ಕ್ರೀಡೆ

ಸಾನಿಯಾ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯ

ಆಸ್ಟ್ರೇಲಿಯನ್ ಓಪನ್ ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್

ಮೆಲ್ಬರ್ನ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ ಡಬಲ್ಸ್ ಫೈನಲ್ ಪಂದ್ಯದಲ್ಲಿ ಸೋತ ಸಾನಿಯಾ ಮಿರ್ಜಾ, ರನ್ನರ್ ಅಪ್ ಪ್ರಶಸ್ತಿಯೊಂದಿಗೆ ತನ್ನ ಸುದೀರ್ಘ ಗ್ರ್ಯಾಂಡ್ ಸ್ಲ್ಯಾಮ್ ಪ್ರಯಾಣವನ್ನು ಅಂತ್ಯಗೊಳಿಸಿದರು.
ಮಿಶ್ರ ಡಬಲ್ಸ್ ಫೈನಲ್‌ನಲ್ಲಿ ಸಾನಿಯಾ ಮಿರ್ಜಾ- ರೋಹನ್ ಬೋಪಣ್ಣ ಜೋಡಿಯು ಬ್ರೆಜಿಲಿಯನ್ ಜೋಡಿಯಾದ ಲೂಯಿಸಾ ಸ್ಟೆಫಾನಿ ಮತ್ತು ರಾಫೆಲ್ ವ್ಯಾಟೋಸ್ ವಿರುದ್ಧ 6-7 (2-6), 2-6 ನೇರ ಸೆಟ್‌ಗಳ ಅಂತರದ ಸೋಲನುಭವಿಸಿ, ತಮ್ಮ ಕೊನೆಯ ಗ್ರ್ಯಾ ಸ್ಲ್ಯಾಮ್‌ ಟೆನಿಸ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ಅವಕಾಶದಿಂದ ವಂಚಿತರಾದರು.
36 ವರ್ಷ ವಯಸ್ಸಿನ ಸಾನಿಯಾ ಗೆಲುವಿನೊಂದಿಗೆ ಪಯಣ ಅಂತ್ಯಗೊಳಿಸಲು ಬಯಸಿದ್ದರು. ಆದರೆ ಧೀರ ಪ್ರಯತ್ನಗಳ ಹೊರತಾಗಿಯೂ ಅದು ಸಾಧ್ಯವಾಗಲಿಲ್ಲ. ಅವರು ತಮ್ಮ ಸುಪ್ರಸಿದ್ಧ ವೃತ್ತಿಜೀವನದಲ್ಲಿ ಆರು ಡಬಲ್ಸ್ ಪ್ರಶಸ್ತಿಗಳನ್ನು ಜಯಿಸಿದ್ದರು.
ಸಾನಿಯಾ ಗೆದ್ದಿರುವ ಆರು ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿಗಳಲ್ಲಿ ಮೂರು ಮಿಶ್ರ ಡಬಲ್ಸ್‌ನಲ್ಲಿ ಬಂದಿವೆ. ಮುಂದಿನ ತಿಂಗಳು ನಡೆಯುವ ದುಬೈ ಓಪನ್ ಟೆನಿಸ್ ಟೂರ್ನಿಯಾ ಬಳಿಕ ನಿವೃತ್ತಿಯಾಗುವುದಾಗಿ ಸಾನಿಯಾ ಅವರು ಈಗಾಗಲೇ ಪ್ರಕಟಿಸಿದ್ದಾರೆ. ಅತ್ತ 46 ವರ್ಷದ ಬೋಪಣ್ಣ, 2017ರಲ್ಲಿ ಮಿಶ್ರ ಡಬಲ್ಸ್ ವಿಭಾಗದಲ್ಲಿ ಫ್ರೆಂಚ್ ಓಪನ್ ಗ್ರ್ಯಾಂಡ್ ಸ್ಲ್ಯಾಮ್ ಪ್ರಶಸ್ತಿ ಜಯಿಸಿದ್ದರು.

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago