ಕ್ರೀಡೆ

ದೊಡ್ಡ ಮೊತ್ತ ತಿರಸ್ಕರಿಸಿ ದೇಶಕ್ಕಾಗಿ ಆಡುವೆ ಎಂದ ಸ್ಮೃತಿ ಮಂದಾನ

ಮುಂಬಯಿ: ಭಾರತ ಮಹಿಳಾ ಕ್ರಿಕೆಟ್ ತಂಡದ ಆರಂಭಿಕ ಆಟಗಾರ್ತಿ ಸ್ಮೃ ತಿ ಮಂಧನಾ ತಮ್ಮಆಟ ಮತ್ತು ಸೌಂದರ್ಯ ಎರಡಕ್ಕೂ ಹೆಸರಾದವರು. ಈ ಬಾರಿ ಉತ್ತಮ ನಿರ್ಧಾರವೊಂದಕ್ಕಾಗಿ ದೇಶವಾಸಿಗಳೆಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. 

ಸ್ಮೃತಿ ಮಂಧನಾ ಟೀಂ ಇಂಡಿಯಾದ ಸ್ಟಾರ್ ಬ್ಯಾಟರ್ ಆಗಿ ಕ್ರಿಕೆಟ್‌ ಅಂಗಳದಲ್ಲಿ ಮಿಂಚಿದರೆ ಅಂಗಳದ ಒಳಗೂ, ಹೊರಗೂ ತಮ್ಮ ಸೌಂದರ್ಯದಿಂದ ಕ್ರಿಕೆಟ್‌ ಪ್ರಿಯರ ಗಮನ ಸೆಳೆಯುತ್ತಾರೆ.

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಿಂಚಿದ್ದ ಮಂಧನಾ ಅವರು ಬಳಿಕ ದಿ ಹಂಡ್ರೆಡ್ ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದರು. ಕಳೆದ ಫೆಬ್ರವರಿಯಿಂದ ಅವರು ನಿರಂತರವಾಗಿ ಕ್ರಿಕೆಟ್ ಆಡುತ್ತಿದ್ದಾರೆ.

ಇದೀಗ ಆತಿಥೇಯ ಇಂಗ್ಲೆಂಡ್ ವಿರುದ್ಧದ ಟಿ 20 ಸರಣಿಗೆ ಸಹಜವಾಗಿಯೇ ಅವರು ಆಯ್ಕೆಯಾಗಿದ್ದಾರೆ. ಆದರೆ ಈ ಆಯ್ಕೆಗೆ ಮುನ್ನ ತಮಗೆ ಬಂದಿದ್ದ ದೊಡ್ಡ ಅವಕಾಶವೊಂದನ್ನು ಅವರು ತಿರಸ್ಕರಿಸಿದ್ದಾರೆ. ಅವರ ನಿರ್ಧಾರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಬಿಗ್ ಬ್ಯಾಷ್ ಲೀಗ್ನಲ್ಲಿ ಪಾಲ್ಗೊಳ್ಳಲು ಮಂಧಾನ ಅವರಿಗೆ ದೊಡ್ಡ ಮೊತ್ತದ ಆಫರ್ ಬಂದಿತ್ತು. ಆದರೆ ಟೀಂ ಇಂಡಿಯಾಗೆ ಆಡುವ ಸಲುವಾಗಿ ಈ ಆಫರ್ ಅನ್ನು ತಿರಸ್ಕರಿಸಿದ್ದಾರೆ. ಭಾರತ ತಂಡದ ಮುಂದಿನ ಸರಣಿಗಳಲ್ಲಿ ಭಾಗವಹಿಸುವ ಸಲುವಾಗಿ ಈ ನಿರ್ಧಾರ ಕೈಗೊಂಡಿದ್ದಾಗಿ ಮಂಧನಾ ಅವರು ಹೇಳಿಕೊಂಡಿದ್ದಾರೆ. ಇದೇ ಕಾರಣಕ್ಕಾಗಿ ಬಿಗ್ ಬ್ಯಾಷ್ ಲೀಗ್ನಿಂದ ಹಿಂದೆ ಸರಿದಿದ್ದಾರೆ.

ಭಾರತಕ್ಕಾಗಿ ಆಡುವ ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ನಾನು ಬಯಸುವುದಿಲ್ಲ ಎಂದು ಸ್ಮೃತಿ ಮಂಧನಾ ಹೇಳಿದ್ದಾರೆ. ಇಂಗ್ಲೆಂಡ್ ಸರಣಿ ಬಳಿಕ ಫಿಟ್ನೆಸ್ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದು, 100 ಪ್ರತಿಶತದಷ್ಟು ಭಾರತಕ್ಕಾಗಿ ಆಡಲು ನಾನು ಮೊದಲು ಆದ್ಯತೆ ನೀಡುತ್ತೇನೆ ಎಂದವರು ತಿಳಿಸಿದ್ದಾರೆ.

ಕ್ರಿಕೆಟ್ ರಂಗದಲ್ಲಿ ತೋರಿದ ಅದ್ಭುತ ಪ್ರದರ್ಶನಕ್ಕಾಗಿ ಮಂಧಾನ ಅವರು ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಸಿಡಿಸಿದ ಭಾರತದ ಪ್ರಥಮ ಆಟಗಾರ್ತಿ ಸ್ಮೃತಿ ಮಂದಾನ. ಮಹಾರಾಷ್ಟ್ರ ತಂಡದ ಸದಸ್ಯೆಯಾಗಿ ಸ್ಮೃತಿ ಗುಜರಾತ್ ವಿರುದ್ಧ 150 ಎಸೆತಗಳಲ್ಲಿ 224 ರನ್ ಚಚ್ಚಿದ್ದರು.

andolana

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

3 hours ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

3 hours ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

3 hours ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

3 hours ago