ಕ್ರೀಡೆ

ಎರಡನೇ ಏಕದಿನ: ಭಾರತ ವಿರುದ್ಧ ಗೆದ್ದು ಬೀಗಿದ ವೆಸ್ಟ್‌ ವಿಂಡೀಸ್‌!

ಬಾರ್ಬಡೋಸ್‌ (ವೆಸ್ಟ್ ಇಂಡೀಸ್‌): ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ ಮೂಲಕ ಪಂದ್ಯ ಗೆದ್ದ ವೆಸ್ಟ್ ಇಂಡೀಸ್ ಏಕದಿನ ಸರಣಿಯನ್ನು 1-1 ಸಮಬಲ ಕಾಯ್ದುಕೊಂಡಿದೆ.

ಶನಿವಾರ ಇಲ್ಲಿನ ಕೆನ್ಸಿಂಗ್ಟನ್‌ ಓವಲ್‌ ಮೈದಾನದಲ್ಲಿ ಭಾರತ ನೀಡಿದ್ದ ಕೇವಲ 182 ರನ್ ಗುರಿ ಹಿಂಬಾಲಿಸಿದ ವೆಸ್ಟ್ ಇಂಡೀಸ್ ತಂಡದ ಬ್ಯಾಟ್ಸ್‌ಮನ್‌ಗಳು ಭಾರತೀಯ ಬೌಲರ್‌ಗಳನ್ನು ಸಮರ್ಥವಾಗಿ ಎದುರಿಸಿದರು. ಮುಂಚೂಣಿಯಲ್ಲಿ ನಿಂತು ಬ್ಯಾಟ್ ಮಾಡಿದ ನಾಯಕ ಶೇಯ್‌ ಹೋಪ್ 80 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಎರಡು ಬೌಂಡರಿ ಗಳೊಂದಿಗೆ ಅಜೇಯ 63 ರನ್ ಗಳಿಸಿ ತಂಡವನ್ನು ಗೆಲ್ಲಿಸಿದರು. ಇವರಿಗೆ ಮತ್ತೊಂದು ತುದಿಯಲ್ಲಿ ಸಾಥ್‌ ನೀಡಿದ ಕೀಸಿ ಕಾರ್ಟಿ ಅಜೇಯ 45 ರನ್‌ ಗಳಿಸಿದರು.

ಇದಕ್ಕೂ ಮುನ್ನ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಭಾರತ ತಂಡಕ್ಕೆ ಓಪನರ್ಸ್‌ ಇಶಾನ್‌ ಕಿಶನ್‌ (55) ಹಾಗೂ ಶುಭಮನ್ ಗಿಲ್‌ (34) ಮೊದಲನೇ ವಿಕೆಟ್‌ಗೆ 90 ರನ್‌ ಕಲೆ ಹಾಕುವ ಮೂಲಕ ಭರ್ಜರಿ ಆರಂಭ ತಂದುಕೊಟ್ಟಿದ್ದರು. ಆದರೆ, ಒಮ್ಮೆ ಶುಭಮನ್ ಗಿಲ್‌ ಹಾಗೂ ಇಶಾನ್‌ ಕಿಶನ್‌ ವಿಕೆಟ್‌ ಒಪ್ಪಿಸಿದ ಬಳಿಕ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಉಳಿಯಲಿಲ್ಲ. ಕೇವಲ 23 ರನ್‌ಗಳ ಅಂತರದಲ್ಲಿ ಭಾರತ ತಂಡ ಪ್ರಮುಖ 5 ವಿಕೆಟ್‌ಗಳನ್ನು ಕಳೆದುಕೊಂಡಿತು.
ಸಂಜು ಸ್ಯಾಮ್ಸನ್‌ (9), ಅಕ್ಷರ್‌ ಪಟೇಲ್‌ (1) ಹಾಗೂ ಹಾರ್ದಿಕ್‌ ಪಾಂಡ್ಯ (7) ಎರಡಂಕಿ ವೈಯಕ್ತಿಕ ಮೊತ್ತ ಕಲೆ ಹಾಕುವಲ್ಲಿ ವಿಫಲರಾದರು. 24 ರನ್‌ ಗಳಿಸಿ ಉತ್ತಮ ಆರಂಭ ಪಡೆದಿದ್ದ ಸೂರ್ಯಕುಮಾರ್‌ ಯಾದವ್‌ ಕೂಡ ಹೆಚ್ಚು ಹೊತ್ತು ನಿಲ್ಲಲಿಲ್ಲ. ರವೀಂದ್ರ ಜಡೇಜಾ (10) ಹಾಗೂ ಶಾರ್ದುಲ್‌ (16) ಸಹ ನಿರಾಶೆ ಮೂಡಿಸಿದರು. ಅಂತಿಮವಾಗಿ ಭಾರತ ತಂಡ 40.5 ಓವರ್‌ಗಳಿಗೆ 181 ರನ್‌ಗಳಿಗೆ ಆಲ್‌ಔಟ್‌ ಆಯಿತು.
ವೆಸ್ಟ್ ಇಂಡೀಸ್‌ ಪರ ಗುಡಕೇಶ್‌ ಮೋಥಿ ಹಾಗೂ ರೊಮಾರಿಯೊ ಶೆಫರ್ಡ್‌ ತಲಾ 3 ವಿಕೆಟ್‌ಗಳನ್ನು ಕಬಳಿಸಿದರು. ಅಲ್ಝಾರಿ ಜೋಸೆಪ್ ಎರಡು ವಿಕೆಟ್‌ ಕಿತ್ತರು.

ಸ್ಕೋರ್‌ ವಿವರ

ಭಾರತ: 40.5 ಓವರ್‌ಗಳಿಗೆ 181-10 (ಇಶಾನ್‌ ಕಿಶನ್‌ 55, ಶುಭಮನ್ ಗಿಲ್‌ 34, ಸೂರ್ಯಕುಮಾರ್ ಯಾದವ್‌ 24; ಗುಡಕೇಶ್‌ ಮೋಥಿ 36ಕ್ಕೆ 3, ರೊಮಾರಿಯೊ ಶೆಫರ್ಡ್ 37ಕ್ಕೆ 3

ವೆಸ್ಟ್ ಇಂಡೀಸ್‌: 36.4 ಓವರ್‌ಗಳಿಗೆ 182-4 (ಶೇಯ್‌ ಹೋಪ್‌ 63*, ಕೀಸಿ ಕಾರ್ಟಿ 48*, ಕೈಲ್‌ ಮೇಯರ್ಸ್‌ 36; ಶಾರ್ದುಲ್‌ ಠಾಕೂರ್‌ 42ಕ್ಕೆ 3)
ಪಂದ್ಯ ಶ್ರೇಷ್ಠ ಪ್ರಶಸ್ತಿ: ಶೇಯ್‌ ಹೋಪ್‌
andolanait

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

2 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

2 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

3 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

3 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

3 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

3 hours ago