Mysore
23
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಕೊಹ್ಲಿ ದಾಖಲೆ ಮುರಿದ ಶುಭ್​ಮನ್ ಗಿಲ್

ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಸೆಂಚುರಿಸಿ ಸಿಡಿಸಿದ ಶುಭ್​ಮನ್ ಗಿಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಗಿಲ್ 7 ಸಿಕ್ಸ್ ಹಾಗೂ 12 ಫೋರ್​ನೊಂದಿಗೆ ಅಜೇಯ 126 ರನ್​ ಸಿಡಿಸಿದ್ದಾರೆ.. ಇದರೊಂದಿಗೆ ಹಲವು ಟಿ20 ದಾಖಲೆಗಳು ಯುವ ದಾಂಡಿಗನ ಪಾಲಾಯಿತು.

ಅಹಮದಾಬಾದ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಪೂರೈಸುವುದರೊಂದಿಗೆ ಶುಭ್​ಮನ್ ಗಿಲ್ ಟೀಮ್ ಇಂಡಿಯಾ ಪರ ಮೂರು ಮಾದರಿ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ 5ನೇ ಬ್ಯಾಟ್ಸ್​ಮನ್ ಎನಿಸಿಕೊಂಡರು. ಅಜೇಯ 126 ರನ್​ ಬಾರಿಸಿದ ಶುಭ್​ಮನ್ ಗಿಲ್ ಟಿ20 ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸ್ಕೋರ್​ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಅಫ್ಘಾನಿಸ್ತಾನ್ ವಿರುದ್ಧ ಅಜೇಯ 122 ರನ್​ ಬಾರಿಸಿದ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!