ಹಾಂಗ್‌ಝೌ: ಚೀನಾದ ಹಾಂಗ್‌ಝೌನಲ್ಲಿ ನಡೆಯುತ್ತಿರುವ 19ನೇ ಏಷ್ಯಾನ್ ಗೇಮ್ಸ್ ನ ದ್ವಿತೀಯ ದಿನವೇ ಅತ್ಯಮೋಘ ಪ್ರದರ್ಶನ ತೋರಿಸಿದ ಭಾರತದ ಪುರುಷ ಶೂಟರ್ ಗಳು ವಿಶ್ವ ದಾಖಲೆ ನಿರ್ಮಿಸುವುದರೊಂದಿಗೆ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟಿದ್ದಾರೆ.
ಪುರುಷರ 10 ಮೀಟರ್ ಏರ್ ರೈಫಲ್ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಐಶ್ವರಿ ಪ್ರತಾಪ್ ಸಿಂಗ್ ತೋಮರ್, ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ಅವರು ವಿಶ್ವದಾಖಲೆ ನಿರ್ಮಿಸಿದ್ದಲ್ಲದೆ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.
ಭಾರತದ ತ್ರಿವಳಿ ಶೂಟರ್ ಗಳು ತಮ್ಮ ಉತ್ತಮವಾದ ಗುರಿಯಿಂದ 1893.7 ಪಾಯಿಂಟ್ಸ್ ಕಲೆ ಹಾಕುವ ಮೂಲಕ ಬಾಕುವಿನಲ್ಲಿ ಚೀನಾದ ಶೂಟರ್ ಗಳು 2022 ನೇ ಸಾಲಿನ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ನಿರ್ಮಿಸಿದ್ದ ದಾಖಲೆಯನ್ನು ಮುರಿದು ವಿಶ್ವದಾಖಲೆ ನಿರ್ಮಿಸಿದೆ.
1893.7 ಪಾಯಿಂಟ್ಸ್ ಸಂಗ್ರಹ
ಫೈನಲ್ ಪಂದ್ಯದ ಮೊದಲ ಸುತ್ತಿನಲ್ಲಿ ಭಾರತದ ದಿವ್ಯಾಂಶ್ ಸಿಂಗ್ ಪನ್ವಾರ್ ಹಾಗೂ ರುದ್ರಂಕ್ಷ್ ಪಾಟೀಲ್ ತಲಾ 104.8 ಅಂಕಗಳನ್ನು ಕಲೆ ಹಾಕಿದರೆ, ಐಶ್ವರಿ ಪ್ರತಾಪ್ ಸಿಂಗ್ ತೋಮರ್ 104.1 ಅಂಕ ಸಂಗ್ರಹಿಸಿದ್ದರು. ನಂತರದ ಸುತ್ತುಗಳಲ್ಲಿ ತಮ್ಮ ಗುರಿಯ ಮಟ್ಟವನ್ನು ಹೆಚ್ಚಿಸಿಕೊಂಡ ಭಾರತದ ತ್ರಿವಳಿ ಶೂಟರ್ ಗಳು 6ನೇ ಸೀರಿಸ್ ವೇಳೆಗೆ 1893.7 ಪಾಯಿಂಟ್ಸ್ ಸಂಗ್ರಹಿಸಿ ವಿಶ್ವದಾಖಲೆ ನಿರ್ಮಿಸಿತು.
ಭಾರತಕ್ಕೆ ಮೊದಲ ಚಿನ್ನದ ಪದಕ
ಪುರುಷರ 10 ಮೀಟರ್ ಏರ್ ರೈಫಲ್ ಫೈನಲ್ ಸ್ಪರ್ಧೆಯಲ್ಲಿ ಟಾಪ್ 1 ಸ್ಥಾನ ಪಡೆದ ಭಾರತದ ತ್ರಿವಳಿ ಶೂಟರ್ ಗಳು 2023ನೇ ಸಾಲಿನ ಏಷ್ಯನ್ ಗೇಮ್ಸ್ ನಲ್ಲಿ ದೇಶಕ್ಕೆ ಮೊದಲ ಚಿನ್ನದ ಪದಕ ಗೆದ್ದು ಕೊಟ್ಟರು. ದಕ್ಷಿಣ ಕೊರಿಯಾ (1890.1 ಅಂಕ) ಬೆಳ್ಳಿ ಪದಕ ಗೆದ್ದರೆ,ಚೀನಾ (1888.2 ಅಂಕ) ಕಂಚಿನ ಪದಕ ಗೆದ್ದು ಸಂಭ್ರಮಿಸಿತು. ಭಾರತದ ಪದಕ ಸಾಧನೆ: ಕ್ರೀಡಾಕೂಟದ ಮೊದಲ ದಿನ ಭಾರತ 3 ಬೆಳ್ಳಿ ಹಾಗೂ 2 ಕಂಚಿನ ಪದಕ ಗೆದ್ದು ಸಂಭ್ರಮಿಸಿತ್ತು.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…