೨೦೨೪ರಲ್ಲಿ ನಡೆಯುವ ಐಪಿಎಲ್ (ಇಂಡಿಯನ್ ಪ್ರೀಮಿಯರ್ ಲೀಗ್) ೧೭ ನೇ ಆವೃತ್ತಿಯಲ್ಲಿ ಕೆಕೆಆರ್ (ಕೊಲ್ಕತ್ತಾ ನೈಟ್ ರೈಡರ್ಸ್) ತಂಡದ ನಾಯಕಾಗಿ ಶ್ರೇಯಸ್ ಅಯ್ಯರ್ ಅವರು ಮುಂದುವರೆಯಲಿದ್ದಾರೆ ಎಂದು ಕೆಕೆಆರ್‌ನ ಸಿಇಒ ವೆಂಕಿ ಮೈಸೂರು ಅವರು ಇಂದು (ಗುರುವಾರ) ಘೋಷಿಸಿದ್ದಾರೆ.
ಮಾಜಿ ನಾಯಕ ನಿತೀಶ್ ರಾಣಾ ಅವರು ಕೆಕೆಆರ್ ನ ಉಪ ನಾಯಕರಾಗಿ ನೇಮಕೊಂಡಿದ್ದಾರೆ.
ಈ ಕುರಿತು ಮಾತನಾಡಿರುವ ಸಿಇಒ ಅವರು, “ಗಾಯದ ಕಾರಣದಿಂದ ಶ್ರೇಯಸ್ ಐಪಿಎಲ್ 2023 ರ ಸೀಸನ್‌ಗೆ ಅಲಭ್ಯರಾಗಿದ್ದು ನಿಜಕ್ಕೂ ದುರದೃಷ್ಟಕರ. ಅವರು ಮತ್ತೆ ನಾಯಕನಾಗಿ ಚುಕ್ಕಾಣಿ ಹಿಡಿದಿರುವುದು ನಮಗೆ ಸಂತೋಷ ತಂದಿದೆ. ಗಾಯದಿಂದ ಚೇತರಿಸಿಕೊಳ್ಳಲು ಅವರು ಶ್ರಮಿಸಿದ ರೀತಿ ಮತ್ತು ಅವರ ಫಾರ್ಮ್ ಪ್ರದರ್ಶನಗೊಂಡಿರುವುದು ಅವರ ಶ್ರಮಕ್ಕೆ ಸಾಕ್ಷಿಯಾಗಿದೆ. ಕಳೆದ ಋತುವಿನಲ್ಲಿ ನಿತೀಶ್ ಅವರು ಶ್ರೇಯಸ್ ಅವರ ಬದಲಿಗೆ ನಾಯಕರಾಗಲು ಒಪ್ಪಿಕೊಂಡರು ಮತ್ತು ಉತ್ತಮ ಕೆಲಸ ಮಾಡಿದ್ದು, ಅವರಿಗೆ ನಾವು ಕೃತಜ್ಞರಾಗಿರುತ್ತೇವೆ. ಉಪನಾಯಕನಾಗಿ ನಿತೀಶ್ ಅವರನ್ನು ನೇಮಕ ಮಾಡಲಾಗಿದ್ದು, ತಂಡಕ್ಕೆ ಮತ್ತು ನಾಯಕನಿಗೆ ಎಲ್ಲಾ ರೀತಿಯಲ್ಲೂ ಬೆಂಬಲಿಸುವುದರಲ್ಲಿ ಸಂದೇಹವಿಲ್ಲ ಎಂದು ನಾವು ನಂಬುತ್ತೇವೆ ಎಂದು ಹೇಳಿದ್ದಾರೆ.
ನಾಯಕನಾಗಿ ಮರು ನೇಮಕಗೊಂಡ ಬೆನ್ನಲ್ಲೇ ಮಾತನಾಡಿರುವ ಶ್ರೇಯಸ್ ಅಯ್ಯರ್, “ಕಳೆದ ಋತುವಿನಲ್ಲಿ ಗಾಯದ ಕಾರಣದಿಂದ ನನ್ನ ಅನುಪಸ್ಥಿತಿ ಸೇರಿದಂತೆ ತಂಡ ಹಲವಾರು ಸವಾಲುಗಳನ್ನು ಎದುರಿಸಿದೆ. ನಿತೀಶ್ ಅವರು ನನ್ನ ಸ್ಥಾನವನ್ನು ತುಂಬಲು ಮಾತ್ರವಲ್ಲದೆ ಅವರ ನಾಯಕತ್ವದಿಂದಲೂ ತಂಡಕ್ಕೆ ಉತ್ತಮ ಕೆಲಸ ಮಾಡಿರುವುದು ಶ್ಲಾಘನೀಯ. ಕೆಕೆಆರ್ ಅವರನ್ನು ವೈಸ್ ಕ್ಯಾಪ್ಟನ್ ಆಗಿ ನೇಮಿಸಿರುವುದು ನನಗೆ ಸಂತೋಷ ತಂದಿದೆ. ಇದು ನಾಯಕತ್ವದ ಗುಣವಿರುವ ಗುಂಪನ್ನು ಬಲಪಡಿಸುವುದರಲ್ಲಿ ಸಂದೇಹವಿಲ್ಲ” ಎಂದು ಅವರು ಹೇಳಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…