Mysore
20
overcast clouds
Light
Dark

ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ಸೃಷ್ಟಿಸಿದ ಸಾತ್ವಿಕ್‌-ಚಿರಾಗ್‌!

ಹಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಸಾತ್ವಿಕ್‌ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್‌ ವಿಭಾಗದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ಗೆದ್ದ ಕೀರ್ತಿ ಇವರಿಗೆ ಸಲ್ಲುತ್ತದೆ.

ಶನಿವಾರ ಭಾರತದ ಜೋಡಿಯು ದಕ್ಷಿಣ ಕೊರಿಯಾದ ಚೋಯ್ ಸೊಲ್ಗು ಮತ್ತು ಕಿಮ್ ವೊನ್ಹೋ ಅವರನ್ನು 21-18, 21-16 ಅಂತರದ ನೇರ ಗೇಮ್‌ಗಳಿಂದ ಸೋಲಿಸುವ ಮೂಲಕ ಚೊಚ್ಚಲ ಚಿನ್ನದ ಪದಕ ಗೆದ್ದು ದಾಖಲೆ ಬರೆಯಿತು. ಇದಕ್ಕೂ ಮುನ್ನ ಸೆಮಿಫೈನಲ್‌ನಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವುಯಿ ಯಿಕ್ ವಿರುದ್ಧ ಭಾರತದ ಜೋಡಿ 21-17, 21-12 ಅಂತರದಲ್ಲಿ ಜಯ ಸಾಧಿಸಿತ್ತು.

ಸಾತ್ವಿಕ್‌ ಹಾಗೂ ಚಿರಾಗ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ಗೆದ್ದುಕೊಡುವ ಮೂಲಕ ನೂತನ ಮೈಲುಗಲ್ಲು ಸ್ಥಾಪಿಸಿದರು.

https://x.com/India_AllSports/status/1710571327864930567?s=20

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