Mysore
28
clear sky

Social Media

ಮಂಗಳವಾರ, 20 ಜನವರಿ 2026
Light
Dark

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ.

ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಚ್ಚರಿಯಂಬಂತೆ ಇನುಂದೆ ಸ್ಪರ್ಧಾತಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸಹ ಸ್ಪಷ್ಟಪಡಿಸಿದ್ದಾರೆ.

ಸೈನಾ ನೆಹ್ವಾಲ್ ಅವರು ಕಳೆದ 2023 ರಲ್ಲಿ. 2023ರ ಸಿಂಗಾಪುರ್ ಓಪನ್ ನಂತರ ಯಾವುದೇ ಸ್ಪರ್ಧಾತಕ ಪಂದ್ಯವಾಡಿಲ್ಲ. ಇದಕ್ಕೆ ಗಾಯದ ಸಮಸ್ಯೆಯೇ ಮುಖ್ಯ ಕಾರಣ ಎನ್ನಲಾಗಿದೆ.

ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಎರಡು ವರ್ಷಗಳಿಂದ ಆಟಕ್ಕೆ ಮರಳಲು ಸತತ ಪ್ರಯತ್ನ ಮಾಡಿದ್ದರು ಇದಾಗ್ಯೂ ಸಂಪೂರ್ಣ ಚೇತರಿಗೆ ಸಾಧಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವರ್ಷದ ಆರಂಭದಲ್ಲೇ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಸೈನಾ ನೆಹ್ವಾಲ್, ತನ್ನ ದೇಹವು ಸ್ಪಂದಿಸುತ್ತಿಲ್ಲ. ಹೀಗಾಗಿ ಬ್ಯಾಡ್ಮಿಂಟನ್‌ನಲ್ಲಿ ಇನುಂದೆ ಮುಂದುವರೆಯಲು ಸಾಧ್ಯವಿಲ್ಲ. ಮೊಣಕಾಲಿನ ನೋವಿನ ಸಮಸ್ಯೆಯಿರುವ ಕಾರಣ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಎಂದು 35 ವರ್ಷದ ಸೈನಾ ನೆಹ್ವಾಲ್ ಹೇಳಿದ್ದಾರೆ.

 

Tags:
error: Content is protected !!