ಹಾಂಗ್‌ಝೌ: ಏಷ್ಯನ್ ಗೇಮ್ಸ್‌ನ ಪುರುಷರ ಡಬಲ್ಸ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಏಷ್ಯನ್ ಗೇಮ್ಸ್‌ನಲ್ಲಿ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತಕ್ಕೆ ಮೊಟ್ಟ ಮೊದಲ ಚಿನ್ನದ ಪದಕ ಗೆದ್ದ ಕೀರ್ತಿ ಇವರಿಗೆ ಸಲ್ಲುತ್ತದೆ.
ಶನಿವಾರ ಭಾರತದ ಜೋಡಿಯು ದಕ್ಷಿಣ ಕೊರಿಯಾದ ಚೋಯ್ ಸೊಲ್ಗು ಮತ್ತು ಕಿಮ್ ವೊನ್ಹೋ ಅವರನ್ನು 21-18, 21-16 ಅಂತರದ ನೇರ ಗೇಮ್‌ಗಳಿಂದ ಸೋಲಿಸುವ ಮೂಲಕ ಚೊಚ್ಚಲ ಚಿನ್ನದ ಪದಕ ಗೆದ್ದು ದಾಖಲೆ ಬರೆಯಿತು. ಇದಕ್ಕೂ ಮುನ್ನ ಸೆಮಿಫೈನಲ್‌ನಲ್ಲಿ ಮಲೇಷ್ಯಾದ ಆರೋನ್ ಚಿಯಾ ಮತ್ತು ಸೊಹ್ ವುಯಿ ಯಿಕ್ ವಿರುದ್ಧ ಭಾರತದ ಜೋಡಿ 21-17, 21-12 ಅಂತರದಲ್ಲಿ ಜಯ ಸಾಧಿಸಿತ್ತು.
ಸಾತ್ವಿಕ್ ಹಾಗೂ ಚಿರಾಗ್ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತಕ್ಕೆ ಚೊಚ್ಚಲ ಚಿನ್ನದ ಪದಕ ಗೆದ್ದುಕೊಡುವ ಮೂಲಕ ನೂತನ ಮೈಲುಗಲ್ಲು ಸ್ಥಾಪಿಸಿದರು.
https://x.com/India_AllSports/status/1710571327864930567?s=20
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…