ಆಸ್ಟ್ರೇಲಿಯಾದ ಎಡಗೈ ಆಟಗಾರ ಶಾನ್ ಮಾರ್ಷ್ ಅಂತರಾಷ್ಟ್ರೀಯ ಕ್ರಿಕೆಟ್ ಸೇರಿದಂತೆ ಎಲ್ಲಾ ಮಾದರಿ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ.
ತಮ್ಮ 40ನೇ ವಯಸ್ಸಿನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಪಡೆಯಲು ನಿರ್ಧರಿಸಿದ್ದಾರೆ. ಜನವರಿ 17 ರಂದು ಸಿಡ್ನಿ ಥಂಡರ್ ವಿರುದ್ಧ ನಡೆಯಲಿರುವ ಪಂದ್ಯದ ಬಳಿಕ ಮಾರ್ಷ್ ವೃತ್ತಿ ಜೀವನಕ್ಕೆ ವಿದಾಯ ಹೇಳಲಿದ್ದಾರೆ.
ಆಸ್ಟ್ರೇಲಿಯಾ ತಂಡಕ್ಕೆ 2008 ರಲ್ಲಿ ಕಾಲಿಡುವ ಜೊತೆಗೆ ತಮ್ಮ ಅಂತರಾಷ್ಟ್ರೀಯ ಕ್ರಿಕೆಟ್ ಬದುಕನ್ನು ಆರಂಭಿಸಿದ್ದ ಮಾರ್ಷ್, 2019 ರಲ್ಲಿ ಕೊನೆಯ ಬಾರಿ ಆಸ್ಟ್ರೇಲಿಯಾ ತಂಡದ ಪರ ಕಣಕ್ಕಿಳಿದಿದ್ದರು.
ನಂತರ ಪ್ರಥಮ ದರ್ಜೆ ಕ್ರಿಕೆಟ್ ಹಾಗೂ ಫ್ರಾಂಚೈಸಿ ಲೀಗ್ಗಳಲ್ಲಿ ತಮ್ಮ ಆಟ ಮುಂದುವರೆಸಿದ್ದರು. ಇದೀಗ ಬಿಗ್ ಬ್ಯಾಷ್ ಲೀಗ್‌ನಲ್ಲಿ ಅಂತಿಮ ಪಂದ್ಯ ಆಡುವ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.
ಆಸಿಸ್ ಪರ 38 ಟೆಸ್ಟ್ ಪಂದ್ಯಗಳಲ್ಲಿ 6 ಶತಕ ಹಾಗೂ 10 ಅರ್ಧಶತಕಗಳೊಂದಿಗೆ ಒಟ್ಟು 2265 ರನ್, 73 ಏಕದಿನ ಪಂದ್ಯಗಳಲ್ಲಿ 7 ಶತಕ ಹಾಗೂ 15 ಅರ್ಧಶತಕಗಳ ಸಹಿತ 2773 ರನ್ಗಳಿಸಿದ್ದಾರೆ. ಇನ್ನು 15 ಟಿ20 ಪಂದ್ಯಗಳಲ್ಲಿ ಆಸೀಸ್ ಪರ ಬ್ಯಾಟ್ ಬೀಸಿದ್ದ ಮಾರ್ಷ್ ಕೇವಲ 255 ರನ್ ಕಲೆಹಾಕಿದ್ದಾರೆ.
ಆರೆಂಜ್ ಕ್ಯಾಪ್ ವಿನ್ನರ್: 2008ರಲ್ಲಿ ಉದ್ಘಾಟನೆಗೊಂಡ ಚೊಚ್ಚಲ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆರೆಂಜ್ ಕ್ಯಾಪ್ ಗೆದ್ದ ದಾಖಲೆ ಶಾನ್ ಮಾರ್ಷ್ ಹೆಸರಿನಲ್ಲಿದೆ.
2008 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್) ಪರ 11 ಪಂದ್ಯಗಳನ್ನಾಡಿದ್ದ ಮಾರ್ಷ್ 1 ಶತಕ ಹಾಗೂ 5 ಅರ್ಧಶತಕಗಳೊಂದಿಗೆ ಒಟ್ಟು 616 ರನ್ ಬಾರಿಸಿ, ಮೊಲದ ಸೀಸನ್‌ನಲ್ಲೇ ಆರೆಂಜ್ ಕ್ಯಾಪ್ ವಿನ್ನರ್ ಆಗಿ ಹೊರಹೊಮ್ಮಿದ್ದರು.
ಐಪಿಎಲ್ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಪಂಜಾಬ್ ಕಿಂಗ್ಸ್) ತಂಡದ ಪರ 9 ಸೀಸನ್ನಲ್ಲಿ 71 ಪಂದ್ಯಗಳನ್ನಾಡಿದ್ದ ಎಡಗೈ ದಾಂಡಿಗ 1 ಶತಕ ಹಾಗೂ 20 ಅರ್ಧಶತಕಗಳೊಂದಿಗೆ 2477 ರನ್ ಕಲೆಹಾಕಿದ್ದಾರೆ.
2017 ರಲ್ಲಿ ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ಶಾನ್ ಮಾರ್ಷ್ ಅವರನ್ನು ಪಂಜಾಬ್ ಕೈಬಿಟ್ಟಿತು. 2018 ರ ಹರಾಜಿನಲ್ಲಿ 1.5 ಕೋಟಿ ರೂ. ಮೂಲ ಬೆಲೆಯೊಂದಿಗೆ ಕಾಣಿಸಿಕೊಂಡಿದ್ದ ಮಾರ್ಷ್ ಅವರನ್ನು ಖರೀದಿಸಲು ಯಾವುದೇ ಫ್ರಾಂಚೈಸಿ ಮುಂದೆ ಬರಲಿಲ್ಲ. ಈಗ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಮಾರ್ಷ್ ನಿವೃತ್ತಿ ಪಡೆಯುತ್ತಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…