ಕ್ರೀಡೆ

ಯೋ ಯೋ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿಯನ್ನೇ ಹಿಂದಿಕ್ಕಿದ ಶುಭ್​ಮನ್ ಗಿಲ್

ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ನಡೆದ ಟೀಮ್ ಇಂಡಿಯಾ ಆಟಗಾರರ ಯೋ ಯೋ​ ಟೆಸ್ಟ್​ನಲ್ಲಿ ಶುಭ್​ಮನ್ ಗಿಲ್ ಅತ್ಯಧಿಕ ಅಂಕಗಳಿಸಿ ಅಗ್ರಸ್ಥಾನ ಅಲಂಕರಿಸಿದ್ದಾರೆ. ಹಲವು ವಿಭಾಗಗಳಲ್ಲಿ ನಡೆಸಲಾದ ಈ ಟೆಸ್ಟ್​ನಲ್ಲಿ ಗಿಲ್ ಒಟ್ಟು 18.7 ಅಂಕಗಳೊಂದಿಗೆ ಮೊದಲ ಸ್ಥಾನ ಅಲಂಕರಿಸಿದರೆ, ನಂತರದ ಸ್ಥಾನದಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಂಡಿದ್ದಾರೆ.

ಕಿಂಗ್ ಕೊಹ್ಲಿಯನ್ನೇ ಹಿಂದಿಕ್ಕಿದ ಪ್ರಿನ್ಸ್​ ಶುಭ್​ಮನ್ :  ಯೋ ಯೋ ಟೆಸ್ಟ್​ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ಪ್ರದರ್ಶನ ನೀಡುತ್ತಾ ಬಂದಿದ್ದಾರೆ. ಫಿಟ್​ನೆಸ್ ವಿಷಯದಲ್ಲಿ ಇದುವರೆಗೆ ಕೊಹ್ಲಿಯೇ ಕಿಂಗ್ ಎನ್ನಲಾಗಿತ್ತು. ಅದರಂತೆ ಈ ಬಾರಿ ಕೂಡ 17.2 ಅಂಕಗಳಿಸುವಲ್ಲಿ ವಿರಾಟ್ ಕೊಹ್ಲಿ ಯಶಸ್ವಿಯಾಗಿದ್ದರು. ಆದರೆ ಶುಭ್​ಮನ್ ಗಿಲ್ ಸರದಿ ಬಂದಾಗ ಕಿಂಗ್ ಕೊಹ್ಲಿಯನ್ನೇ ಹಿಂದಿಕ್ಕಿದರು. ಎಲ್ಲಾ ವಿಭಾಗಗಳಲ್ಲೂ ಅತ್ಯುತ್ತಮ ಪ್ರದರ್ಶನ ನೀಡಿದ ಗಿಲ್ ಒಟ್ಟು 18.7 ಅಂಕಗಳಿಸಿ ಟೀಮ್ ಇಂಡಿಯಾದ ಫಿಟ್​​ನೆಸ್​ ಫ್ರೀಕ್ ಎನಿಸಿಕೊಂಡರು.

ಕಟ್ ಆಫ್ ಲೆವೆಲ್​ : ಯೋ ಯೋ ಟೆಸ್ಟ್​ನಲ್ಲಿ ಉತೀರ್ಣರಾಗಲು ಆಟಗಾರರು ಕನಿಷ್ಠ 16.5 ಅಂಕಗಳನ್ನು ಗಳಿಸಲೇಬೇಕು. ಮೊದಲ ಸುತ್ತಿನಲ್ಲಿ ವಿಫಲರಾದರೆ ಮತ್ತೆ ಅವಕಾಶಗಳನ್ನು ನೀಡಲಾಗುತ್ತದೆ. ಈ ಮೂಲಕ 16.5 ಅಂಕಗಳನ್ನು ಗಳಿಸಿದರೆ ಮಾತ್ರ ಯೋ ಯೋ ಟೆಸ್ಟ್​ನಲ್ಲಿ ಪಾಸ್ ಎಂದು ನಿರ್ಧರಿಸಲಾಗುತ್ತದೆ.

ಬಹುತೇಕ ಆಟಗಾರರು ಪಾಸ್ : ಈ ಬಾರಿಯ ಯೋ ಯೋ ಟೆಸ್ಟ್​ನಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾದ ಬಹುತೇಕ ಆಟಗಾರರು ಪಾಸ್ ಆಗಿದ್ದಾರೆ. ಈ ಪಟ್ಟಿಯಲ್ಲಿ ಅತ್ಯಧಿಕ ಅಂಕಗಳಿಸಿರುವುದು ಶುಭ್​ಮನ್ ಗಿಲ್. ಹಾಗೆಯೇ ಬಹುತೇಕ ಆಟಗಾರರು 16.5 ಹಾಗೂ 17 ರ ನಡುವೆ ಅಂಕಗಳಿಸಿ ತಮ್ಮ ಟಾಸ್ಕ್ ಪೂರೈಸಿದ್ದಾರೆ.​​

