತೊಂದೆಡೆ ಡೇವಿಡ್ ಮಲಾನ್ ಕೇವಲ 6 ರನ್​ಗಳಿಸಿ ವಿಕೆಟ್ ಒಪ್ಪಿಸಿದ್ದರು.

ಈ ವೇಳೆ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ಟಾಮ್ ಅಬೆಲ್ 34 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ 55 ರನ್​ ಚಚ್ಚಿದ್ದರು. ಇನ್ನು ನಾಯಕ ಐಡೆನ್ ಮಾರ್ಕ್ರಾಮ್ 26 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 42 ರನ್ ಬಾರಿಸಿದರು.

ಅಂತಿಮ ಹಂತದಲ್ಲಿ ಅಬ್ಬರಿಸಿದ ಯುವ ದಾಂಡಿಗ ಟ್ರಿಸ್ಟನ್ ಸ್ಟಬ್ಸ್ 30 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 56 ರನ್​ ಸಿಡಿಸಿದರು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 204 ರನ್ ಕಲೆಹಾಕಿತು.

205 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಡರ್ಬನ್ ಸೂಪರ್ ಜೈಂಟ್ಸ್ ತಂಡವು ಯಾವುದೇ ಹಂತದಲ್ಲೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ಬೌಲರ್​ಗಳ ವಿರುದ್ಧ ಮೇಲುಗೈ ಸಾಧಿಸಲಾಗಲಿಲ್ಲ. ಆರಂಭಿಕನಾಗಿ ಕಣಕ್ಕಿಳಿದ ಸ್ಟಾರ್ ಆಟಗಾರ ಕ್ವಿಂಟನ್ ಡಿಕಾಕ್ 3 ರನ್ ಬಾರಿಸಿ ವಾರೊಲ್​ಗೆ ವಿಕೆಟ್​ ಒಪ್ಪಿಸಿದರೆ, ಮ್ಯಾಥ್ಯೂ ಬ್ರೀಟ್​​ಝ್ಕಿ 18 ರನ್​ಗಳಿಸಲು 27 ಎಸೆತಗಳನ್ನು ತೆಗೆದುಕೊಂಡಿದ್ದರು.

ಈ ಹಂತದಲ್ಲಿ ದಾಳಿಗಿಳಿದ ಮಾರ್ಕೊ ಯಾನ್ಸೆನ್ ಸ್ಮಟ್ಸ್ (1), ಭಾನುಕಾ ರಾಜಪಕ್ಸೆ (0) ವಿಕೆಟ್ ಪಡೆದ ಬ್ಯಾಕ್ ಟು ಬ್ಯಾಕ್ ಯಶಸ್ಸು ತಂದುಕೊಟ್ಟರು. ಇನ್ನು ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಅವರನ್ನು ಶೂನ್ಯಕ್ಕೆ ಔಟ್ ಮಾಡುವಲ್ಲಿ ಬಾರ್ಟ್​ಮ್ಯಾನ್ ಯಶಸ್ವಿಯಾದರು. ಕೇವಲ 65 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡ ಡರ್ಬನ್ ತಂಡವು ಆ ಬಳಿಕ ಚೇತರಿಸಿಕೊಳ್ಳಲೇ ಇಲ್ಲ.

ಅಂತಿಮವಾಗಿ 17 ಓವರ್​ಗಳಲ್ಲಿ 115 ರನ್​ಗಳಿಗೆ ಆಲೌಟ್ ಆಗುವ ಮೂಲಕ ಡರ್ಬನ್ ಸೂಪರ್ ಜೈಂಟ್ಸ್ ತಂಡವು 89 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡವು 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿತು.

ಪಂದ್ಯ ಶ್ರೇಷ್ಠ: ಟಾಮ್‌ ಎಬೆಲ್‌

ಸರಣಿ ಶ್ರೇಷ್ಠ: ಎನ್ರಿಚ್‌ ಕ್ಲಾಸೆನ್‌

andolanait

Recent Posts

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

1 hour ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

1 hour ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

1 hour ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

2 hours ago

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

2 hours ago

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

3 hours ago