ಮುಂಬೈ: 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಭಾಜನರಾಗಿದ್ದಾರೆ.
ಭಾರತ ತಂಡದ ಪರ ಒಟ್ಟು 664 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ಟೆಸ್ಟ್, ಏಕದಿನ, ಟಿ20 ಸೇರಿದಂತೆ ಹಲವಾರು ದಾಖಲೆಗಳು ಅವರ ಹೆಸರಿನಲ್ಲಿದೆ.
ಕ್ರಿಕೆಟ್ ಕ್ಷೇತ್ರಕ್ಕೆ ಅವರ ನೀಡಿದ ಕೊಡುಗೆ ಗಮನಿಸಿ, ಬಿಸಿಸಿಐ 2024ನೇ ಸಾಲಿನ ಕರ್ನಲ್ ಸಿ.ಕೆ.ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡುತ್ತಿದೆ ಎಂದು ಮಂಡಳಿ ತಿಳಿಸಿದೆ.
ಸಚಿನ್ 200 ಟೆಸ್ಟ್ ಪಂದ್ಯಗಳಲ್ಲಿ 15,921 ರನ್‌ಗಳು ಹಾಗೂ 463 ಏಕದಿನ ಪಂದ್ಯಗಳಲ್ಲಿ 18,426 ರನ್‌ಗಳನ್ನು ಗಳಿಸಿದ್ದಾರೆ. ತಮ್ಮ ವೃತ್ತಿ ಜೀವನದಲ್ಲಿ ಒಂದು ಅಂತರಾಷ್ಟ್ರೀಯ ಟಿ20 ಪಂದ್ಯವನ್ನಾಡಿದ್ದಾರೆ.
ಬಳ್ಳಾರಿ: ಹೊಸಪೇಟೆ ಹೊರವಲಯದಲ್ಲಿರುವ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯಕ್ಕೆ ಚಾಲನೆ ಸಿಕ್ಕಿದೆ. ಜಲಾಶಯದ ಮೇಲ್ಬಾಗದಲ್ಲಿ ಗೇಟ್ ಮುಂದೆ…
ಮೈಸೂರು: ಮದುವೆ ಆಗುವುದಾಗಿ ನಂಬಿಸಿ ಮಹಿಳಾ ವಕೀಲೆಯೊಬ್ಬರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ನಂತರ ಮೋಸ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ವಕೀಲ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ನೊಟೀಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ…
ಎಚ್.ಡಿ.ಕೋಟೆ: ಬಸ್ ವ್ಯವಸ್ಥೆ ಇಲ್ಲದೇ ಶಾಲಾ ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ…
ಮಂಡ್ಯ: ವಿಸಿ ಫಾರ್ಮ್‌ನ ಕೃಷಿ ಮೇಳದ ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಶ್ರೀಗಳ ಸಮ್ಮುಖದಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.…
ಬೆಂಗಳೂರು: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳ ವಿರುದ್ಧ ಕಾಂಗ್ರೆಸ್ ಶಾಸಕರೇ ಅವಿಶ್ವಾಸ ನಿರ್ಣಯ ಮಂಡಿಸಿದರೂ ಅಚ್ಚರಿ ಇಲ್ಲ ಎಂದು…