ಆಸ್ಟ್ರೇಲಿಯನ್ ಓಪನ್ ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್
ಮೆಲ್ಬರ್ನ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಸೋತ ಸಾನಿಯಾ ಮಿರ್ಜಾ, ರನ್ನರ್ ಅಪ್ ಪ್ರಶಸ್ತಿಯೊಂದಿಗೆ ತನ್ನ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪ್ರಯಾಣವನ್ನು ಅಂತ್ಯಗೊಳಿಸಿದರು.
ಮಿಶ್ರ ಡಬಲ್ಸ್ ಫೈನಲ್‌ನಲ್ಲಿ ಸಾನಿಯಾ ಮಿರ್ಜಾ- ರೋಹನ್ ಬೋಪಣ್ಣ ಜೋಡಿಯು ಬ್ರೆಜಿಲಿಯನ್ ಜೋಡಿಯಾದ ಲೂಯಿಸಾ ಸ್ಟೆಫಾನಿ ಮತ್ತು ರಾಫೆಲ್ ವ್ಯಾಟೋಸ್ ವಿರುದ್ಧ 6-7 (2-6), 2-6 ನೇರ ಸೆಟ್‌ಗಳ ಅಂತರದ ಸೋಲನುಭವಿಸಿ, ತಮ್ಮ ಕೊನೆಯ ಗ್ರ್ಯಾ ಸ್ಲ್ಯಾಮ್ ಟೆನಿಸ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಅವಕಾಶದಿಂದ ವಂಚಿತರಾದರು.
36 ವರ್ಷ ವಯಸ್ಸಿನ ಸಾನಿಯಾ ಗೆಲುವಿನೊಂದಿಗೆ ಪಯಣ ಅಂತ್ಯಗೊಳಿಸಲು ಬಯಸಿದ್ದರು. ಆದರೆ ಧೀರ ಪ್ರಯತ್ನಗಳ ಹೊರತಾಗಿಯೂ ಅದು ಸಾಧ್ಯವಾಗಲಿಲ್ಲ. ಅವರು ತಮ್ಮ ಸುಪ್ರಸಿದ್ಧ ವೃತ್ತಿಜೀವನದಲ್ಲಿ ಆರು ಡಬಲ್ಸ್ ಪ್ರಶಸ್ತಿಗಳನ್ನು ಜಯಿಸಿದ್ದರು.
ಸಾನಿಯಾ ಗೆದ್ದಿರುವ ಆರು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳಲ್ಲಿ ಮೂರು ಮಿಶ್ರ ಡಬಲ್ಸ್‌ನಲ್ಲಿ ಬಂದಿವೆ. ಮುಂದಿನ ತಿಂಗಳು ನಡೆಯುವ ದುಬೈ ಓಪನ್ ಟೆನಿಸ್ ಟೂರ್ನಿಯಾ ಬಳಿಕ ನಿವೃತ್ತಿಯಾಗುವುದಾಗಿ ಸಾನಿಯಾ ಅವರು ಈಗಾಗಲೇ ಪ್ರಕಟಿಸಿದ್ದಾರೆ. ಅತ್ತ 46 ವರ್ಷದ ಬೋಪಣ್ಣ, 2017ರಲ್ಲಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಫ್ರೆಂಚ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಜಯಿಸಿದ್ದರು.
ಸಿದ್ದಾಪುರ: ಇಲ್ಲಿನ ಶ್ರೀ ಮುತ್ತಪ್ಪ ದೇವಾಲಯದ 51ನೇ ವರ್ಷದ ಹಾಗೂ ಭಗವತಿ ದೇವಾಲಯದ 25ನೇ ವಾರ್ಷಿಕೋತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮೂಗೆಗೌಡದೊಡ್ಡಿ ಗ್ರಾಮದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಜೋಳದ ಮೆದೆ…
ಸಿದ್ದಾಪುರ: ನಿಷೇದಿತ ಮಾದಕ ವಸ್ತುಗಳ ಮಾರಾಟ ಮತ್ತು ಸೇವನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲೂಕು ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ…
ಟಿ.ನರಸೀಪುರ: ಟಿ.ನರಸೀಪುರದಲ್ಲಿರುವ ಕೆಎಸ್‌ಐಸಿ ಫಿಲೇಚರ್ ಫ್ಯಾಕ್ಟರಿ ಆವರಣದ ಐದು ಎಕರೆ ಜಾಗದಲ್ಲಿ ಕ್ರೀಡಾಂಗಣ ನಿರ್ಮಿಸುವ ಪ್ರಸ್ತಾವನೆಗೆ ವಿರೋಧ ವ್ಯಕ್ತವಾಗಿದೆ. ಇಂದು…
ನವದೆಹಲಿ: ಕೇರಳ ರಾಜ್ಯದ ಹೆಸರನ್ನು ಅಧಿಕೃತವಾಗಿ ಕೇರಳಂ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಹಸಿರು ನಿಶಾನೆ…