ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ.
ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಇದೀಗ ಬ್ಯಾಡ್ಮಿಂಟನ್ ಅಂಗಳಕ್ಕೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಅಚ್ಚರಿಯಂಬಂತೆ ಇನುಂದೆ ಸ್ಪರ್ಧಾತಕ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಸಹ ಸ್ಪಷ್ಟಪಡಿಸಿದ್ದಾರೆ.
ಸೈನಾ ನೆಹ್ವಾಲ್ ಅವರು ಕಳೆದ 2023 ರಲ್ಲಿ. 2023ರ ಸಿಂಗಾಪುರ್ ಓಪನ್ ನಂತರ ಯಾವುದೇ ಸ್ಪರ್ಧಾತಕ ಪಂದ್ಯವಾಡಿಲ್ಲ. ಇದಕ್ಕೆ ಗಾಯದ ಸಮಸ್ಯೆಯೇ ಮುಖ್ಯ ಕಾರಣ ಎನ್ನಲಾಗಿದೆ.
ಮೊಣಕಾಲಿನ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಎರಡು ವರ್ಷಗಳಿಂದ ಆಟಕ್ಕೆ ಮರಳಲು ಸತತ ಪ್ರಯತ್ನ ಮಾಡಿದ್ದರು ಇದಾಗ್ಯೂ ಸಂಪೂರ್ಣ ಚೇತರಿಗೆ ಸಾಧಿಸಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಈ ವರ್ಷದ ಆರಂಭದಲ್ಲೇ ಸೈನಾ ನೆಹ್ವಾಲ್ ಬ್ಯಾಡ್ಮಿಂಟನ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಸೈನಾ ನೆಹ್ವಾಲ್, ತನ್ನ ದೇಹವು ಸ್ಪಂದಿಸುತ್ತಿಲ್ಲ. ಹೀಗಾಗಿ ಬ್ಯಾಡ್ಮಿಂಟನ್‌ನಲ್ಲಿ ಇನುಂದೆ ಮುಂದುವರೆಯಲು ಸಾಧ್ಯವಿಲ್ಲ. ಮೊಣಕಾಲಿನ ನೋವಿನ ಸಮಸ್ಯೆಯಿರುವ ಕಾರಣ ನಿವೃತ್ತಿ ಘೋಷಿಸಲು ನಿರ್ಧರಿಸಿದ್ದೇನೆ. ಎಂದು 35 ವರ್ಷದ ಸೈನಾ ನೆಹ್ವಾಲ್ ಹೇಳಿದ್ದಾರೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…