ಕ್ರೀಡೆ

ಶುಭಮನ್ ಗಿಲ್ ಮುಂದಿನ ದಶಕಗಳಲ್ಲಿ ಕ್ರಿಕೆಟ್ ಜಗತ್ತನ್ನು ಆಳಲಿದ್ದಾರೆ: ಹೇಡನ್

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ಯುವ ಬ್ಯಾಟರ್ ಶುಭ್‌ಮನ್‌ ಗಿಲ್ ಅವರು ಅತ್ಯಂತ ಪ್ರತಿಭಾನ್ವಿತ ಆಟಗಾರರಾಗಿದ್ದು, ದೊಡ್ಡ ಮೊತ್ತದ ರನ್ನುಗಳನ್ನು ಕಲೆ ಹಾಕುವ ಮೂಲಕ ಮುಂದಿನ ದಶಕಗಳಲ್ಲಿ ಕ್ರಿಕೆಟ್‌ ಜಗತ್ತಿನಲ್ಲಿ ಮೆರೆಯಲಿದ್ದಾರೆ ಎಂದು ಆಸ್ಟ್ರೇಲಿಯದ ಹೆಸರಾಂತ ಮಾಜಿ ಕ್ರಿಕೆಟಿಗ ಮ್ಯಾಥ್ಯು ಹೇಡನ್ ಅವರು ಅಭಿಪ್ರಾಯಪಟ್ಟರು.

ಕೇವಲ 23 ವರ್ಷದ ಗಿಲ್ ಅವರು ಟೆಸ್ಟ್‌ನಲ್ಲಿ 2 ಶತಕ, ಏಕದಿನ 4, ಹಾಗೂ ಟಿ20ಯಲ್ಲಿ 1 ಶತಕಗಳನ್ನು ದಾಖಲಿಸಿದ್ದಾರೆ.

ಗುರುವಾರ ಇಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ ಆರು ವಿಕೆಟ್‌ಗಳಿಂದ ಗಳಿಸಿದ ಜಯದಲ್ಲಿ ಗಿಲ್ ಮುಖ್ಯ ಪಾತ್ರವಹಿಸಿದರು. ಅವರು 49 ಎಸೆತಗಳಲ್ಲಿ 67 ರನ್ ಗಳಿಸುವುದರ ಮೂಲಕ ಬ್ಯಾಟಿಂಗ್ ಕ್ಲಾಸ್ ತೋರಿಸಿದರು.

‘ಗಿಲ್ ಅವರು ಆಟದಲ್ಲಿ ನಿಯಂತ್ರಣ ಸಾಧಿಸಿ ಆಡುವ ಸಾಮರ್ಥ್ಯವು ನನ್ನನ್ನು ಆಕರ್ಷಿಸಿದೆ‘ ಎಂದೂ ಹೇಡನ್ ಹೇಳಿದರು.

‘ಪಂಜಾಬ್ ಕಿಂಗ್ಸ್‌ನ ಶಿಸ್ತುಬದ್ಧ ಬೌಲಿಂಗ್ ದಾಳಿ ಸಂಘಟಿಸಿದರೂ ಗುಜರಾತ್ ಟೈಟನ್ಸ್ 154 ರನ್ ಬೆನ್ನಟ್ಟುವಲ್ಲಿ ಸಫಲವಾಯಿತು. ಟೈಟನ್ಸ್‌ನ ಬ್ಯಾಟಿಂಗ್ ಜವಾಬ್ದಾರಿಯನ್ನು ತೆಗೆದುಕೊಂಡು ಮತ್ತು ಆಳವಾಗಿ ಬ್ಯಾಟ್ ಮಾಡುವಲು ಶುಭಮನ್ ಗಿಲ್ ಅವರೇ ಬೇಕಾಗಿದ್ದರು. ಅವರು ಆಡಿದ ಕೆಲವು ಹೊಡೆತಗಳು ಕಣ್ಣಿಗೆ ಖುಷಿ ಕೊಟ್ಟವು. ಅಂಥ ಕ್ಲಾಸ್ ಆಟಗಾರ ಅವರು. ಮುಂದಿನ ಒಂದು ದಶಕದವರೆಗೆ ವಿಶ್ವ ಕ್ರಿಕೆಟ್‌ನಲ್ಲಿ ಗಿಲ್ ಪ್ರಾಬಲ್ಯ ಸಾಧಿಸಲಿದ್ದಾರೆ‘ ಹೇಡನ್ ವಿಶ್ವಾಸ ವ್ಯಕ್ತಪಡಿಸಿದರು.

ಗುರುವಾರ ಪಂಜಾಬ್ ಕಿಂಗ್ಸ್ ವಿರುದ್ಧ ಗಿಲ್ ದಾಖಲಿಸಿದ 67 ರನ್‌ಗಳಲ್ಲಿ 7 ಬೌಂಡರಿ ಹಾಗೂ 1 ಸಿಕ್ಸ್ ಕೂಡಿದ್ದವು.

andolanait

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

4 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

4 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

4 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

14 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

16 hours ago