ಕ್ರೀಡೆ

ಆದಿಪುರುಷ’ ನೋಡಿ ತಲೆ ಚಚ್ಚಿಕೊಂಡ ಸೆಹ್ವಾಗ್!

ಓಂ ರಾವುತ್ ನಿರ್ದೇಶನದ ಚಿತ್ರ ಆದಿಪುರುಷ ಸಿನಿಮಾ ನಕಾರಾತ್ಮಕ ಕಾರಣಗಳಿಗಾಗಿಯೇ ಸಾಕಷ್ಟು ಸುದ್ದಿಯಾಗುತ್ತಿದೆ. ಟೀಸರ್ ಬಿಡುಗಡೆಯಾದಾಗಿನಿಂದಲೂ ಚಿತ್ರಕ್ಕೆ ಒಂದಿಲ್ಲೊಂದು ಸಂಕಷ್ಟ ಎದುರಾಗಿದೆ. ಪ್ರಭಾಸ್, ಕೃತಿ ಸನೋನ್ ಮತ್ತು ಸೈಫ್ ಅಲಿ ಖಾನ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರವು ರಾಮಾಯಣ ಮಹಾಕಾವ್ಯವನ್ನು ಆಧರಿಸಿದ್ದಾಗಿದೆ.

ಸಿನಿಮಾವು ಅನೇಕ ಧಾರ್ಮಿಕ ಗುಂಪುಗಳು, ವೀಕ್ಷಕರು ಮತ್ತು ಚಲನಚಿತ್ರ ವಿಮರ್ಶಕರಿಂದ ವಿಎಫ್ಎಕ್ಸ್, ಪಾತ್ರಗಳ ಚಿತ್ರಣ ಮತ್ತು ಸಂಭಾಷಣೆಗಳಿಗಾಗಿ ವ್ಯಾಪಕವಾಗಿ ಟೀಕೆಗೆ ಗುರಿಯಾಗಿದೆ. ಈ ಎಲ್ಲಾ ಹಿನ್ನಡೆಗಳ ನಡುವೆ, ಆದಿಪುರುಷ ಚಿತ್ರವು ಭಾರತದ ಮಾಜಿ ಬ್ಯಾಟರ್ ವೀರೇಂದ್ರ ಸೆಹ್ವಾಗ್ ಅವರ ರೂಪದಲ್ಲಿ ಮತ್ತೊಬ್ಬ ವಿಮರ್ಶಕನನ್ನು ಪಡೆದಿದೆ. ಸೆಹ್ವಾಗ್ ಕೂಡ ಇದೀಗ ತಮ್ಮ ನಿರಾಶೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸೆಹ್ವಾಗ್, ‘ಆದಿಪುರುಷ್ ದೇಖ್‌ಕರ್ ಪಟ ಚಲಾ ಕಟ್ಟಪ್ಪ ನೆ ಬಾಹುಬಲಿ ಕೊ ಕ್ಯೂನ್ ಮಾರ ಥಾ. (ಆದಿಪುರುಷನನ್ನು ನೋಡಿದ ನಂತರ, ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದಿದ್ದಾನೆಂದು ನನಗೆ ಅರಿವಾಯಿತು)’ ಎಂದು ಬರೆದಿದ್ದಾರೆ.
ಸೆಹ್ವಾಗ್ ಅವರ ಟ್ವೀಟ್ ಪ್ರಭಾಸ್ ಅವರ 2015ರ ಬ್ಲಾಕ್‌ಬಸ್ಟರ್ ಚಿತ್ರ ‘ಬಾಹುಬಲಿ: ದಿ ಬಿಗಿನಿಂಗ್’ ಅನ್ನು ಉಲ್ಲೇಖಿಸುತ್ತದೆ. ಚಿತ್ರದಲ್ಲಿ ಮುಖ್ಯ ಪಾತ್ರಧಾರಿ ಬಾಹುಬಲಿ ತನ್ನ ಚಿಕ್ಕಪ್ಪ ಕಟ್ಟಪ್ಪನಿಂದಲೇ ಅಂತ್ಯ ಕಾಣುತ್ತಾನೆ ಮತ್ತು ಕಟ್ಟಪ್ಪ ತನ್ನ ಸ್ವಂತ ಸೋದರಳಿಯನನ್ನು ಏಕೆ ಕೊಂದನು ಎಂಬ ಪ್ರಶ್ನೆಯೊಂದಿಗೆ ಆ ಚಿತ್ರವು ಕೊನೆಯಾಗಿತ್ತು.
ಆದಿಪುರುಷ ಸಿನಿಮಾ ಬಗ್ಗೆ ಹೇಳುವುದಾದರೆ, ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಮುಂಬೈ ಪೊಲೀಸರಿಗೆ ಪತ್ರ ಬರೆದಿದ್ದು, ಚಿತ್ರದ ನಿರ್ಮಾಪಕ, ನಿರ್ದೇಶಕ ಮತ್ತು ಲೇಖಕರ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದೆ.
ಭಾರತದ ಮಾಜಿ ಬ್ಯಾಟರ್ ಸೆಹ್ವಾಗ್ ಇತ್ತೀಚೆಗೆ ಆಸ್ಟ್ರೇಲಿಯಾ ಟೆಸ್ಟ್ ನಾಯಕ ಪ್ಯಾಟ್ ಕಮ್ಮಿನ್ಸ್ ಅವರನ್ನು ಶ್ಲಾಘಿಸಿದರು. ಅವರು ‘ಮಿಸ್ಟರ್ ಕೂಲ್’ ಎಂಬ ಬಿರುದನ್ನು ಸಹ ನೀಡಿದರು. ಇದನ್ನು ಭಾರತದ ಮಾಜಿ ನಾಯಕ ಎಂಎಸ್ ಧೋನಿಗೆ ನೀಡಲಾಗಿದೆ.
andolanait

