ಕ್ರೀಡೆ

WPL RCB ಮಹಿಳಾ ತಂಡದ ಸಲಹೆಗಾರರಾಗಿ ಸಾನಿಯಾ ಮಿರ್ಜಾ ನೇಮಕ

ಹೈದರಾಬಾದ್: ಮುಂಬರುವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಸಲಹೆಗಾರರಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ.

‘ಭಾರತದ ಮುಂಚೂಣಿ ಕ್ರೀಡಾಪಟು, ಯೂತ್ ಐಕಾನ್, ವೃತ್ತಿಜೀವನದುದ್ದಕ್ಕೂ ಧೈರ್ಯಶಾಲಿ ಮತ್ತು ಎಲ್ಲ ಅಡೆತಡೆಗಳನ್ನು ಮೀರಿ ಆಡಿದ ಆಟಗಾರ್ತಿ, ಮೈದಾನದ ಒಳಗೂ ಹೊರಗೂ ಚಾಂಪಿಯನ್ ಸಾನಿಯಾ ಮಿರ್ಜಾ,  ಅವರನ್ನು ಆರ್‌ಸಿಬಿ ಮಹಿಳಾ ಕ್ರಿಕೆಟ್ ತಂಡದ ಸಲಹೆಗಾರರಾಗಿ ಸ್ವಾಗತಿಸಲು ನಾವು ಹೆಮ್ಮೆಪಡುತ್ತೇವೆ’ಎಂದು ಆರ್‌ಸಿಬಿ ಟ್ವಿಟರ್ ಪುಟದಲ್ಲಿ ಬರೆಯಲಾಗಿದೆ. ಇತ್ತೀಚೆಗೆ ನಡೆದ ಮಹಿಳಾ ಪ್ರೀಮಿಯರ್‌ ಲೀಗ್‌ನ ಮೊದಲ ಹರಾಜಿನಲ್ಲಿ ಆರ್‌ಸಿಬಿ ತಂಡ ಸ್ಮೃತಿ ಮಂದಾನ ಅವರಿಗೆ, ₹3.4 ಕೋಟಿ ಕೊಟ್ಟು ಖರೀದಿಸಿತ್ತು. ಸೋಪಿಯಾ ಡಿವೈನ್, ರೇಣುಕಾ ಸಿಂಗ್ ಮುಂತಾದ ಆಟಗಾರರು ತಂಡದಲ್ಲಿದ್ದಾರೆ. ದುಬೈನಲ್ಲಿ ತನ್ನ ಟೆನಿಸ್ ವೃತ್ತಿ ಜೀವನದ ಕೊನೆಯ ಪಂದ್ಯಾವಳಿಯನ್ನು ಆಡಲಿರುವ ಮಿರ್ಜಾ, ಆರ್‌ಸಿಬಿ ಫ್ರಾಂಚೈಸಿಯ ಭಾಗವಾಗಲಿದ್ದಾರೆ. ಸಾನಿಯಾ ಮಿರ್ಜಾ, ಕ್ರಿಕೆಟ್ ಅನ್ನು ಬಹಳ ಪ್ರೀತಿಸುತ್ತಾರೆ ಮತ್ತು ಆಗಾಗ್ಗೆ ಕ್ರಿಕೆಟ್ ಪಂದ್ಯಾವಳಿಗಳಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.

ಇತ್ತೀಚೆಗೆ ಸಾನಿಯಾ ಮಿರ್ಜಾ,  ರೋಹನ್ ಬೋಪಣ್ಣ ಅವರೊಂದಿಗೆ ಆಸ್ಟ್ರೇಲಿಯನ್ ಓಪನ್ ಮಿಶ್ರ ಡಬಲ್ಸ್‌ನ ಫೈನಲ್‌ಗೆ ಪ್ರವೇಶಿಸಿದ್ದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

11 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

15 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

15 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

15 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

15 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

16 hours ago