ಸಿಡ್ನಿ: ಪಂದ್ಯವೊಂದರಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಭಾರತ ತಂಡ ಉಪನಾಯಕ ಶ್ರೇಯಸ್ ಅಯ್ಯರ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸಿಡ್ನಿಯಲ್ಲಿರುವ ಆಸ್ಪತ್ರೆಗೆ ದಾಖಲಾಗಿದ್ದ ಶ್ರೇಯಸ್ ಅಯ್ಯರ್ ಅವರು, ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಶ್ರೇಯಸ್ ಅಯ್ಯರ್ ಅವರು ಸಿಡ್ನಿಯಲ್ಲೇ ವಾಸ್ತವ್ಯ ಹೂಡಲಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿರುವ ಅವರು ಶೀಘ್ರದಲ್ಲೇ ಭಾರತಕ್ಕೆ ಮರಳಲಿದ್ದಾರೆ ಎಂದು ಹೇಳಲಾಗಿದೆ.
ಮುಂದಿನ ವೈದ್ಯಕೀಯ ಸಮಾಲೋಚನೆಗಾಗಿ ಸಿಡ್ನಿಯಲ್ಲಿಯೇ ಇರಲಿದ್ದಾರೆ. ಆ ಬಳಿಕ ಅವರು ಪ್ರಯಾಣಿಸಲು ಯೋಗ್ಯರೆಂದು ಪರಿಗಣಿಸಲ್ಪಟ್ಟ ನಂತರ ಭಾರತಕ್ಕೆ ಹಿಂತಿರುಗಲಿದ್ದಾರೆ.