Recent Posts

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ…

8 hours ago

ಹೆಬ್ಬಾಳಿನಲ್ಲಿ ಡ್ರಗ್ಸ್‌ ಲ್ಯಾಬ್‌ ಶಂಕೆ : ಶೆಡ್‌ವೊಂದರ ಮೇಲೆ ಎನ್‌ಸಿಬಿ ದಾಳಿ

ಮೈಸೂರು : ಹೆಬ್ಬಾಳ ಕೈಗಾರಿಕಾ ಪ್ರದೇಶದಲ್ಲಿ ಡ್ರಗ್ಸ್ ಲ್ಯಾಬ್ ಇರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ರಾಷ್ಟ್ರಿಯ ಮಾದಕ ದ್ರವ್ಯ ನಿಯಂತ್ರಣ…

8 hours ago

ನಿಗಮ ಮಂಡಳಿ | ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ

ಬೆಂಗಳೂರು : 25 ನಿಗಮ ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ ಮುಂದುವರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಶಾಸಕರಿಗೆ ಮಾತ್ರ…

8 hours ago

ಡಿಜಿಟಲ್‌ ಅರೆಸ್ಟ್‌ ಕುತಂತ್ರ : 1 ಕೋಟಿ ವಂಚನೆ

ಮೈಸೂರು : ಸೈಬರ್ ವಂಚಕರು ವಾಟ್ಸಾಪ್ ಕರೆ ಮೂಲಕ ಹೂಡಿದ ಡಿಜಿಟಲ್ ಅರೆಸ್ಟ್ ಕುತಂತ್ರಕ್ಕೆ ಬಲಿಯಾಗಿ ವಿವೇಕಾನಂದ ನಗರದ ಹಿರಿಯ…

8 hours ago

ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್‌ ಇನ್ನಿಲ್ಲ ; ಬೆಂಗಳೂರು ಚಲೋ ಮುಂದೂಡಿಕೆ

ಬೆಂಗಳೂರು : ಕೆಎಸ್‌ಆರ್‌ಟಿಸಿ ಸ್ಟಾಫ್‌ ವರ್ಕರ್ಸ್‌ ಫೆಡರೇಷನ್‌ ಅಧ್ಯಕ್ಷ, ಕಾರ್ಮಿಕ ಮುಖಂಡ ಎಚ್.ವಿಅನಂತ್‌ ಸುಬ್ಬರಾವ್‌ (85) ಬುಧವಾರ ಸಂಜೆ ನಿಧನರಾಗಿದ್ದಾರೆ.…

9 hours ago

ಮೈಸೂರು | ಮೃಗಾಲಯದ ಯುವರಾಜ ಸಾವು

ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿದ್ದ 25 ವರ್ಷದ ಗಂಡು ಜಿರಾಫೆ ‘ಯುವರಾಜ’ ಬುಧವಾರ ಬೆಳಿಗ್ಗೆ ಸಾವನ್ನಪ್ಪಿದೆ. 1987ರಲ್ಲಿ ಜರ್ಮನಿಯಿಂದ…

10 hours ago