ಕೆಎಲ್ ರಾಹುಲ್​​ಗೆ ನೋ ಟೆಸ್ಟ್​ : ಟೀಮ್ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ, ಪ್ರಸಿದ್ಧ್ ಕೃಷ್ಣ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ಏಷ್ಯಾ ಕಪ್‌ ಮೀಸಲು ಆಟಗಾರ) ಮತ್ತು ಕೆಎಲ್ ರಾಹುಲ್ ಅವರು ಯೋ ಯೋ ಟೆಸ್ಟ್​ನಲ್ಲಿ ಭಾಗವಹಿಸಿಲ್ಲ. ಇಲ್ಲಿ ಕೆಲ ಆಟಗಾರರು ಐರ್ಲೆಂಡ್ ಸರಣಿಯಿಂದ ಹಿಂತಿರುಗಿರುವ ಕಾರಣ ಅವರಿಗೆ ವಿನಾಯಿತಿ ನೀಡಲಾಗಿದೆ. ಇತ್ತ ಕೆಎಲ್ ರಾಹುಲ್ ಸಂಪೂರ್ಣ ಫಿಟ್​ ಆಗಿರದ ಕಾರಣ ಅವರು ಯೋ ಯೋ ಟೆಸ್ಟ್​​ನಲ್ಲಿ ಭಾಗವಹಿಸಿಲ್ಲ ಎಂದು ತಿಳಿದು ಬಂದಿದೆ.

ಏನಿದು ಯೋ ಯೋ ಟೆಸ್ಟ್? : ಟೀಮ್ ಇಂಡಿಯಾ ಆಟಗಾರರ ಫಿಟ್​ನೆಸ್​ ಟೆಸ್ಟ್​ ಹಲವು ದೈಹಿಕ ಪರೀಕ್ಷೆಗಳನ್ನು ಮಾಡಲಾಗುತ್ತದೆ. ಇದರಲ್ಲಿ ಮುಖ್ಯವಾಗಿ ಯೋ ಯೋ ಟೆಸ್ಟ್ ಪಾಸಾಗಲೇಬೇಕು. ಇಲ್ಲಿ ಕ್ರಮಬದ್ಧ ಹಾಗೂ ವೇಗವಾಗಿ ಓಡುವ ಮೂಲಕ ತಮ್ಮ ದೈಹಿಕ ಸಾಮರ್ಥ್ಯವನ್ನು ಪರೀಕ್ಷೆಗೆ ಒಳಪಡಿಸಲಾಗುತ್ತದೆ.

ಈ ಫಿಟ್‍ನೆಸ್ ಟೆಸ್ಟ್​ನಲ್ಲಿ 20 ಮೀಟರ್​ ಅಳತೆಯಲ್ಲಿ ಎರಡು ಕೋನಗಳನ್ನು ನೇರವಾಗಿ ಇರಿಸಲಾಗಿರುತ್ತದೆ. ಇಲ್ಲಿ ಆಟಗಾರನು ಓಟವನ್ನು ಆರಂಭಿಸಿ, ಎರಡು ಲೈನ್​​ಗಳಲ್ಲಿಟ್ಟಿರುವ ಕೋನಗಳ ಬೀಪ್ ಧ್ವನಿಯನ್ನು ಅನುಸರಿಸಿ ತನ್ನ ದೂರವನ್ನು ಕ್ರಮಿಸಬೇಕಾಗುತ್ತದೆ.

ಹಾಗೆಯೇ ಈ ಟೆಸ್ಟ್​ನಲ್ಲಿ 8.15 ನಿಮಿಷದೊಳಗೆ 2 ಕಿ. ಮೀಟರ್ ಓಡಬೇಕಾಗುತ್ತದೆ. ಒಂದು ವೇಳೆ ಇದು ಸಾಧ್ಯವಾಗದಿದ್ದರೆ ಫೇಲ್ ಎಂದು ಪರಿಗಣಿಸಲಾಗುತ್ತದೆ. ಇಲ್ಲಿ ಅಂಕಗಳು ತಂತ್ರಾಂಶ ಆಧಾರಿತವಾಗಿದ್ದು, ಹೀಗಾಗಿ ಯಾವುದೇ ಸುತ್ತಿನಲ್ಲಿ ಎಡವಿದರೂ ಮತ್ತೊಮ್ಮೆ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಹೀಗಾಗಿಯೇ ಯೋ ಯೋ ಟೆಸ್ಟ್​ ಪಾಸಾಗುವುದು ಟೀಮ್ ಇಂಡಿಯಾ ಆಟಗಾರರ ಪಾಲಿಗೆ ಅಗ್ನಿ ಪರೀಕ್ಷೆ ಎಂದು ವಿಶ್ಲೇಷಿಸಲಾಗುತ್ತಿದೆ.

andolanait

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

7 hours ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

8 hours ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

9 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

9 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

9 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

9 hours ago