ಸಿಡ್ನಿ: ಆಂತರಿಕ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿರುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಅವರು ಎಕ್ಸ್ ಪೋಸ್ಟ್‌ನಲ್ಲಿ ತಮ್ಮ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ.
ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.
ಕಳೆದ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲಲಿ ಅಲೆಕ್ಸ್ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್‌ವರ್ಡ್ ಪಾಯಿಂಟ್‌ನಲ್ಲಿ ಅದ್ಬುತವಾಗಿ ಕ್ಯಾಚ್ ಪಡೆದು ಔಟ್ ಮಾಡಿದ್ದರು. ಆ ಸಂದರ್ಭದಲ್ಲಿ ಶ್ರೇಯಸ್ ಅವರ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ.





