ಮುಂಬಯಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃ ತಿ ಮಂಧನಾ ತಮ್ಮಆಟ ಮತ್ತು ಸೌಂದರ್ಯ ಎರಡಕ್ಕೂ ಹೆಸರಾದವರು. ಈ ಬಾರಿ ಉತ್ತಮ ನಿರ್ಧಾರವೊಂದಕ್ಕಾಗಿ ದೇಶವಾಸಿಗಳೆಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ.
ಸ್ಮೃತಿ ಮಂಧನಾ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಆಗಿ ಕ್ರಿಕೆಟ್ ಅಂಗಳದಲ್ಲಿ ಮಿಂಚಿದರೆ ಅಂಗಳದ ಒಳಗೂ, ಹೊರಗೂ ತಮ್ಮ ಸೌಂದರ್ಯದಿಂದ ಕ್ರಿಕೆಟ್ ಪ್ರಿಯರ ಗಮನ ಸೆಳೆಯುತ್ತಾರೆ.
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಅವರು ಬಳಿಕ ದಿ ಹಂಡ್ರೆಡ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಕಳೆದ ಫೆಬ್ರವರಿಯಿಂದ ಅವರು ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ.
ಇದೀಗ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಗೆ ಸಹಜವಾಗಿಯೇ ಅವರು ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಗೆ ಮುನ್ನ ತಮಗೆ ಬಂದಿದ್ದ ದೊಡ್ಡ ಅವಕಾಶವೊಂದನ್ನು ಅವರು ತಿರಸ್ಕರಿಸಿದ್ದಾರೆ. ಅವರ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಗ್ ಬ್ಯಾಷ್ ಲೀಗ್ನಲ್ಲಿ ಪಾಲ್ಗೊಳ್ಳಲು ಮಂಧಾನ ಅವರಿಗೆ ದೊಡ್ಡ ಮೊತ್ತದ ಆಫರ್ ಬಂದಿತ್ತು. ಆದರೆ ಟೀಂ ಇಂಡಿಯಾಗೆ ಆಡುವ ಸಲುವಾಗಿ ಈ ಆಫರ್ ಅನ್ನು ತಿರಸ್ಕರಿಸಿದ್ದಾರೆ. ಭಾರತ ತಂಡದ ಮುಂದಿನ ಸರಣಿಗಳಲ್ಲಿ ಭಾಗವಹಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ಮಂಧನಾ ಅವರು ಹೇಳಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿ ಬಿಗ್ ಬ್ಯಾಷ್ ಲೀಗ್ನಿಂದ ಹಿಂದೆ ಸರಿದಿದ್ದಾರೆ.
ಭಾರತಕ್ಕಾಗಿ ಆಡುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ ಎಂದು ಸ್ಮೃತಿ ಮಂಧನಾ ಹೇಳಿದ್ದಾರೆ. ಇಂಗ್ಲೆಂಡ್ ಸರಣಿ ಬಳಿಕ ಫಿಟ್ನೆಸ್ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದು, 100 ಪ್ರತಿಶತದಷ್ಟು ಭಾರತಕ್ಕಾಗಿ ಆಡಲು ನಾನು ಮೊದಲು ಆದ್ಯತೆ ನೀಡುತ್ತೇನೆ ಎಂದವರು ತಿಳಿಸಿದ್ದಾರೆ.
ಕ್ರಿಕೆಟ್ ರಂಗದಲ್ಲಿ ತೋರಿದ ಅದ್ಭುತ ಪ್ರದರ್ಶನಕ್ಕಾಗಿ ಮಂಧಾನ ಅವರು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿದ ಭಾರತದ ಪ್ರಥಮ ಆಟಗಾರ್ತಿ ಸ್ಮೃತಿ ಮಂದಾನ. ಮಹಾರಾಷ್ಟ್ರ ತಂಡದ ಸದಸ್ಯೆಯಾಗಿ ಸ್ಮೃತಿ ಗುಜರಾತ್ ವಿರುದ್ಧ 150 ಎಸೆತಗಳಲ್ಲಿ 224 ರನ್ ಚಚ್ಚಿದ್ದರು.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…