ಕ್ರೀಡೆ

ಇಸ್ಲಾಂಗಾಗಿ ಬದುಕು ಮೀಸಲು: ಧರ್ಮಕ್ಕಾಗಿ ಕ್ರಿಕೆಟ್ ತ್ಯಜಿಸಿದ ಪಾಕಿಸ್ತಾನದ ಆಟಗಾರ್ತಿ

ಇಸ್ಲಾಮಾಬಾದ್‌: ಧಾರ್ಮಿಕತೆಗಾಗಿ ಪಾಕಿಸ್ತಾನದ ಸ್ಚಾರ್ ಆಟಗಾರ್ತಿಯೊಬ್ಬರು ಕ್ರಿಕೆಟ್ ಅನ್ನೇ ತ್ಯಜಿಸಲು ಮುಂದಾಗಿದ್ದಾರೆ.

ಹೌದು.. ಪಾಕಿಸ್ತಾನ ಮಹಿಳಾ ಕ್ರಿಕೆಟ್ ತಂಡದ ಸ್ಠಾರ್ ಆಟಗಾರ್ತಿ ಆಯೇಶಾ ನಸೀಮ್ ತನ್ನ 18ನೇ ವಯಸ್ಸಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದು, ತನ್ನ ಮುಂದಿನ ಬದುಕನ್ನು ಇಸ್ಲಾಂ ಧರ್ಮಕ್ಕಾಗಿ ಮೀಸಲಿಡುತ್ತೇನೆ ಎಂದು ಹೇಳಿದ್ದಾರೆ.

‘ನಾನು ಇನ್ಮುಂದೆ ಇಸ್ಲಾಮಿಕ್‌ ಧರ್ಮದಂತೆಯೇ ಬದುಕುತ್ತೇನೆ, ಇಸ್ಲಾಮಿಕ್‌ ತತ್ವ ಬೋಧನೆಯನ್ನ ಅನುಸರಿಸುತ್ತೇನೆ ಎಂದು ಹೇಳಿರುವ ಆಯೇಶಾ ನಸೀಮ್, ನಾನು ಕ್ರಿಕೆಟ್ ಆಟ ತ್ಯಜಿಸುತ್ತಿದ್ದೇನೆ ಮತ್ತು ಇಸ್ಲಾಂ ಧರ್ಮದ ಪ್ರಕಾರ ನನ್ನ ಜೀವನವನ್ನು ನಡೆಸಲು ಬಯಸುತ್ತೇನೆ’ ಎಂದು ಹೇಳಿದ್ದಾರೆ.

ಆರಂಭಿಕ ಹಂತದಿಂದಲೇ ಅದ್ಭುತ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಿದ್ದ ಆಯೇಶಾ, ಮುಂದೆ ತಂಡ ನಾಯಕತ್ವ ವಹಿಸುವ ಭರವಸೆ ಮೂಡಿಸಿದ್ದರು. ಇದೀಗ ನಿವೃತ್ತಿ ಘೋಷಿಸಿ ನಿರಾಸೆ ಮೂಡಿಸಿದ್ದಾರೆ. ನಸೀಮ್ ಅವರು ಇಸ್ಲಾಂ ಧರ್ಮದ ಪ್ರಕಾರ ತಮ್ಮ ಜೀವನವನ್ನು ನಡೆಸುವ ಕಾರಣದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಈ ವಿಚಾರವಾಗಿ  ನಸೀಮ್ ಪಾಕಿಸ್ತಾನ ಕ್ರಿಕೆಟ್‌ ಬೋರ್ಡ್‌ಗೂ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.

18 ವರ್ಷದ ಪಾಕ್‌ ಮಹಿಳಾ ಆಟಗಾರ್ತಿ ಆಯೇಶಾ ನಸೀಮ್ ಈವರೆಗೆ ನಾಲ್ಕು ಏಕದಿನ, 30 T20 ಪಂದ್ಯಗಳನ್ನಾಡಿದ್ದಾರೆ. ಅಗ್ರ ಕ್ರಮಾಂಕದ ಬ್ಯಾಟರ್‌ ಆಗಿ ಟಿ20 ಕ್ರಿಕೆಟ್‌ನಲ್ಲಿ 18:45 ಸರಾಸರಿಯಲ್ಲಿ 369 ರನ್‌ ಗಳಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಕೇವಲ 33 ರನ್‌ ಗಳಿಸಿದ್ದಾರೆ. 2023ರ ಮಹಿಳಾ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭಾರತೀಯ ಮಹಿಳಾ ಕ್ರಿಕೆಟ್‌ ತಂಡದ ವಿರುದ್ಧ ಕಣಕ್ಕಿಳಿದಾಗ 25 ಎಸೆತಗಳಲ್ಲಿ ಸ್ಫೋಟಕ 43 ರನ್‌ ಸಿಡಿಸಿದ್ದರು. 2021ರಲ್ಲಿ ಆಯೇಶಾ ವೆಸ್ಟ್‌ ಇಂಡೀಸ್‌ ವಿರುದ್ಧ ಕಣಕ್ಕಿಳಿದಾಗ 33 ಎಸೆತಗಳಲ್ಲಿ 45 ರನ್‌ ಗಳಿಸಿದ್ದರು. ಈ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಅದೇ ವರ್ಷದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಟಿ20 ಕ್ರಿಕೆಟ್‌ನಲ್ಲಿ 31 ಎಸೆತಗಳಲ್ಲಿ 45 ರನ್‌ ಗಳಿಸಿ ಮಿಂಚಿದ್ದರು.

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

12 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

14 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

14 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

15 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

18 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

18 hours ago