ಕ್ರೀಡೆ

ಏಕದಿನ ವಿಶ್ವಕಪ್‌ನಲ್ಲಿ ಸಚಿನ್‌-ಎಬಿಡಿ ದಾಖಲೆ ಸರಿಗಟ್ಟಿದ ಹಿಟ್‌ ಮ್ಯಾನ್‌.!

ಬೆಂಗಳೂರು : ಏಕದಿನ ವಿಶ್ವಕಪ್‌ ಟೂರ್ನಿಯ 45ನೇ ಪಂದ್ಯದಲ್ಲಿ ಭಾರತ ಮತ್ತು ನೆದರ್‌ಲ್ಯಾಂಡ್ಸ್‌ ತಂಡಗಳು ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ನಾಯಕ ರೊಹಿತ್‌ ಶರ್ಮಾ ಮತ್ತೊಂದು ಮೈಲಿಗಲ್ಲಿಗೆ ಸೇರಿದ್ದಾರೆ.

ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಈ ವಿಶೇಷ ಎರಡು ದಾಖಲೆ ಮಾಡಿದ್ದು, ಗಾಡ್‌ ಆಫ್‌ ಕ್ರಿಕೆಟ್‌ ಸಚಿನ್‌ ತೆಂಡುಲ್ಕರ್‌ ಹಾಗೂ ಮಿಸ್ಟರ್‌ 360 ಖ್ಯಾತಿಯ ಎಬಿಡಿ ಅವರ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

ನೆದರ್‌ಲ್ಯಾಂಡ್‌ ವಿರುದ್ಧದ ಪಂದ್ಯದಲ್ಲಿ ಮತ್ತೊಂದು ಅರ್ಧ ಶತಕ ಬಾರಿಸಿರುವ ಹಿಟ್‌ ಮ್ಯಾನ್‌ ವರ್ಲ್ಡ್‌ ಕಪ್‌ ಟೂರ್ನಿಯೊಂದರಲ್ಲಿ ಸತತ ಎರಡು ಬಾರಿ 500+ ರನ್‌ ದಾಖಲಿಸಿದ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಈ ದಾಖಲೆಯನ್ನು ರೋಹಿತ್‌ ಶರ್ಮಾ 2019 ಮತ್ತು 2023 ರಲ್ಲಿ ಬಾರಿಸಿದ್ದಾರೆ.

ಈ ಹಿಂದೆ ಸಚಿನ್‌ ತೆಂಡುಲ್ಕರ್‌ ಅವರು 1996 ಮತ್ತು 2003 ರಲ್ಲಿ 500ಕ್ಕೂ ಅಧಿಕ ರನ್‌ ಬಾರಿಸಿದ್ದು ಈವರೆಗಿನ ದಾಖಲೆಯಾಗಿತ್ತು.

ಈ ದಾಖಲೆಯೊಂದಿಗೆ ಮತ್ತೊಂದು ದಾಖಲೆ ಹಿಟ್‌ ಮ್ಯಾನ್‌ ಹೆಸರಿಗೆ ದಾಖಲಾಗಿದೆ ಅದು ವರ್ಷವೊಂದರಲ್ಲಿ ದಾಖಲೆಯ ಸಿಕ್ಸರ್‌ ಗಳಿಕೆಯ ಗರಿ ರೋಹಿತ್‌ ಪಾಲಾಗಿದೆ. ಇದಕ್ಕೂ ಮೊದಲು 360 ಖ್ಯಾತಿಯ ಎಬಿ ಡಿವಿಲಿಯರ್ಸ್‌ ಅವರು 2015ರಲ್ಲಿ ಗರಿಷ್ಠ 58 ಸಿಕ್ಸರ್‌ ಬಾರಿಸಿದ್ದು ದಾಖಲೆಯಾಗಿತ್ತು, ಇದನ್ನು ಮುರಿದ ರೋಹಿತ್‌ ಶರ್ಮಾ ದಾಖಲೆಯ 60 ಸಿಕ್ಸರ್‌ ಸಿಡಿಸಿ ತಮ್ಮ ಹೆಸರಿಗೆ ಈ ದಾಖಲೆಯನ್ನು ನೋಂದಾಯಿಸಿಕೊಂಡಿದ್ದಾರೆ.

 

andolanait

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

10 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

19 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

19 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago