ಕ್ರೀಡೆ

ಶ್ರೇಯಸ್‌-ರಾಹುಲ್‌ ಶತಕ: ಡಚ್ಚರಿಗೆ 411ರನ್‌ ಟಾರ್ಗೆಟ್‌ ನೀಡಿದ ಭಾರತ

ಬೆಂಗಳೂರು : ಶ್ರೇಯಸ್‌ ಅಯ್ಯರ್‌ ಹಾಗೂ ವಿಕೆಟ್‌ ಕೀಪರ್‌ ಕೆ.ಎಲ್‌ ರಾಹುಲ್‌ ಅವರ ಜುಗಲ್‌ ಬಂಧಿ ಶತಕದ ಬಲದಿಂದ ಭಾರತ ತಂಡವು ನೆದರ್ಲ್ಯಾಂಡ್ಸ್‌ ವಿರುದ್ಧ 411ರನ್‌ ಗಳ ಬೃಹತ್‌ ಮೊತ್ತ ಕಲೆಹಾಕಿದೆ.

ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ನೆದರ್‌ಲ್ಯಾಂಡ್ಸ್‌ ನಡುವಿನ ಪಂದ್ಯದಲ್ಲಿ ಭಾರತ ತಂಡವು ಈ ಟೂರ್ನಿಯ ಪಂದ್ವೊಂದರಲ್ಲಿ ಪೇರಿಸಿದ ಬೃಹತ್‌ ಮೊತ್ತ ಇದಾಗಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಮಾಡಿದ ಭಾರತ ತಂಡ ಅಂದುಕೊಂಡಂತೆ ಉತ್ತಮ ಆರಂಭ ಪಡೆಯಿತು, ಆರಂಭಿಕರಾದ ನಾಯಕ ರೋಹಿತ್‌ ಶರ್ಮಾ (61), ಶುಭ್‌ಮನ್‌ ಗಿಲ್‌ (51), ವಿರಾಟ್‌ ಕೊಹ್ಲಿ (51) ತಂಡಕ್ಕೆ ಉತ್ತಮ ಆರಂಭ ನೀಡಿದರು.

ನಂತರ ಒಂದಾದ ಶ್ರೇಯಸ್‌ ಅಯ್ಯರ್‌ ಮತ್ತು ಕೆ.ಎಲ್‌.ರಾಹುಲ್‌ ಕೇವಲ 135 ಎಸೆತಗಳಲ್ಲಿ 208 ರನ್‌ಗಳ ಕಾಣಿಕೆ ನೀಡಿ ತಂಡ ಬೃಹತ್‌ ಮೊತ್ತ ಕಲೆಹಾಕಲು ಸಹಕರಿಸಿದರು.

ಅಯ್ಯರ್‌  ತಾವಾಡಿದ 94 ಎಸೆತಗಳಲ್ಲಿ 10 ಬೌಂಡರಿ ಹಾಗೂ 5 ಸಿಕ್ಸರ್‌ ಸೇರಿ 128 ರನ್‌ ಕಲೆಹಾಕಿದರೇ, ಕೇವಲ 64 ಎಸೆತಗಳನ್ನು ಎದುರಿಸಿದ ಕನ್ನಡಿಗ ರಾಹುಲ್‌ 11 ಬೌಂಡರಿ ಮತ್ತು 4 ಸಿಕ್ಸರ್‌ ನಿಂದ 102 ರನ್‌ ಕಲೆಹಾಕಿದರು.

ಬಾಸ್‌ ಡಿ ಲೀಡೆ 2 ವಿಕೆಟ್‌ ಪಡೆದರೆ, ಲೋಗನ್‌ 10 ಓವರ್‌ಗಳಲ್ಲಿ ಬರೋಬ್ಬರಿ 107 ರನ್‌ ನೀಡಿ ದುಬಾರಿ ಬೌಲರ್‌ ಎನಿಸಿದರು.

andolanait

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

3 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

3 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

4 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

4 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

4 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

5 hours ago